Shame On You Stalin: ತಮಿಳುನಾಡಿನ ಸಿ.ಎಂ ಸ್ಟಾಲಿನ್, ಪುತ್ರ ಉದಯನಿಧಿ ಸ್ಟಾಲಿನ್ ಮೇಲೆ ಹೆಚ್ಚಾಯ್ತು ಜನಾಕ್ರೋಶ, ಕಾರಣವೇನು ?
ತಮಿಳುನಾಡಿನ ರಾಜಧಾನಿ ಚೆನ್ನೈನಲ್ಲಿರುವ ಅಣ್ಣಾ ವಿಶ್ವವಿದ್ಯಾಲಯದಲ್ಲಿ ನಡೆದಿರುವ ಘಟನೆ ಇದೀಗ ದೇಶದಾದ್ಯಂತ ಆಕ್ರೋಶಕ್ಕೆ ಕಾರಣವಾಗಿದೆ. ತಮಿಳುನಾಡಿನ ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. #ShameOnYouStalin ಎನ್ನುವ ಹ್ಯಾಷ್ ಟ್ಯಾಗ್ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಟ್ರೆಂಡ್ ಆಗುತ್ತಿದೆ. ಅಲ್ಲದೆ ಸ್ಟಾಲಿನ್ ಪುತ್ರ ಹಾಗೂ ಡಿಸಿಎಂ ಉದಯನಿಧಿ ಸ್ಟಾಲಿನ್ ಮೇಲೂ ಆಕ್ರೋಶ ವ್ಯಕ್ತವಾಗಿದೆ. ಚೆನ್ನೈನ ಹೃದಯ ಭಾಗದಲ್ಲಿರುವ ವಿಶ್ವವಿದ್ಯಾಲಯದಲ್ಲಿ ಈ ಘಟನೆ ನಡೆದಿದೆ. ಈ ವಿಶ್ವ ವಿದ್ಯಾಲಯದಲ್ಲಿ ಎಂಜಿನಿಯರಿಂಗ್ ಮಾಡುತ್ತಿರುವ ವಿದ್ಯಾರ್ಥಿನಿಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಲಾಗಿದೆ. ಡಿಸೆಂಬರ್ 23ಕ್ಕೆ ಈ ಘಟನೆ ನಡೆದಿದ್ದು, ವಿಷಯ ತಡವಾಗಿ ಬೆಳಕಿಗೆ ಬಂದಿದೆ. ವಿದ್ಯಾರ್ಥಿನಿಯು ಆಕೆಯ ಗೆಳಯನೊಂದಿಗೆ ಮಾತನಾಡುವಾಗ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ.
ಸಂತ್ರಸ್ತೆ ಹಾಗೂ ಆಕೆಯ ಗೆಳಯನೊಂದಿಗೆ ಮಾತನಾಡುತ್ತಿದ್ದಾಗ ಈ ಘಟನೆ ನಡೆದಿದೆ. ಇಬ್ಬರು ಅಪರಿಚಿತ ವ್ಯಕ್ತಿಗಳು ಬಂದು ಇವರನ್ನು ಹೆದರಿಸಿದ್ದಾರೆ. ಸಂತ್ರಸ್ತೆಯ ಗೆಳೆಯನ ಮೇಲೆ ಹಲ್ಲೆ ನಡೆಸಿದ್ದಾರೆ. ಅಲ್ಲದೆ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಕೊಟ್ಟಿದ್ದಾರೆ. ಮುಂದುವರಿದು ದುಷ್ಕರ್ಮಿಗಳು ಬಲವಂತವಾಗಿ ಆಕೆಯ ಬಟ್ಟೆ ಬಿಚ್ಚಿಸಿ, ವೀಡಿಯೊ ಮಾಡಿಕೊಂಡು ಬೆದರಿಕೆ ಹಾಕಿದ್ದಾರೆ. ಆ ಮೇಲೆ ಸ್ಥಳದಿಂದ ಪರಾರಿಯಾಗಿದ್ದಾರೆ. ಈ ಘಟನೆಯಿಂದ ಆಘಾತಕ್ಕೆ ಒಳಗಾದ ಸಂತ್ರಸ್ತೆ ತಮಿಳುನಾಡಿನ ಕೊಟ್ಟೂರುಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಡಿಎಂಕೆಯೊಂದಿಗೆ ಸಂಬಂಧ ಆರೋಪ: ಇನ್ನು ಆರೋಪಿಯನ್ನು ಇಲ್ಲಿನ ಕೊಟ್ಟೂರುಪುರಂನ ರಸ್ತೆ ಬದಿಯಲ್ಲಿ ಬಿರಿಯಾನಿ ಮಾರಾಟ ಮಾಡುವ ಜ್ಞಾನಶೇಖರನ್ 37 ಎಂದು ಗುರುತಿಸಲಾಗಿದ್ದು. ಈ ಕೇಸ್‌ಗೆ ಸಂಬಂಧಿಸಿದಂತೆ ಬಂಧಿಸಲಾಗಿದೆ. ಇನ್ನು ಆರೋಪಿಯ ಮೇಲೆ ಈಗಾಗಲೇ ಹಲವು ಪ್ರಕರಣಗಳು ಬಾಕಿ ಇವೆ ಎಂದು ಹೇಳಲಾಗಿದೆ. ಈ ನಡುವೆ ಆರೋಪಿಯು ತಮಿಳುನಾಡಿನ ಆಡಳಿತರೂಢ ಡಿಎಂಕೆ ಜೊತೆ ಸಂಬಂಧ ಹೊಂದಿದ್ದಾನೆ ಎಂದು ಹೇಳಲಾಗುತ್ತಿದ್ದೆ. ಇದು ತೀವ್ರ ವಿರೋಧಕ್ಕೆ ಕಾರಣವಾಗಿದೆ. ತಮಿಳುನಾಡಿನ ಉಪಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್ ಮತ್ತು ಸಚಿವ ಮಾ. ಸುಬ್ರಮಣಿಯನ್ ಸೇರಿದಂತೆ ಪ್ರಮುಖ ಡಿಎಂಕೆ ನಾಯಕರೊಂದಿಗೆ ಆರೋಪಿ ಇರುವ ಚಿತ್ರಗಳು ವೈರಲ್ ಆಗುತ್ತಿವೆ.
ಬಿಜೆಪಿ ತಮಿಳುನಾಡು ಅಧ್ಯಕ್ಷ ಕೆ. ಅಣ್ಣಾಮಲೈ ಅವರು ಈ ವಿಚಾರವಾಗಿ ಡಿಎಂಕೆ ಸರ್ಕಾರವನ್ನು ಟೀಕಿಸಿದ್ದಾರೆ. ರಾಜ್ಯದಲ್ಲಿ ಅಪರಾಧ ಪ್ರಕರಣಗಳು ಹೆಚ್ಚಾಗುತ್ತಿವೆ. ಇವುಗಳನ್ನು ತಡೆಯುವಲ್ಲಿ ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ವಿಫಲರಾಗಿದ್ದಾರೆ ಎಂದಿದ್ದಾರೆ.
#ShameOnYouStalin ಟ್ರೆಂಡ್
ಸೋಷಿಯಲ್ ಮೀಡಿಯಾದಲ್ಲಿ #ShameOnYouStalin ಸ್ಟಾಲಿನ್ ಅವರೇ ನಿಮಗೆ ನಾಚಿಕೆಯಾಗಬೇಕು ಎನ್ನುವ ಪದ ಟ್ರೆಂಡ್ ಸೃಷ್ಟಿ ಮಾಡಿದೆ. ಚೆನ್ನೈನ ಹೃದಯಭಾಗದಲ್ಲಿರುವ ಅಣ್ಣಾ ವಿಶ್ವವಿದ್ಯಾಲಯದಂತಹ ಪ್ರಮುಖ ಸಂಸ್ಥೆಯಲ್ಲಿ ಮಹಿಳೆಯರಿಗೆ ರಕ್ಷಣೆ ಇಲ್ಲ ಎಂದಾದರೆ ಹೇಗೆ ಎಂದು ಪ್ರಶ್ನೆ ಮಾಡಲಾಗುತ್ತಿದೆ. ಆರೋಪಿ ಜ್ಞಾನಶೇಖರನ್ ರಕ್ಷಣೆ ಮಾಡಲಾಗುತ್ತಿದೆ ಎಂದು ಬಿಜೆಪಿ ಶಾಸಕಿ ವನತಿ ಶ್ರೀನಿವಾಸನ್ ಡಿಎಂಕೆ ಪಕ್ಷವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ತೀವ್ರ ಪ್ರತಿಭಟನೆ: ಈ ಘಟನೆಗೆ ತಮಿಳುನಾಡಿನಾದ್ಯಂತ ಆಕ್ರೋಶ ವ್ಯಕ್ತವಾಗಿದ್ದು, ವಿವಿಧ ವಿದ್ಯಾರ್ಥಿಪರ ಸಂಘಟನೆಗಳು ಪ್ರತಿಭಟನೆ ಮುಂದುವರಿಸಿವೆ. ಅಣ್ಣಾ ವಿಶ್ವವಿದ್ಯಾಲಯದಲ್ಲಿ ಇರುವ ಇನ್ನುಳಿದ ವಿದ್ಯಾರ್ಥಿನಿಯರ ರಕ್ಷಣೆಗೆ ಅಗತ್ಯ ಮುಂಜಾಗ್ರತಾ ಕ್ರಮ ವಹಿಸಬೇಕು ಎನ್ನುವ ಆಗ್ರಹ ಕೇಳಿ ಬಂದಿದೆ.
ಸ್ಟಾಲಿನ್ ವಿರುದ್ಧವೂ ಆಕ್ರೋಶ: ಇನ್ನು ಈ ಕೇಸ್ ವಿಚಾರವಾಗಿ ಡಿಸಿಎಂ ಉದಯನಿಧಿ ಸ್ಟಾಲಿನ್ ವಿರುದ್ಧವೂ ಆಕ್ರೋಶ ವ್ಯಕ್ತವಾಗಿದೆ. ಮಹಿಳೆಯರಿಗೆ ಉದಯನಿಧಿ ಸ್ಟಾಲಿನ್ ಗೌರವ ನೀಡುತ್ತಿಲ್ಲ ಎನ್ನಲಾಗಿದೆ. ಮಹಿಳೆಯರ ಬಗ್ಗೆ ಮಾತನಾಡಿರುವ ವಿಡಿಯೋ ಸಹ ಸೋಷಿಯಲ್ ಮೀಡಿಯಾದಲ್ಲಿ ಟ್ರೆಂಡ್ ಆಗುತ್ತಿದೆ.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications