• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಹಣ ಅಕ್ರಮ ವರ್ಗಾವಣೆ: ಸಂಜಯ್ ರಾವತ್ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

|
Google Oneindia Kannada News

ಮುಂಬೈ, ನ.2: ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಬಂಧಿತರಾಗಿರುವ ಶಿವಸೇನಾ ಸಂಸದ ಸಂಜಯ್ ರಾವತ್ ಅವರು ಸಲ್ಲಿಸಿರುವ ಜಾಮೀನು ಅರ್ಜಿಯ ಆದೇಶವನ್ನು ಇಲ್ಲಿನ ವಿಶೇಷ ನ್ಯಾಯಾಲಯವು ಬುಧವಾರ ಕಾಯ್ದಿರಿಸಿದೆ. ನವೆಂಬರ್ 9 ರಂದು ಆದೇಶವನ್ನು ಪ್ರಕಟಿಸುವುದಾಗಿ ಹೇಳಿರುವ ನ್ಯಾಯಾಲಯ, ಬಂಧನ ಅವಧಿಯನ್ನು ವಿಸ್ತರಿಸಿದೆ.

ರಾವತ್ ಅವರನ್ನು ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ನ. 9ರವರೆಗೆ ನ್ಯಾಯಾಂಗ ಬಂಧನವನ್ನು ವಿಸ್ತರಿಸಲಾಗಿದೆ.

ಪರಿಚಯ; ಮಾತು, ಬರಹದಲ್ಲಿ ಪ್ರಖರವಾಗಿರುವ ಸಂಜಯ್ ರಾವತ್ ಯಾರು? ಪರಿಚಯ; ಮಾತು, ಬರಹದಲ್ಲಿ ಪ್ರಖರವಾಗಿರುವ ಸಂಜಯ್ ರಾವತ್ ಯಾರು?

ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ(ಪಿಎಂಎಲ್‌ಎ)ಗೆ ಸಂಬಂಧಿಸಿದ ಪ್ರಕರಣಗಳ ವಿಚಾರಣೆಗೆ ನಿಯೋಜಿತವಾಗಿರುವ ವಿಶೇಷ ನ್ಯಾಯಾಧೀಶ ಎಂ.ಜಿ. ದೇಶಪಾಂಡೆ ಈ ಆದೇಶವನ್ನು ನೀಡಿದ್ದಾರೆ. ಇದೇ ಪ್ರಕರಣದ ಸಹ ಆರೋಪಿ ಪ್ರವೀಣ್ ರಾವತ್ ಸಲ್ಲಿಸಿರುವ ಜಾಮೀನು ಅರ್ಜಿಯ ಬಗ್ಗೆ ನ. 9 ರಂದೇ ಆದೇಶ ಹೊರಡಿಸುವುದಾಗಿ ದೇಶಪಾಂಡೆ ಹೇಳಿದ್ದಾರೆ.

ಗೋರೆಗಾಂವ್ ಪ್ರದೇಶದಲ್ಲಿನ ಪತ್ರ ಚಾಲ್ (ಸಾಲು ವಠಾರ) ಮರು ಅಭಿವೃದ್ಧಿಗೆ ಸಂಬಂಧಿಸಿದ ಹಣಕಾಸು ಅಕ್ರಮಗಳಲ್ಲಿ ರಾವತ್ ಭಾಗಿಯಾಗಿದ್ದಾರೆ ಎಂಬ ಆರೋಪಗಳು ಕೇಳಿಬಂದಿವೆ. ಈ ಆರೋಪದ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ಜುಲೈನಲ್ಲಿ ರಾಜ್ಯಸಭಾ ಸದಸ್ಯ ಸಂಜಯ್ ರಾವತ್ ಅವರನ್ನು ಬಂಧಿಸಿತ್ತು. ಈಗ ಅವರು ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿದ್ದಾರೆ. ಸೆಂಟ್ರಲ್ ಮುಂಬೈನ ಆರ್ಥರ್ ರೋಡ್ ಜೈಲಿನಲ್ಲಿ ಅವರನ್ನು ಇರಿಸಲಾಗಿದೆ. ಕಳೆದ ತಿಂಗಳು ಅವರು ನ್ಯಾಯಾಲಯಕ್ಕೆ ಜಾಮೀನು ಅರ್ಜಿ ಸಲ್ಲಿಸಿದ್ದರು, ಇದನ್ನು ಇಡಿ ವಿರೋಧಿಸಿತ್ತು.

ಇಡಿ ತನಿಖೆಯು ಪತ್ರ ಚಾಲ್‌ನ ಪುನರಾಭಿವೃದ್ಧಿಯಲ್ಲಿ ನಡೆದಿರುವ ಹಣಕಾಸಿನ ಅಕ್ರಮಗಳನ್ನು ಇಡಿ ತನಿಖೆ ನಡೆಸುತ್ತಿದೆ. ರಾವತ್ ಪತ್ನಿ ಹಾಗೂ ಸ್ನೇಹಿತರು ಈ ಪ್ರಕರಣದಲ್ಲಿ ಆರೋಪಿಗಳಾಗಿದ್ದಾರೆ.

ಗೋರೆಗಾಂವ್‌ನ ಪಾತ್ರ ಚಾಲ್ 47 ಎಕರೆಗಳಲ್ಲಿ ಹರಡಿಕೊಂಡಿದೆ ಮತ್ತು 672 ಬಾಡಿಗೆದಾರ ಕುಟುಂಬಗಳನ್ನು ಹೊಂದಿದೆ.

English summary
A special court here on Wednesday reserved its order on the bail plea filed by Shiv Sena MP Sanjay Raut, arrested in a money laundering case, and said it would pronounce the order on November 9,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X