Odisha Train Accident: ಹಲವು ರೈಲುಗಳ ಓಡಾಟ ರದ್ದು!
Odisha Train Accident: ಕೋರಮಂಡಲ್ ಎಕ್ಸ್‌ಪ್ರೆಸ್ ಭೀಕರ ಅಪಘಾತದ ನಂತರ ಸ್ಥಳದಲ್ಲಿ ಸೂಕ್ಷ್ಮ ಪರಿಸ್ಥಿತಿ ಉಂಟಾಗಿದೆ. ಹಳಿ ಮೇಲೆ ರಕ್ಷಣಾ ಕಾರ್ಯ ಪ್ರಗತಿಯಲ್ಲಿರುವ ಕಾರಣ ಹತ್ತಾರು ರೈಲು ಓಡಾಟ ರದ್ದು ಮಾಡಲಾಗಿದೆ. ಒಡಿಶಾದ ಬಾಲಸೋರ್ ಪ್ರದೇಶದಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ 50 ಜನ ಮೃತಪಟ್ಟು, 179 ಪ್ರಯಾಣಿಕರು ಗಾಯಗೊಂಡಿದ್ದಾರೆ.
ಹೌದು, ಅಪಘಾತಕ್ಕೆ ತುತ್ತಾದ ರೈಲು ಪ.ಬಂಗಾಳದ ಶಾಲಿಮಾರ್ ನಿಲ್ದಾಣದಿಂದ ಹೊರಟು ಚೆನ್ನೈನ ರಾಮಚಂದ್ರನ್ ಸೆಂಟ್ರಲ್ ರೈಲು ನಿಲ್ದಾಣ ಸೇರಬೇಕಿತ್ತು. ರೈಲು ಮಧ್ಯಾಹ್ನ 3.30ಕ್ಕೆ ಪ್ರಯಾಣ ಪ್ರಾರಂಭಿಸಿದ್ದು ಸಂಜೆ 6.30ಕ್ಕೆ ಬಾಲಸೋರ್ ನಿಲ್ದಾಣ ತಲುಪಿತು. ಹಾಗೇ ಇದು ನಾಳೆ ಸಂಜೆ 4.50ಕ್ಕೆ ಚೆನ್ನೈ ತಲುಪಬೇಕಿತ್ತು, ಅಷ್ಟರೊಳಗೆ ಈ ಭೀಕರ ಘಟನೆ ಸಂಭವಿಸಿದೆ. ಹೀಗಾಗಿ ಒಡಿಶಾದಲ್ಲಿ ಟ್ರೈನ್ ಟ್ರಾಫಿಕ್ ಉಂಟಾಗಿ ಹಲವು ರೈಲುಗಳ ಓಡಾಟ ಕ್ಯಾನ್ಸಲ್ ಆಗಿದೆ.

ಯಾವ ಯಾವ ರೈಲು ಕ್ಯಾನ್ಸಲ್?
ಶಾಲಿಮಾರ್ & ಚೆನ್ನೈ ಕೋರಮಂಡಲ್ ಎಕ್ಸ್‌ಪ್ರೆಸ್ ರೈಲು ಒಡಿಶಾದ (Odisha) ಬಾಲಸೋರ್ ಜಿಲ್ಲೆಯ ಬಹನಾಗಾ ರೈಲು ನಿಲ್ದಾಣ ಸಮೀಪ ಗೂಡ್ಸ್ ರೈಲಿಗೆ ಗುದ್ದಿದೆ. ಆಗ ಕೋರಮಂಡಲ್ ಎಕ್ಸ್‌ಪ್ರೆಸ್ ರೈಲಿನ (Coromandel Express Train) 8 ಬೋಗಿ ಹಳಿತಪ್ಪಿವೆ. ಹೀಗಾಗಿ ಅಲ್ಲಿ ಪರಿಹಾರ ಕಾರ್ಯಚರಣೆ ನಡೆಯುತ್ತಿದೆ. ಈ ಕಾರಣಕ್ಕೆ ಹಲವು ರೈಲುಗಳ ಓಡಾಟ ಕ್ಯಾನ್ಸಲ್ ಮಾಡಲಾಗಿದ್ದು, ಆ ಬಗ್ಗೆ ಮಾಹಿತಿ ಇಲ್ಲಿದೆ.
ಕ್ಯಾನ್ಸಲ್ ಆಗಿರುವ ರೈಲುಗಳು:
1. 12837 (HWH-PURI SUPERFAST EXPICO-02.06.2023 CANCELLED.
2. 12863 (HWH-SMVB SUF EXPRESS) JCO-02.06.2023 CANCELLED.
3. 12839 (HWH-MAS MAIL) JCO-02.06.2023 CANCELLED.
4. 12895(SHM-PURI S/F) JCO-02.06.2023 CANCELLED.
5. 20831(SHM-SBP EXPRESS) JCO-02.06.2023 CANCELLED.
6. 02837 (SRC-PURI EXPRESS) JCO -02.06.2023 CANCELLED
7. Goa to Mumbai Vande Bharat Express
Distressed by the train accident in Odisha. In this hour of grief, my thoughts are with the bereaved families. May the injured recover soon. Spoke to Railway Minister @AshwiniVaishnaw and took stock of the situation. Rescue ops are underway at the site of the mishap and all…
— Narendra Modi (@narendramodi) June 2, 2023
ಸಂತ್ರಸ್ತ ಕುಟುಂಬಕ್ಕೆ ಪ್ರಧಾನಿ ಮೋದಿ ಅಭಯ
ಇಡೀ ದೇಶಕ್ಕೆ ಒಡಿಶಾ ರೈಲು ಅಪಘಾತದ ಸುದ್ದಿ ಸಿಡಿಲಿನಂತೆ ಅಪ್ಪಳಿಸಿದೆ. ಹಾಗೇ ಪ್ರಧಾನಿ ಮೋದಿ ಅವರು ಅಪಘಾತದ ಕುರಿತು ಟ್ವೀಟ್ ಮಾಡಿ ಸಂತಾಪ ಸೂಚಿಸಿದ್ದಾರೆ. 'ಒಡಿಶಾದಲ್ಲಿ ಸಂಭವಿಸಿದ ರೈಲು ಅಪಘಾತದಿಂದ ಸಂಕಟವಾಗಿದೆ. ಈ ದುಃಖದ ಸಮಯದಲ್ಲಿ, ಸಂತ್ರಸ್ತ ಕುಟುಂಬಗಳಿಗೆ ಧೈರ್ಯ ಹೇಳಲು ಬಯಸುವೆ. ಗಾಯಾಳುಗಳು ಬೇಗ ಚೇತರಿಸಿಕೊಳ್ಳಲಿ. ರೈಲ್ವೆ ಸಚಿವರ ಜತೆ ಮಾತನಾಡಿದ್ದೇನೆ ಹಾಗೂ ಪರಿಸ್ಥಿತಿಯ ಕುರಿತು ಮಾಹಿತಿ ಪಡೆದಿದ್ದೇನೆ. ದುರಂತದ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿದ್ದು, ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲ ನೆರವು ನೀಡಲಾಗುತ್ತಿದೆ' ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.
ರೈಲ್ವೆ ಸಚಿವರಿಂದ ಪರಿಹಾರ ಘೋಷಣೆ
ಭೀಕರ ರೈಲು ಅಪಘಾತದ ಬಗ್ಗೆ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಟ್ವೀಟ್ ಮಾಡಿ ಸಂತಾಪ ಸೂಚಿಸಿದ್ದಾರೆ. ಅಲ್ಲದೆ ಪರಿಹಾರ ಕಾರ್ಯಾಚರಣೆ ಬಗ್ಗೆ ಸಚಿವ ಅಶ್ವಿನಿ ವೈಷ್ಣವ್ ಮಾಹಿತಿ ನೀಡಿದ್ದಾರೆ. ಮತ್ತೊಂದು ಕಡೆ ಮೃತರು ಹಾಗೂ ಅಪಘಾತದಲ್ಲಿ ಗಾಯಗೊಂಡ ರೈಲು ಪ್ರಯಾಣಿಕರಿಗೆ ಪರಿಹಾರ ಘೋಷಣೆ ಮಾಡಲಾಗಿದೆ. ಕೋರಮಂಡಲ್ ಎಕ್ಸ್‌ಪ್ರೆಸ್ ರೈಲು ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ 10 ಲಕ್ಷ ಹಾಗೂ ಗಂಭೀರವಾಗಿ ಗಾಯಗೊಂಡ ಪ್ರಯಾಣಿಕರಿಗೆ 2 ಲಕ್ಷ ರೂಪಾಯಿ ಸೇರಿ ಸಣ್ಣಪುಟ್ಟ ಗಾಯಗಳೊಂದಿಗೆ ನರಳುತ್ತಿರುವ ಇತರ ಪ್ರಯಾಣಿಕರಿಗೆ 50 ಸಾವಿರ ರೂಪಾಯಿ ಪರಿಹಾರ ಘೋಷಿಸಲಾಗಿದೆ.
Ex-gratia compensation to the victims of this unfortunate train accident in Odisha;
— Ashwini Vaishnaw (@AshwiniVaishnaw) June 2, 2023
₹10 Lakh in case of death,
₹2 Lakh towards grievous and ₹50,000 for minor injuries.
ದೇಶದ ಇತಿಹಾಸದಲ್ಲೇ ಭೀಕರ ಅಪಘಾತ
ಒಡಿಶಾದ ವಿಶೇಷ ಪರಿಹಾರ ಆಯುಕ್ತರ ಕಚೇರಿ ಸಿಬ್ಬಂದಿ ಸೇರಿದಂತೆ ರಕ್ಷಣಾ ಸಿಬ್ಬಂದಿ ಅಪಘಾತ ಸಂಭವಿಸಿರುವ ಸ್ಥಳಕ್ಕೆ ತೆರಳಿದ್ದಾರೆ. ಗಾಯಗೊಂಡ ಪ್ರಯಾಣಿಕರನ್ನ ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ. ಆದರೆ ಹಲವು ಬೋಗಿಗಳು ಹಳತಪ್ಪಿ ಬಿದ್ದಿರುವ ಪರಿಣಾಮ ಸಾವಿನ ಸಂಖ್ಯೆ ಹೆಚ್ಚಾಗುವ ಸಂಭವವೂ ಇದೆ. ಹೀಗಾಗಿ ರಕ್ಷಣಾ ಕಾರ್ಯಾಚರಣೆಗೆ ಅಗತ್ಯ ಇರುವ ಎಲ್ಲ ಸೌಲಭ್ಯ ರೈಲ್ವೆ ಇಲಾಖೆ ಒದಗಿಸಿದೆ. ದೇಶದ ಇತಿಹಾಸದಲ್ಲೇ ನಡೆದಿರುವ ಭೀಕರ ರೈಲು ಅಪಘಾತಗಳಲ್ಲಿ ಇದೂ ಒಂದಾಗಿದೆ ಎನ್ನಲಾಗುತ್ತಿದೆ.
ಕೋಚ್ ಪಲ್ಟಿ, ಪ್ರಯಾಣಿಕರ ಗತಿ ಏನು?
ಅವರೆಲ್ಲಾ ಅಂದುಕೊಂಡ ಸ್ಥಳಕ್ಕೆ ಹೋಗಬೇಕು ಅಂತಾ ರೈಲು ಹತ್ತಿದ್ದರು. ಹಾಯಾಗಿ ತಮ್ಮ ಜರ್ನಿ ಎಂಜಾಯ್ ಮಾಡುತ್ತಿದ್ದರು. ಆದರೆ ಕತ್ತಲೆ ಒಳಗೆ ದಿಢೀರ್ ಆಘಾತವು ಎದುರಾಗಿದ್ದು, ಗೂಡ್ಸ್ ರೈಲಿಗೆ ಕೋರಮಂಡಲ್ ಎಕ್ಸ್‌ಪ್ರೆಸ್ ರೈಲು ವೇಗವಾಗಿ ಬಂದು ಡಿಕ್ಕಿ ಹೊಡೆದಿದೆ. ಹೀಗೆ ಕ್ಷಣಮಾತ್ರದಲ್ಲಿ ನಡೆದ ಘಟನೆ ಪರಿಣಾಮ ಎಕ್ಸ್‌ಪ್ರೆಸ್ ರೈಲಿನ ಕೋಚ್ ಅಂದರೆ ಬೋಗಿಗಳು ಪಲ್ಟಿಯಾಗಿ ಬಿದ್ದಿವೆ. ಹೀಗೆ ಪಲ್ಟಿಯಾದ ಕೋಚ್‌ಗಳಲ್ಲಿ ಹೆಚ್ಚಿನ ಪ್ರಯಾಣಿಕರು ಸಿಲುಕಿ ಮೃತಪಟ್ಟಿರುವ ಸಾಧ್ಯತೆ ಇದೆ.

ಒಂದೇ ಹಳಿಗೆ ಬಂದ ರೈಲುಗಳು?
ಅಪಾಘಾತದಲ್ಲಿ ಮೃತಪಟ್ಟಿರುವ ಪ್ರಯಾಣಿಕರ ಸಂಖ್ಯೆ ಇನ್ನೂ ದೃಢವಾಗಿಲ್ಲ. ಆದರೆ ಈ ಹಂತಕ್ಕೆ ಸುಮಾರು 50ಕ್ಕೂ ಹೆಚ್ಚು ಜನ ಮೃತಪಟ್ಟು 179 ಜನರಿಗೆ ಗಾಯವಾಗಿದೆ ಎಂದು ಹೇಳಲಾಗುತ್ತಿದೆ. ಇನ್ನೂ ಹಲವು ಬೋಗಿಗಳಲ್ಲಿ ಪ್ರಯಾಣಿಕರ ರಕ್ಷಣಾ ಕಾರ್ಯ ಕೂಡ ಭರದಿಂದ ಸಾಗಿದ್ದು, ಗಾಯಾಳು ಹಾಗೂ ಮೃತರ ಸಂಖ್ಯೆ ಹೆಚ್ಚುವ ಸಾಧ್ಯತೆ ಇದೆ. ಈ ಘಟನೆಗೆ ಎರಡೂ ರೈಲುಗಳು ಒಂದೇ ಮಾರ್ಗದಲ್ಲಿ ಬಂದಿದ್ದರಿಂದ ಅಪಘಾತ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ಸಿಗ್ನಲ್ ವೈಫಲ್ಯದಿಂದ ಎರಡೂ ರೈಲುಗಳು ಒಂದೇ ಹಳಿಯಲ್ಲಿ ಬಂದು ಡಿಕ್ಕಿ ಹೊಡೆದಿರುವ ಸಾಧ್ಯತೆ ಇದೆ ಎನ್ನಲಾಗಿದೆ.
ಅಪಘಾತಕ್ಕೆ ಒಳಗಾದ ರೈಲು ಪ.ಬಂಗಾಳದ ಶಾಲಿಮಾರ್ ನಿಲ್ದಾಣದಿಂದ ಹೊರಟು ಚೆನ್ನೈನ ರಾಮಚಂದ್ರನ್ ಸೆಂಟ್ರಲ್ ರೈಲು ನಿಲ್ದಾಣ ಸೇರುತ್ತದೆ. ರೈಲು ಮಧ್ಯಾಹ್ನ 3.30ಕ್ಕೆ ಪ್ರಯಾಣ ಪ್ರಾರಂಭಿಸಿದ್ದು ಸಂಜೆ 6.30ಕ್ಕೆ ಬಾಲಸೋರ್ ನಿಲ್ದಾಣ ತಲುಪಿತು ಅಂತಾ ಹೇಳಲಾಗಿದೆ. ಹಾಗೇ ಇದು ನಾಳೆ ಸಂಜೆ 4.50ಕ್ಕೆ ಚೆನ್ನೈ ತಲುಪಬೇಕಿತ್ತು, ಆದರೆ ಅಷ್ಟರೊಳಗೆ ಈ ಭೀಕರ ಘಟನೆ ಸಂಭವಿಸಿದೆ. ಇನ್ನು ಸರ್ಕಾರದ ಸಹಾಯವಾಣಿಗೆ ಈ ಸಂಖ್ಯೆ ಬಳಸಬಹುದು: 033-26382217, 8972073925, 67822 62286, 9332392339, 8249591559, 7978418322, 9903370746
ಒಟ್ನಲ್ಲಿ ಭೀಕರ ರೈಲು ಅಪಘಾತದ ಪರಿಣಾಮ ನೂರಾರು ಕುಟುಂಬಗಳು ದುಃಖದಲ್ಲಿ ಮುಳುಗಿವೆ. ದೇಶದಲ್ಲಿ ಮಾತ್ರವಲ್ಲ ಜಗತ್ತಿನಾದ್ಯಂತ ಒಡಿಶಾ ರೈಲು ಅಪಘಾತದ ಬಗ್ಗೆ ಸುದ್ದಿಯಾಗಿದೆ. ರೈಲ್ವೆ ಇಲಾಖೆ ಕೂಡ ಪರಿಹಾರ ಕಾರ್ಯಾಚರಣೆ ನಡೆಸುತ್ತಿದ್ದು, ಮೃತರು ಹಾಗೂ ಗಾಯಗೊಂಡವರ ಕುಟುಂಬಕ್ಕೆ ಪರಿಹಾರ ಘೋಷಣೆ ಮಾಡಿದೆ. ಇದರ ಜೊತೆಗೆ ಘಟನೆ ಬಗ್ಗೆಯೂ ತನಿಖೆ ನಡೆಯಲಿದ್ದು, ಅಪಘಾತದ ಅಸಲಿ ಕಾರಣ ಹೊರಬೀಳಲಿದೆ.












Click it and Unblock the Notifications