ಫತ್ವಾಗಳಿಗೆ ಕಾನೂನಿನ ಮಾನ್ಯತೆ ಇಲ್ಲ:ಸುಪ್ರೀಂ
ನವದೆಹಲಿ, ಜು.7: ಮುಸ್ಲಿಂ ಧಾರ್ಮಿಕ ಸಂಘಟನೆಗಳು ಫತ್ವಾ ಹೊರಡಿಸುವುದು ಕಾನೂನು ಬಾಹಿರ. ದಾರುಲ್ ಕಾಜಾ ಅಥವಾ ಮೌಲ್ವಿಗಳು ಹೊರಡಿಸುವ ಫತ್ವಾಗಳಿಗೆ ಯಾವುದೇ ರೀತಿಯ ಕಾನೂನಿನ ಮಾನ್ಯತೆ ಇಲ್ಲ ಎಂದು ಸುಪ್ರೀಂ ಕೋರ್ಟ್ ಸೋಮವಾರ ಮಹತ್ವದ ತೀರ್ಪು ನೀಡಿದೆ.
ವೈಯಕ್ತಿಕ ಹಿತಾಸಕ್ತಿಗಾಗಿ ಧರ್ಮದ ಮೇಲೆ ನಂಬಿಕೆ ಇರಿಸಿದ ಮುಗ್ದರನ್ನು ಬಲಿಪಶು ಮಾಡಬೇಡಿ. ನಿಮ್ಮ ವೈಯಕ್ತಿಕ ಹಿತಾಸಕ್ತಿಗಾಗಿ ಕಾನೂನಿನಲ್ಲಿ ಮಾನ್ಯತೆ ಇಲ್ಲ ಎಂದು ನ್ಯಾ.ಸಿ.ಕೆ.ಪ್ರಸಾದ್ ಪೀಠ ಅಭಿಪ್ರಾಯ ಪಟ್ಟಿದೆ.[ಬಾಡಿಗೆ ಮಗು: ಶಾರುಖ್ ಖಾನ್ ವಿರುದ್ಧ ಫತ್ವಾ]

ಮುಸ್ಲಿಂ ಧಾರ್ಮಿಕ ಮುಖಂಡರು ಹೊರಡಿಸುವ ಫತ್ವಾ ಕಾನೂನು ಬಾಹಿರ.ಇದರಿಂದಾಗಿ ಮುಸ್ಲಿಮರ ಧಾರ್ಮಿಕ ಭಾವನೆ ಮತ್ತು ಸ್ವಾತಂತ್ರ್ಯಕ್ಕೆ ಧಕ್ಕೆಯಾಗುತ್ತಿದೆ ಇವುಗಳನ್ನು ನಿಷೇಧಿಸಬೇಕು ಎಂದು ದೆಹಲಿ ಮೂಲದ ವಕೀಲ ವಿಶ್ವಲೋಚನ್ ಮದನ್ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.[ಮುಸ್ಲಿಮರಿಗೆ ಸ್ವಾಗತಕಾರಿಣಿ ಹುದ್ದೆ ಬೇಡ: ಫತ್ವಾ]
ಮುಸ್ಲಿಮರು ಅಧಿಕ ಸಂಖ್ಯೆಯಲ್ಲಿರುವ ದೇಶದ 60 ಜಿಲ್ಲೆಗಳಲ್ಲಿ ದಾರುಲ್ ಕ್ವಾಜಾ(Darul Qaza) ಮತ್ತು ದಾರುಲ್ ಇಫ್ತಾ (Darul-Iftaa) ಸಂಘಟನೆಗಳು ಕಾರ್ಯನಿರ್ವಹಿಸುತ್ತದೆ. ಅತ್ಯಾಚಾರ ಎಸಗಿದ ಮಾವನನ್ನೇ ಬಲವಂತವಾಗಿ ಪತಿ ಎಂದು ಸ್ವೀಕರಿಸಲು ಮುಸ್ಲಿಂ ಸಂಘಟನೆಗಳು ಯುವತಿಗೆ ಫತ್ವಾ ಹೊರಡಿಸಿವೆ ಎಂದು ವಿಶ್ವಲೋಚನ್ ಸುಪ್ರೀಂ ಕೋರ್ಟ್‌ಗೆ ತಿಳಿಸಿದ್ದರು.
ಸುಪ್ರೀಂ ತೀರ್ಪಿಗೆ ಪ್ರತಿಕ್ರಿಯೆ ನೀಡಿದ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿಯ ಸದಸ್ಯ" ನ್ಯಾಯಾಂಗದ ವಿರುದ್ಧವಾಗಿ ನಾವು ಯಾವುದೇ ಕ್ರಮಗಳನ್ನು ಕೈಗೊಂಡಿಲ್ಲ. ಸಂವಿಧಾನ ಮುಸ್ಲಿಮರಿಗೆ ಅವರ ವೈಯಕ್ತಿಕ ಕಾನೂನಿನಂತೆ ಕೆಲಸ ಮಾಡುವ ಹಕ್ಕನ್ನು ನೀಡಿದೆ" ಎಂದು ಹೇಳಿದ್ದಾರೆ.
"ಸುಪ್ರೀಂ ಕೋರ್ಟ್‌ನಲ್ಲಿ ಫತ್ವಾ ವಿಚಾರವಾಗಿ ಅರ್ಜಿ ಸಲ್ಲಿಸಿದ್ದೇ ತಪ್ಪು" ಎಂದು ಕುಲ್ ಹೈ ಸಂಘಟನೆಯ ಮೌಲಾನ ಮಹಮ್ಮದ್ ಸಜ್ದಿ ರಶ್ದಿ ಹೇಳಿದ್ದಾರೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications