ದೇಶದ ಕೆಲವು ರಾಜ್ಯಗಳಲ್ಲಿ ತೀವ್ರ ಶಾಖ, ಕೆಲವು ಪ್ರದೇಶಗಳಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ
ನವದೆಹಲಿ, ಜೂನ್. 18: ಮುಂದಿನ ಕೆಲವು ದಿನಗಳಲ್ಲಿ ಈಶಾನ್ಯ ಭಾರತ ಮತ್ತು ಉಪಹಿಮಾಲಯ ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂನಲ್ಲಿ ಭಾರಿ ಮಳೆಯು ಮುಂದುವರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಹೇಳಿದೆ.
ಜೂನ್ 19 ರಿಂದ 22 ರ ಅವಧಿಯಲ್ಲಿ ದಕ್ಷಿಣ ಪೆನಿನ್ಸುಲರ್ ಮತ್ತು ಪೂರ್ವ ಭಾರತದ ಕೆಲವು ಭಾಗಗಳು ಮತ್ತು ಪಕ್ಕದ ಪ್ರದೇಶಗಳಲ್ಲಿ ನೈಋತ್ಯ ಮಾನ್ಸೂನ್ ಮತ್ತಷ್ಟು ಹೆಚ್ಚಾಗಲಿದ್ದು ಪರಿಸ್ಥಿತಿ ಅಸ್ತವ್ಯಸ್ತವಾಗುತ್ತಿವೆ ಎಂದು ಹವಾಮಾನ ಇಲಾಖೆ ತನ್ನ ಮುನ್ಸೂಚನೆಯಲ್ಲಿ ಹೇಳಿದೆ. ಇಷ್ಟು ಮಳೆಯಾದರೂ ಒಡಿಶಾ, ವಿದರ್ಭ, ಪಶ್ಚಿಮ ಬಂಗಾಳ, ಜಾರ್ಖಂಡ್, ಆಂಧ್ರಪ್ರದೇಶ, ಉತ್ತರ ಪ್ರದೇಶ, ಬಿಹಾರ, ಮಧ್ಯಪ್ರದೇಶ, ತೆಲಂಗಾಣ, ತಮಿಳುನಾಡುಗಳಲ್ಲಿನ ತ್ರೀವ ಶಾಖಕ್ಕೆ ಯಾವುದೇ ಪರಿಹಾರವಿಲ್ಲ ಎಂದು ಹವಾಮಾನ ಕಚೇರಿ ತನ್ನ ಹೇಳಿಕೆಯಲ್ಲಿ ಸೂಚಿಸಿದೆ.

ದೆಹಲಿಯಲ್ಲಿ ಮಳೆಯ ಮುನ್ಸೂಚನೆಗಳ ಕುರಿತು ಮಾತನಾಡುತ್ತಾ, ಮೋಡ ಕವಿದ ಆಕಾಶದಲ್ಲಿ ಲಘು ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಂಭವವಿದೆ. ಭಾನುವಾರದಂದು ರಾಷ್ಟ್ರ ರಾಜಧಾನಿಯಲ್ಲಿ ಕನಿಷ್ಠ ತಾಪಮಾನವು 28.6 ಡಿಗ್ರಿ ಸೆಲ್ಸಿಯಸ್ ಇದೆ. ಇದು ಋತುವಿನ ಸರಾಸರಿಗಿಂತ ಒಂದು ಹಂತವಾಗಿದೆ. ಬೆಳಗ್ಗೆ 8.30ಕ್ಕೆ ಆರ್ದ್ರತೆ ಶೇ.69 ರಷ್ಟಿತ್ತು.
ರಾಜಸ್ಥಾನದಲ್ಲಿ ಭಾನುವಾರ ಬಿಪರ್‌ಜಾಯ್ ಚಂಡಮಾರುತದ ಪ್ರಭಾವದಿಂದ ರಾಜಸ್ಥಾನದ ಬಾರ್ಮರ್ ಜಿಲ್ಲೆಯ ಕೆಲವು ಭಾಗಗಳಲ್ಲಿ ಭಾರಿ ಮಳೆಯಾಗಿದೆ. ವಿವಿಧೆಡೆ ತೀವ್ರ ಜಲಾವೃತ ಹಾಗೂ ಪ್ರವಾಹದಂತಹ ಪರಿಸ್ಥಿತಿಯೂ ಕಂಡುಬಂದಿದೆ. ಜೋರಾದ ಗಾಳಿ ಸಹಿತ ಮಳೆಯಾಗಿದೆ. ಅಸ್ಸಾಂನಲ್ಲಿ ನಿರಂತರ ಮಳೆಯಿಂದಾಗಿ ಬ್ರಹ್ಮಪುತ್ರ ನದಿಯಲ್ಲಿ ನೀರಿನ ಮಟ್ಟ ಏರಿಕೆಯಾಗಿದೆ. ಪ್ರಸ್ತುತ ಪ್ರವಾಹದಿಂದ ರಾಜ್ಯದ 13 ಜಿಲ್ಲೆಗಳಲ್ಲಿ ಸುಮಾರು 38,000 ಜನರು ತೊಂದರೆಗೀಡಾಗಿದ್ದಾರೆ ಎಂದು ಅಸ್ಸಾಂ ವಿಪತ್ತು ನಿರ್ವಹಣಾ ಪ್ರಾಧಿಕಾರ (ಎಎಸ್‌ಡಿಎಂಎ) ಶನಿವಾರ ತಿಳಿಸಿದೆ.
ಅಸ್ಸಾಂ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ (ಎಎಸ್‌ಡಿಎಂಎ) ಪ್ರಕಾರ, ಲಖಿಂಪುರ ಜಿಲ್ಲೆಯಲ್ಲಿ 25,275 ಜನರು ಮಾತ್ರ ಪರಿಣಾಮ ಬೀರಿದ್ದಾರೆ ಮತ್ತು ದಿಬ್ರುಗಢದಲ್ಲಿ 3857 ಜನರು, ಬಿಸ್ವನಾಥ್ ಜಿಲ್ಲೆಯಲ್ಲಿ 3631 ಜನರು ಬಾಧಿತರಾಗಿದ್ದಾರೆ.
ಈಶಾನ್ಯ ಮತ್ತು ಪಕ್ಕದ ಪೂರ್ವ ಭಾರತ
ಹವಾಮಾನ ಇಲಾಖೆಯು ಮುಂದಿನ 4 ದಿನಗಳಲ್ಲಿ ಈಶಾನ್ಯ ಭಾರತ ಮತ್ತು ಉಪ-ಹಿಮಾಲಯದ ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂನಲ್ಲಿ ಭಾರೀ ಮಳೆಯೊಂದಿಗೆ ಹೆಚ್ಚಿನ ಸ್ಥಳಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಮುನ್ಸೂಚನೆ ನೀಡಿದೆ. ಕಳೆದ ಜೂನ್ 16 ರಂದು ಉತ್ತರ ಸಿಕ್ಕಿಂನಲ್ಲಿ ಭಾರಿ ಮಳೆ ಸುರಿದು ಪ್ರವಾಸಿಗರನ್ನು ಕಂಗಾಲಾಗಿಸಿದೆ.
ಜೂನ್ 17 ರಿಂದ 19 ರ ಅವಧಿಯಲ್ಲಿ ಅಸ್ಸಾಂ ಮತ್ತು ಮೇಘಾಲಯದಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ ಎಂದು ಐಎಂಡಿ ಈ ಹಿಂದೆ ತಿಳಿಸಿತ್ತು. ಮುಂದಿನ 2 ದಿನಗಳಲ್ಲಿ ಗಂಗಾನದಿ ಪಶ್ಚಿಮ ಬಂಗಾಳ, ಬಿಹಾರ, ಜಾರ್ಖಂಡ್, ಒಡಿಶಾದಲ್ಲಿ ಗುಡುಗು ಮತ್ತು ಮಿಂಚು ಸಹಿತ ಚದುರಿದ ಮಳೆಯಾಗುವ ಸಾಧ್ಯತೆಯಿದೆ ಎಂದು ಮಾಹಿತಿ ನೀಡಿದೆ.
ವಾಯುವ್ಯ ಮತ್ತು ಮಧ್ಯ ಭಾರತ
ಮುಂದಿನ 3 ದಿನಗಳಲ್ಲಿ ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಮತ್ತು ಮಿಂಚು ಸಹಿತ ಚದುರಿದಂತೆ ಅಲ್ಲಲ್ಲಿ ಸಾಕಷ್ಟು ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ. ಮುಂದಿನ 2 ದಿನಗಳಲ್ಲಿ ವಾಯುವ್ಯ ಭಾರತದ ಬಯಲು ಪ್ರದೇಶಗಳಲ್ಲಿ ಚದುರಿದ ಮಳೆಯಾಗುವ ಮುನ್ಸೂಚನೆ ಇದೆ.
ಜೂನ್ 18 ಮತ್ತು 19 ರಂದು ಉತ್ತರಾಖಂಡದ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಸಿಡಿಲು (60-70 ಕಿಮೀ) ಮತ್ತು ಆಲಿಕಲ್ಲು ಮಳೆಯಾಗುವ ಸಾಧ್ಯತೆಯಿದೆ. ಜೂನ್ 18 ರಂದು ನೈಋತ್ಯ ರಾಜಸ್ಥಾನದ ಮೇಲೆ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಜೂನ್ 17 ರಿಂದ 19 ಸಮಯದಲ್ಲಿ ಆಗ್ನೇಯ ರಾಜಸ್ಥಾನದಲ್ಲಿ, ಜೂನ್ 19-21 ಅವಧಿಯಲ್ಲಿ ವಾಯುವ್ಯ ಮಧ್ಯಪ್ರದೇಶದಲ್ಲಿ ಮಳೆಯಾಗಲಿದೆ.
ದಕ್ಷಿಣ ಭಾರತ
ಮುಂದಿನ 4 ದಿನಗಳಲ್ಲಿ ದಕ್ಷಿಣ ಭಾರತ ಪ್ರದೇಶದಲ್ಲಿ ಗುಡುಗು ಮತ್ತು ಮಿಂಚು ಸಹಿತ ಸಾಕಷ್ಟು ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಜೂನ್ 17-19 ರ ಅವಧಿಯಲ್ಲಿ ತಮಿಳುನಾಡು, ಜೂನ್ 18-21 ರ ಅವಧಿಯಲ್ಲಿ ಕೇರಳ ಮತ್ತು ಜೂನ್ 19-21 ರ ಅವಧಿಯಲ್ಲಿ ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.
ಭಾರತದಲ್ಲಿ ಶಾಖದ ಅಲೆಯ ಪರಿಸ್ಥಿತಿ
ದೇಶದ ಕೆಲವು ಪ್ರದೇಶಗಳಲ್ಲಿ ತೀವ್ರತರವಾದ ಶಾಖದ ಅಲೆಯನ್ನು ಊಹಿಸಿದೆ. ಜೂನ್ 18 ರಂದು ಪೂರ್ವ ಮಧ್ಯಪ್ರದೇಶ, ವಿದರ್ಭ, ಛತ್ತೀಸ್‌ಗಢದ ಪ್ರತ್ಯೇಕ ಸ್ಥಳಗಳಲ್ಲಿ ರಾತ್ರಿಯಲ್ಲಿಯೂ ಶಾಖ ಮೇಲುಗೈ ಸಾಧಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಐಎಂಡಿ ಪ್ರಕಾರ, ಮುಂದಿನ ನಾಲ್ಕು ದಿನಗಳಲ್ಲಿ ವಿದರ್ಭ, ಛತ್ತೀಸ್‌ಗಢದ ಮೇಲೆ ಪ್ರತ್ಯೇಕವಾದ ಸ್ಥಳಗಳಲ್ಲಿ ತೀವ್ರವಾಗ ಶಾಖದ ಅಲೆ ಚಾಲ್ತಿಯಲ್ಲಿರುತ್ತದೆ. ಮುಂದಿನ ಮೂರು ದಿನಗಳಲ್ಲಿ ಒಡಿಶಾ, ಜಾರ್ಖಂಡ್‌ಗಳಲ್ಲಿಲ, ಮುಂದಿನ 2 ದಿನಗಳಲ್ಲಿ ಕರಾವಳಿ ಆಂಧ್ರಪ್ರದೇಶ ಮತ್ತು ಯಾನಂ, ಬಿಹಾರ, ಗಂಗಾನದಿ ಪಶ್ಚಿಮ ಬಂಗಾಳದಲ್ಲಿ ತೀವ್ರವಾದ ಶಾಖದ ಅಲೆ ಇರಲಿದೆ.












Click it and Unblock the Notifications