ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ನಾಗಾಲ್ಯಾಂಡ್; ಗುಂಡಿನ ದಾಳಿಯಲ್ಲಿ ಹಲವು ಗ್ರಾಮಸ್ಥರು ಸಾವು

|
Google Oneindia Kannada News

ಕೋಹಿಮಾ, ಡಿಸೆಂಬರ್ 05; ಮಯನ್ಮಾರ್ ಗಡಿಗೆ ಹೊಂದಿಕೊಂಡಿರುವ ನಾಗಾಲ್ಯಾಂಡ್ನ ಮೋನ್ ಜಿಲ್ಲೆಯ ಓಟಿಂಗ್ ಗ್ರಾಮದಲ್ಲಿ ಗುಂಡಿನ ದಾಳಿ ನಡೆದಿದೆ. ಒಬ್ಬ ಯೋಧ ಸೇರಿದಂತೆ ಹಲವು ಗ್ರಾಮಸ್ಥರು ಮೃತಪಟ್ಟಿದ್ದಾರೆ.

ಶನಿವಾರ ತಡರಾತ್ರಿ ಈ ಗುಂಡಿನ ದಾಳಿ ನಡೆಸಿದೆ. ಘಟನಾ ಸ್ಥಳದಿಂದ ಇದುವರೆಗೂ 6 ಶವಗಳನ್ನು ವಶಕ್ಕೆ ಪಡೆಯಲಾಗಿದೆ. ಗುಂಡಿನ ದಾಳಿಯಲ್ಲಿ ಮೃತಪಟ್ಟವರ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ.

ಶಂಕರ್ ಬಿದರಿ ಇ ಮೇಲ್ ಹ್ಯಾಕ್: ನಾಗಾಲ್ಯಾಂಡ್ ಮೂಲದ 3 ಬಂಧನಶಂಕರ್ ಬಿದರಿ ಇ ಮೇಲ್ ಹ್ಯಾಕ್: ನಾಗಾಲ್ಯಾಂಡ್ ಮೂಲದ 3 ಬಂಧನ

ಓಟಿಂಗ್ ಗ್ರಾಮದ ಹಲವು ಜನರ ಗುಂಪು ಪಿಕಪ್ ವಾಹನದಲ್ಲಿ ಮನೆಗೆ ಮರಳುವಾಗ ಗುಂಡಿನ ದಾಳಿ ನಡೆದಿದೆ. ಈ ದಾಳಿಯಿಂದ ಆಕ್ರೋಶಗೊಂಡ ಸ್ಥಳೀಯರು ಸೇನೆಯ ಎರಡು ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ.

ಅಸ್ಸಾಂ-ನಾಗಾಲ್ಯಾಂಡ್ ಗಡಿಯಲ್ಲಿ 25 ಕೋಟಿ ಮೌಲ್ಯದ ಹೆರಾಯಿನ್ ವಶಅಸ್ಸಾಂ-ನಾಗಾಲ್ಯಾಂಡ್ ಗಡಿಯಲ್ಲಿ 25 ಕೋಟಿ ಮೌಲ್ಯದ ಹೆರಾಯಿನ್ ವಶ

Several Villagers Killed In Mon District Of Nagaland

ಓಟಿಂಗ್ ಗ್ರಾಮದ ಸ್ವಯಂ ಸೇವಕರ ತಂಡ ಗ್ರಾಮಸ್ಥರು ಮನೆಗೆ ವಾಪಸ್ ಆಗಿಲ್ಲ ಎಂದು ಹುಡುಕಿಕೊಂಡು ಹೊರಟಾಗ ಪಿಕಪ್ ವಾಹನದಲ್ಲಿ ಶವಗಳು ಪತ್ತೆಯಾಗಿವೆ. ಯೋಧರ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಒಬ್ಬ ಯೋಧ ಸಹ ಮೃತಪಟ್ಟಿರುವ ಮಾಹಿತಿ ಸಿಕ್ಕಿದೆ.

ನಾಗಾಲ್ಯಾಂಡ್ ಮುಖ್ಯಮಂತ್ರಿ ನೆಫಿಯು ರಿಯೊ ಘಟನೆ ಬಗ್ಗೆ ಪ್ರತಿಕ್ರಿಯೆ ನೀಡಿದರು, ನಾಗರಿಕರ ಹತ್ಯೆಗೆ ಕಾರಣವಾದ ಘಟನೆ ದುರದೃಷ್ಟಕರ. ಘಟನೆಯಲ್ಲಿ ಮೃತಪಟ್ಟವರ ಕುಟುಂಬಕ್ಕೆ ಸಾಂತ್ವನ ಹೇಳಿರುವ ಮುಖ್ಯಮಂತ್ರಿಗಳು ಘಟನೆಯಲ್ಲಿ ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸಿದ್ದಾರೆ.

ಗುಂಡಿನ ದಾಳಿ ಪ್ರಕರಣದ ಬಗ್ಗೆ ಉನ್ನತ ಮಟ್ಟದ ಎಸ್‌ಐಟಿ ತನಿಖೆ ನಡೆಯಲಿದೆ ಎಂದು ಕಾನೂನಿನ ಪ್ರಕಾರ ನ್ಯಾಯ ದೊರಕಿಸಿಕೊಡಲಾಗುತ್ತದೆ. ಶಾಂತಿಯನ್ನು ಕಾಪಾಡಬೇಕು ಎಂದು ಮುಖ್ಯಮಂತ್ರಿಗಳು ಜನರಲ್ಲಿ ಮನವಿ ಮಾಡಿದ್ದಾರೆ.

ಅಮಿತ್ ಶಾ ಟ್ವೀಟ್; ಕೇಂದ್ರ ಗೃಹ ಸಚಿವ ಅಮಿತ್ ಶಾ ಘಟನೆ ಬಗ್ಗೆ ಟ್ವೀಟ್ ಮಾಡಿದ್ದಾರೆ, "ಪ್ರಾಣ ಕಳೆದುಕೊಂಡವರ ಕುಟುಂಬಗಳಿಗೆ ಸಂತಾಪವನ್ನು ವ್ಯಕ್ತಪಡಿಸುತ್ತೇನೆ. ರಾಜ್ಯ ಸರ್ಕಾರವು ರಚಿಸಿರುವ ಉನ್ನತ ಮಟ್ಟದ ಎಸ್‌ಐಟಿಯು ಈ ಘಟನೆಯನ್ನು ಕೂಲಂಕಷವಾಗಿ ತನಿಖೆ ನಡೆಸಿ ದುಃಖಿತ ಕುಟುಂಬಗಳಿಗೆ ನ್ಯಾಯವನ್ನು ದೊರಕಿಸಿಕೊಡಲಿದೆ" ಎಂದು ಹೇಳಿದ್ದಾರೆ.

ಭಾರತೀಯ ಸೇನೆ ಸಹ ಘಟನೆ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ನಾಗಾಲ್ಯಾಂಡ್‌ನಲ್ಲಿ ನಾಗರಿಕರ ಸಾವು ದುರದೃಷ್ಟಕರ. ಜೀವಹಾನಿಯಾದ ಬಗ್ಗೆ ತೀವ್ರ ವಿಷಾದವಿದೆ. ಘಟನೆ ಬಗ್ಗೆ ಉನ್ನತ ಮಟ್ಟದಲ್ಲಿ ತನಿಖೆ ನಡೆಸಲಾಗುವುದು ಎಂದು ಹೇಳಿದೆ.

English summary
Several villagers were killed in a case of mistaken identity in Oting village in Mon district of Nagaland. Chief Minister said high-level special investigative team will probe the incident.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X