ಶಾಹೀನ್ ಚಂಡಮಾರುತ; ಕರ್ನಾಟಕ ಸೇರಿ 7 ರಾಜ್ಯಗಳಲ್ಲಿ ಭಾರೀ ಮಳೆ ಮುನ್ಸೂಚನೆ

ನವದೆಹಲಿ, ಅಕ್ಟೋಬರ್ 01: 'ಶಾಹೀನ್' ಚಂಡಮಾರುತದ ಪ್ರಭಾವದಡಿಯಲ್ಲಿ ಕರ್ನಾಟಕ ಒಳಗೊಂಡಂತೆ ಏಳು ರಾಜ್ಯಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ.

ಮುಂದಿನ 24 ಗಂಟೆಗಳಲ್ಲಿ ಶಾಹೀನ್ ಚಂಡಮಾರುತ ತೀವ್ರವಾಗುವ ನಿರೀಕ್ಷೆಯಿದ್ದು, ಇದರ ಪ್ರಭಾವದಲ್ಲಿ ಹಲವು ರಾಜ್ಯಗಳಲ್ಲಿ ಅಧಿಕ ಮಳೆಯಾಗಲಿದೆ ಎಂದು ಅಲರ್ಟ್ ಘೋಷಣೆ ಮಾಡಿದೆ.

ಬಿಹಾರ, ಪಶ್ಚಿಮ ಬಂಗಾಳ, ಸಿಕ್ಕಿಂ, ತಮಿಳುನಾಡು, ಕೇರಳ, ಕರ್ನಾಟಕ ಹಾಗೂ ಗುಜರಾತ್ ರಾಜ್ಯಗಳಲ್ಲಿ ಈ ಅವಧಿಯಲ್ಲಿ ಹೆಚ್ಚಿನ ಮಳೆಯಾಗಲಿದೆ. ಅಕ್ಟೋಬರ್ 1ರ ನಂತರ ಮಳೆ ಪ್ರಮಾಣ ಹೆಚ್ಚಲಿದ್ದು, ಅಕ್ಟೋಬರ್ 4ರವರೆಗೂ ಭಾರೀ ಮಳೆಯಾಗುವ ಸಂಭವವಿದೆ ಎಂದು ತಿಳಿಸಿದೆ.

 Shaheen Cyclone: IMD Issues Heavy Rain Alert To 7 States

ಸೆಪ್ಟೆಂಬರ್ 26ರಂದು ಬಂಗಾಳ ಕೊಲ್ಲಿಯಲ್ಲಿ ಸೃಷ್ಟಿಯಾಗಿದ್ದ 'ಗುಲಾಬ್' ದಂಡಮಾರುತ ಆಂಧ್ರ ಪ್ರದೇಶ, ಒಡಿಶಾ, ತೆಲಂಗಾಣ, ಪಶ್ಚಿಮ ಬಂಗಾಳ, ಮಹಾರಾಷ್ಟ್ರದಲ್ಲಿ ಅತ್ಯಧಿಕ ಮಳೆಗೆ ಕಾರಣವಾಗಿತ್ತು. ಕೆಲವೆಡೆ ಭೂಕುಸಿತವೂ ಸಂಭವಿಸಿತ್ತು.

ಬುಧವಾರದಿಂದ ಗುಲಾಬ್ ಚಂಡಮಾರುತ ದುರ್ಬಲಗೊಂಡು ಅರಬ್ಬೀ ಸಮುದ್ರದಲ್ಲಿ 'ಶಾಹೀನ್' ಚಂಡಮಾರುತದ ಮೂಲಕ ಮರುಹುಟ್ಟು ಪಡೆದಿದೆ. ಭಾರತವಲ್ಲದೇ ಪಾಕಿಸ್ತಾನ ಹಾಗೂ ಇರಾನ್‌ನಲ್ಲಿಯೂ ಆರ್ಭಟಿಸುವುದಾಗಿ ತಿಳಿದುಬಂದಿದೆ.

ಸೆಪ್ಟೆಂಬರ್ 30 ಅಥವಾ ಅಕ್ಟೋಬರ್ 1ರಂದು ಗುಜರಾತ್‌ ಕರಾವಳಿಯಲ್ಲಿ ಶಾಹೀನ್ ಚಂಡಮಾರುತ ತೀವ್ರವಾಗಲಿದ್ದು, ಇದರ ಪ್ರಭಾವ ಹಲವು ರಾಜ್ಯಗಳಲ್ಲಿ ಗೋಚರಿಸಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ರವಾನಿಸಿದೆ. ಈಶಾನ್ಯ ಅರಬ್ಬಿ ಸಮುದ್ರದಲ್ಲಿ ಚಂಡಮಾರುತ ಇನ್ನಷ್ಟು ತೀವ್ರವಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.

 Shaheen Cyclone: IMD Issues Heavy Rain Alert To 7 States

ಶುಕ್ರವಾರ ಬೆಳಗ್ಗೆ ಶಾಹೀನ್ ಚಂಡಮಾರುತ ಗುಜರಾತ್‌ನ ದ್ವಾರಕದ ಪಶ್ಚಿಮ ವಾಯವ್ಯ ದಿಕ್ಕಿನಿಂದ ಸುಮಾರು 400 ಕಿ.ಮೀ ದೂರದಲ್ಲಿ, ಪಾಕಿಸ್ತಾನದ ಕರಾಚಿಯಿಂದ 260 ಕಿ.ಮೀ ನೈಋತ್ಯಕ್ಕೆ ಹಾಗೂ ಇರಾನ್‌ನ ಚಾಬಹಾರ್ ಬಂದರಿಯಿಂದ 530 ಕಿ.ಮೀ ಆಗ್ನೇಯದಲ್ಲಿ ಚಲಿಸಲಿದೆ ಎಂದು ತಿಳಿಸಿದೆ.

ತೆಲಂಗಾಣ, ಆಂಧ್ರ ಪ್ರದೇಶ, ಮಹಾರಾಷ್ಟ್ರ, ಗುಜರಾತ್, ಒಡಿಶಾ ಪಶ್ಚಿಮ ಬಂಗಾಳದಲ್ಲಿ ಗುಲಾಬ್ ಚಂಡಮಾರುತ ಆರ್ಭಟಿಸಿತ್ತು. ಇದೀಗ ಶಾಹೀನ್ ಚಂಡಮಾರುತದ ಪ್ರಭಾವದಲ್ಲಿ ಬಿಹಾರ್, ಪಶ್ಚಿಮ ಬಂಗಾಳ, ಸಿಕ್ಕಿಂ ರಾಜ್ಯಗಳಲ್ಲಿ ಅಕ್ಟೋಬರ್ 1 ಹಾಗೂ 2ರಂದು ಅತ್ಯಧಿಕ ಮಳೆಯಾಗಲಿದೆ. ಬಿಹಾರದಲ್ಲಿ ಶುಕ್ರವಾರ 20 ಸೆ.ಮೀನಷ್ಟು ಮಳೆ ಬೀಳಲಿದೆ ಎಂದು ತಿಳಿಸಿದೆ.

ಅಕ್ಟೋಬರ್ 1ರ ನಂತರ ಮಳೆ ಪ್ರಮಾಣ ಇನ್ನಷ್ಟು ಹೆಚ್ಚಾಗಲಿದೆ. ತಮಿಳುನಾಡು, ಕೇರಳ, ಕರ್ನಾಟಕದ ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಅಕ್ಟೋಬರ್ 1ರಿಂದ ಆರಂಭಗೊಂಡು 4ರವರೆಗೂ ಮಳೆಯಾಗುತ್ತದೆ. ತಮಿಳುನಾಡಿನಲ್ಲಿ ಅಕ್ಟೋಬರ್ 2ರಿಂದ 4ರವರೆಗೂ ಅತ್ಯಧಿಕ ಮಳೆಯಾಗುವ ಸಂಭವವಿದೆ ಎಂದು ಮುನ್ಸೂಚನೆ ನೀಡಿದೆ.

ಈ ಅವಧಿಯಲ್ಲಿ ಕರಾವಳಿ ತೀರಗಳಲ್ಲಿ ಮೀನುಗಾರಿಕೆಗೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.

ಇದರೊಂದಿಗೆ ನೈಋತ್ಯ ಮುಂಗಾರು ದೇಶದ ವಾಯವ್ಯ ಭಾಗದಿಂದ ಅಕ್ಟೋಬರ್ 6ರ ವೇಳೆಗೆ ಅಂತ್ಯವಾಗುತ್ತದೆ ಎಂದು ಹೇಳಿದೆ.

ಈ ಮುಂಗಾರು ಅವಧಿಯಲ್ಲಿ ದೇಶದಲ್ಲಿ ಸಾಮಾನ್ಯ ಮಳೆ ದಾಖಲು:
ಈ ಬಾರಿ ಮುಂಗಾರು ಅವಧಿಯಲ್ಲಿ, ಅಂದರೆ ಜೂನ್ ತಿಂಗಳಿನಿಂದ ಸೆಪ್ಟೆಂಬರ್‌ವರೆಗಿನ ನಾಲ್ಕು ತಿಂಗಳ ಅವಧಿಯಲ್ಲಿ ದೇಶದಲ್ಲಿ ಸಾಮಾನ್ಯ ಮಟ್ಟದ ಮಳೆಯಾಗಿರುವುದಾಗಿ ಭಾರತೀಯ ಹವಾಮಾನ ಇಲಾಖೆ ಗುರುವಾರ ಮಾಹಿತಿ ನೀಡಿದೆ. ಅಕ್ಟೋಬರ್‌ನಿಂದ ಡಿಸೆಂಬರ್‌ವರೆಗೆ ದೇಶದ ದಕ್ಷಿಣ ರಾಜ್ಯಗಳಲ್ಲಿ ಈಶಾನ್ಯ ಮುಂಗಾರು ಅವಧಿಯಲ್ಲಿ ಕೂಡ ಸಾಮಾನ್ಯ ಮಳೆ ದಾಖಲಾಗಲಿದೆ ಎಂದು ತಿಳಿಸಿದೆ.

ಈ ಮುಂಗಾರು ಋತುವಿನಲ್ಲಿ, ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ಒಟ್ಟಾರೆಯಾಗಿ 87 ಸೆ.ಮೀ.ನಷ್ಟು ದೀರ್ಘಾವಧಿಯ ಸರಾಸರಿ ಮಳೆ ದಾಖಲಾಗಿದೆ. ನೈಋತ್ಯ ಮುಂಗಾರು ಅವಧಿಯಲ್ಲಿ ಸಾಮಾನ್ಯ ಮಟ್ಟದಲ್ಲಿ ಮಳೆ ದಾಖಲಾಗಿದೆ. ಮುಂಗಾರು ದೀರ್ಘಾವಧಿ ಮಳೆ (ದೀರ್ಘಾವಧಿ ಸರಾಸರಿ ಮಳೆ ಪ್ರಮಾಣದ 96- 106%) ಎಂದು ಭಾರತೀಯ ಹವಾಮಾನ ಇಲಾಖೆ ನಿರ್ದೇಶಕ ಮೃತ್ಯುಂಜಯ ಮಹೋಪಾತ್ರ ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+