Shabarimala Yatra 2024: ಚಕ್ಕುಪಳ್ಳಂ, ಬೆಟ್ಟದ ತುದಿಯಲ್ಲಿ ಕಾರು ನಿಲುಗಡೆಗೆ ಹೈಕೋರ್ಟ್ ಅನುಮತಿ
ಕೊಚ್ಚಿ ನವೆಂಬರ್ 13: ಶಬರಿಮಲೆಗೆ ತೆರಳುವ ಯಾತ್ರಾರ್ಥಿಗಳಿಗೆ ಕೇರಳ ಹೈಕೋರ್ಟ್ ಸಿಹಿ ಸುದ್ದಿಯೊಂದನ್ನು ನೀಡಿದೆ. ಶಬರಿಮಲೆಗೆ ತೆರಳುವ ಯಾತ್ರಾರ್ಥಿಗಳ ವಾಹನಗಳನ್ನು ಚಕ್ಕುಪಳ್ಳಂ-II ಮತ್ತು ಬೆಟ್ಟದ ತುದಿಯಲ್ಲಿ ವ್ಯವಸ್ಥಿತ ರೀತಿಯಲ್ಲಿ ಪಾರ್ಕಿಂಗ್ ಮಾಡಲು ಕೇರಳ ಹೈಕೋರ್ಟ್ ಅನುಮತಿ ನೀಡಿದೆ. ಇದರಿಂದಾಗಿ ಯಾತ್ರಾರ್ಥಿಗಳು ಸಾಕಷ್ಟು ಸಂತೋಷ ವ್ಯಕ್ತಪಡಿಸಿದ್ದಾರೆ.
ಪ್ರತೀ ವರ್ಷ ಕಾರ್ತಿಕ ಮಾಸದಲ್ಲಿ ಅಯ್ಯಪ್ಪನ ದರ್ಶನಕ್ಕೆ ಲಕ್ಷಾಂತರ ಭಕ್ತರು ಶಬರಿಮಲೆಗೆ ಆಗಮಿಸುತ್ತಾರೆ. ವಿಶೇಷವಾಗಿ ಮಂಡಲಂ-ಮಕರವಿಳಕ್ಕು ಉತ್ಸವದಲ್ಲಿ ಜನಸಂದಣಿ ನಿರ್ವಹಣೆ ಕಷ್ಟವಾಗುತ್ತದೆ. ಇದರಿಂದಾಗಿ ಚಕ್ಕುಪಳ್ಳಂ-II ಮತ್ತು ಬೆಟ್ಟದ ತುದಿಯಲ್ಲಿ ವಾಹನ ನಿಲುಗಡೆಗೆ ನಿಷೇಧ ಹೇರಲಾಗಿತ್ತು.

ಆದರೀಗ ಯಾತ್ರಾರ್ಥಿಗಳಿಗೆ ಅನಾನುಕೂಲವಾಗುವುದರಿಂದ ಸ್ವಯಂ ಪ್ರೇರಿತ ಪ್ರಕರಣದ ವಿಚಾರಣೆಯಲ್ಲಿ, ನ್ಯಾಯಮೂರ್ತಿ ಅನಿಲ್ ಕೆ ನರೇಂದ್ರನ್ ನೇತೃತ್ವದ ವಿಭಾಗೀಯ ಪೀಠವು ತಿರುವಾಂಕೂರು ದೇವಸ್ವಂನ ನಿರ್ದೇಶನಗಳನ್ನು ಅನುಸರಿಸಿ, ದೇವಸ್ಥಾನ ಆಡಳಿತ ಮಂಡಳಿ ಮತ್ತು ಪೊಲೀಸ್ ನಿಗದಿಪಡಿಸಿದ ಸ್ಲಾಟ್‌ಗಳಲ್ಲಿ ಮಾತ್ರ ಕಾರುಗಳನ್ನು ನಿಲುಗಡೆ ಮಾಡಬೇಕೆಂದು ಹೇಳಿದೆ.
ಅಲ್ಲದೆ ಯಾತ್ರಾರ್ಥಿಗಳ ವಾಹನಗಳು ಸೇರಿದಂತೆ ಇತರ ಯಾವುದೇ ವಾಹನಗಳನ್ನು ಎರಡು ಪ್ರದೇಶಗಳಲ್ಲಿ ನಿಲುಗಡೆ ಮಾಡಬಾರದು ಎಂದು ನ್ಯಾಯಾಲಯ ಹೇಳಿದೆ. ನಿಲಕ್ಕಲ್‌ನಿಂದ ಪಂಪಾವರೆಗಿನ ರಸ್ತೆಗಳ ಇಕ್ಕೆಲಗಳಲ್ಲಿ ವಾಹನ ನಿಲುಗಡೆಗೆ ಅವಕಾಶ ನೀಡದಂತೆ ನ್ಯಾಯಾಲಯವು ಪೊಲೀಸರಿಗೆ ಆದೇಶ ನೀಡಿದೆ. ನಿಯಲ ಮೀರಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆಯೂ ಕೋರ್ಟ್ ಹೇಳಿದೆ.
ಇನ್ನೂ ಪ್ರತಿ ಇಲಾಖೆಗೆ ಗುರುತಿಸಲಾದ ಪ್ರದೇಶಗಳಲ್ಲಿ ಅಧಿಕಾರಿಗಳ ವಾಹನಗಳು ಮತ್ತು ತುರ್ತು ವಾಹನಗಳನ್ನು ನಿಲುಗಡೆಗೆ ವ್ಯವಸ್ಥೆ ಮಾಡಬೇಕು ಎಂದು ನ್ಯಾಯಾಲಯ ಹೇಳಿದೆ. ಜೊತೆಗೆ ಶಬರಿಮಲೆ ವಿಶೇಷ ಆಯುಕ್ತರ ಸಮ್ಮುಖದಲ್ಲಿ ಗುರುತಿಸಲಾದ ಪ್ರದೇಶಗಳಲ್ಲಿ ಕೆಎಸ್‌ಆರ್‌ಟಿಸಿ ಬಸ್‌ಗಳನ್ನು ನಿಲುಗಡೆ ಮಾಡಬೇಕು ಎಂದು ಕೋರ್ಟ್ ಹೇಳಿದೆ.
ಕೆಎಸ್‌ಆರ್‌ಟಿಸಿ ಹೆಚ್ಚುವರಿ ಜಾಗವನ್ನು ಬಯಸಿದರೆ, ಆಯುಕ್ತರಿಗೆ ಮನವಿ ಮಾಡಬೇಕು, ಅವರು ಮುಖ್ಯ ಪೊಲೀಸ್ ಸಂಯೋಜಕರೊಂದಿಗೆ ಸಮಾಲೋಚಿಸಿ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು ನ್ಯಾಯಾಲಯ ಹೇಳಿದೆ. ತೀರ್ಥಯಾತ್ರೆಯ ಸಮಯದಲ್ಲಿ ಸರಿಯಾದ ಜನಸಂದಣಿ ನಿರ್ವಹಣೆ, ಸುರಕ್ಷತೆ ಮತ್ತು ಆರಾಮದಾಯಕ ತೀರ್ಥಯಾತ್ರೆಗೆ ಸೌಲಭ್ಯಗಳನ್ನು ಒದಗಿಸಲು ಎಲ್ಲಾ ಸರ್ಕಾರಿ ಇಲಾಖೆಗಳಿಗೆ ಕೋರ್ಟ್ ನಿರ್ದೇಶನ ನೀಡಿದೆ.
ದಕ್ಷಿಣ ಭಾರತದ ಪ್ರಸಿದ್ಧ ದೇವಾಲಯಗಳಲ್ಲಿ ಶಬರಿಮಲೆಯ ಅಯ್ಯಪ್ಪಸ್ವಾಮಿ ದೇವಸ್ಥಾನ ಒಂದಾಗಿದೆ. ಈ ದೇವಸ್ಥಾನಕ್ಕೆ ದೇಶದ ಮೂಲೆ ಮೂಲೆಗಳಿಂದ ಜನ ಆಗಮಿಸುತ್ತಾರೆ. ಪ್ರತಿವರ್ಷ ನವೆಂಬರ್‌ನಿಂದ ಡೆಸೆಂಬರ್ ತನಕ ವಾರ್ಷಿಕ ಪೂಜೆಗಳು ನಡೆಯುತ್ತದೆ. ಈ ಸಮಯದಲ್ಲಿ ಭಕ್ತಾಧಿಗಳು ಸ್ವಲ್ಪ ಹೆಚ್ಚಿನ ಸಂಖ್ಯೆಯಲ್ಲಿ ಶಬರಿಮಲೆಗೆ ಆಗಮಿಸುತ್ತಾರೆ.
ಇಲ್ಲಿಗೆ ಆಗಮಿಸುವ ಭಕ್ತರು ಹದಿನಾಲ್ಕು ದಿನಗಳ ಕಾಲ ವ್ರತ ಆಚರಣೆ ಮಾಡಿ ಬರುತ್ತಾರೆ. ಅದನ್ನು ಮಾಲೆ ಹಾಕುವುದು ಎಂದು ಕರೆಯಲಾಗುತ್ತದೆ. ಕೇರಳದ ಪಥನಂತಿಟ್ಟ ಜೆಲ್ಲೆಯ ಅಯ್ಯಪ್ಪ ದೇವರಿಗೆ ಸಮರ್ಪಿತವಾಗಿರುವ ಶಬರಿಮಲೆ ದೇವಾಲಯ ನಾಲ್ಕು ಕಿಮೀಗಿಂತ ಹೆಚ್ಚು ದೂರದ ಬೆಟ್ಟದಲ್ಲಿದೆ. ಇದು ಅತ್ಯಂತ ಕಷ್ಟಕರ ಪ್ರಯಾಣವಾಗಿದ್ದು ಭಕ್ತರು ಕಾಲ್ನಡಿಗೆಯಲ್ಲಿ ಸಾಗುತ್ತಾರೆ.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL 2026: ಆರ್ಸಿಬಿ ಫ್ಯಾನ್ಸ್ ಗಮನಿಸಿ; ಮ್ಯಾಚ್ ದಿನ ನಮ್ಮ ಮೆಟ್ರೋ ತಡರಾತ್ರಿವರೆಗೂ ಸಂಚಾರ -
ವಂದೇ ಭಾರತ್ ರೈಲಿನ ಊಟದಲ್ಲಿ ಹುಳು: 'ಅದು ಕೇಸರಿ' ಎಂದ ಸಿಬ್ಬಂದಿ, IRCTCಗೆ 10 ಲಕ್ಷ ದಂಡ -
ಮುದ್ದೇನಹಳ್ಳಿಯಲ್ಲಿ ಪೋಷಕರ ಹರ್ಷ: 27 ಮಕ್ಕಳಿಗೆ ಹೊಸ ಬದುಕು ನೀಡಿದ ಉಚಿತ ಹೃದಯ ಚಿಕಿತ್ಸೆ ಶಿಬಿರ -
ಭಾರತದ ಸ್ಪೈಸ್ ಗಾರ್ಡನ್ ಕೇರಳ: ಇತಿಹಾಸ ಮತ್ತು ಪ್ರಕೃತಿಯ ಸುಂದರ ಕಥೆ -
RCB ಮ್ಯಾಚ್ ನೋಡಲು ಬರುವವರ ಗಮನಕ್ಕೆ: 44 ಮೆಟ್ರೋ ನಿಲ್ದಾಣಗಳಲ್ಲಿದೆ ಪಾರ್ಕಿಂಗ್ ವ್ಯವಸ್ಥೆ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
IPL ಟಿಕೆಟ್ ಕೇಳಿದ ಶಾಸಕರಿಗೆ ಸರ್ಕಾರ ಸಿಹಿಸುದ್ದಿ: ಆರ್ಸಿಬಿ ಮೊದಲ ಪಂದ್ಯ ವೀಕ್ಷಣೆಗೆ ಸಿಗಲಿದೆ ತಲಾ 2 ಟಿಕೆಟ್ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ -
B Khata: ಬಿ ಖಾತಾದಿಂದ ಎ ಖಾತಾ: ಹಳೆಯ ಗೈಡ್ಲೈನ್ ವ್ಯಾಲ್ಯೂ ವಿಧಿಸಲು ವಿಧಾನಸಭೆಯಲ್ಲಿ ಚರ್ಚೆ









Click it and Unblock the Notifications