Maha Vikas Aghadi: ಮಹಾರಾಷ್ಟ್ರದಲ್ಲಿ ಮಹಾ ಬಿರುಕು, ಕಾಂಗ್ರೆಸ್ & ಶಿವಸೇನೆ ದೋಸ್ತಿ ಪೀಸ್ ಪೀಸ್?
ಮಹಾರಾಷ್ಟ್ರ ರಾಜಕೀಯದಲ್ಲಿ ದೊಡ್ಡ ಅಲ್ಲೋಲ & ಕಲ್ಲೋಲ ಸೃಷ್ಟಿಯಾಗಿ ಹೋಗಿದ್ದು, ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ನಂತರ ಎಲ್ಲಾ ಅಯೋಮಯ ಆಗಿ ಹೋಗಿದೆ. ಈ ಚುನಾವಣೆ ಇಂಡಿಯಾ ಪೂರ್ತಿ ಸದ್ದು ಮಾಡಿತ್ತು. ಕಾಂಗ್ರೆಸ್, ಶಿವಸೇನೆ, ಎನ್‌ಸಿಪಿ ಮೈತ್ರಿ ಒಕ್ಕೂಟದ ಹೋರಾಟದ ನಡುವೆ ಕೂಡ ಹೀನಾಯ ಸೋಲು ಕಂಡಿತ್ತು ವಿರೋಧ ಪಕ್ಷಗಳ ಓಕ್ಕೂಟ. ಈ ಸೋಲಿನ ಬಳಿಕ 'ಮಹಾ ವಿಕಾಸ್ ಅಘಾಡಿ' ಮೈತ್ರಿಕೂಟ ನಡುಗಿ ಹೋಗಿದೆ.
2024ರ ಅಂತ್ಯದಲ್ಲಿ ನಡೆದಿದ್ದ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಒಟ್ಟಾರೆ 288 ಸ್ಥಾನಗಳ ಪೈಕಿ, ಬಿಜೆಪಿ ನೇತೃತ್ವದಲ್ಲಿ ಭರ್ಜರಿ ಬಹುಮತ ಗಳಿಸಿ ಮೈತ್ರಿ ಪಕ್ಷಗಳು ಅಧಿಕಾರ ಹಿಡಿದಿವೆ. ಇದು ಕಾಂಗ್ರೆಸ್, ಶಿವಸೇನೆ & ಎನ್‌ಸಿಪಿ ಮೈತ್ರಿಕೂಟದ 'ಮಹಾ ವಿಕಾಸ್ ಅಘಾಡಿ' ಬಿರುಕಿಗೆ ಕಾರಣವಾಗಿರುವ ಸಮಯದಲ್ಲೇ ಶಿವಸೇನೆ ಸ್ಫೋಟಕ ಹೆಜ್ಜೆ ಇಟ್ಟಿದೆ. ಈ ಮೂಲಕ ಕಾಂಗ್ರೆಸ್ ನಾಯಕರಿಗೆ ಮಹಾರಾಷ್ಟ್ರದಲ್ಲಿ ಇದೀಗ ದೊಡ್ಡ ಆಘಾತವೇ ಎದುರಾಗಿದೆ.

'ಇಂಡಿಯಾ' ಒಕ್ಕೂಟದಲ್ಲೂ ದೊಡ್ಡ ಬಿರುಕು?
ಅಂದಹಾಗೆ 'ಮಹಾ ವಿಕಾಸ್ ಅಘಾಡಿ' (ಎಂವಿಎ) ಮೈತ್ರಿಕೂಟದ ಪ್ರಮುಖ ಪಕ್ಷವಾಗಿರುವ ಶಿವಸೇನೆ ಮಹತ್ವದ ನಿರ್ಧಾರ ಪ್ರಕಟಿಸಿದೆ. ಶಿವಸೇನೆ ಉದ್ಧವ್ ಠಾಕ್ರೆ ಬಣದ ನಿರ್ಧಾರದಂತೆ ಈಗ, ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಏಕಾಂಗಿ ಸ್ಪರ್ಧೆ ಬಗ್ಗೆ ಇಂದು ಮಹತ್ವದ ಪ್ರಕಟಣೆ ಹೊರಬಿದ್ದಿದೆ. ಈ ಮೂಲಕ ಮತ್ತೊಮ್ಮೆ ಇಂಡಿಯಾ ಒಕ್ಕೂಟದ ಒಗ್ಗಟ್ಟಿನ ಬಗ್ಗೆ ಕೂಡ ದೊಡ್ಡ ಪ್ರಶ್ನೆ ಮೂಡುವಂತೆ ಆಗಿದೆ. ಅಲ್ಲದೆ ಮುಂದಿನ ದಿನಗಳಲ್ಲಿ ರಾಷ್ಟ್ರೀಯ ರಾಜಕೀಯದಲ್ಲೂ ಅಲ್ಲೋಲ ಕಲ್ಲೋಲ ಏರ್ಪಡುವ ಮುನ್ಸೂಚನೆ ಸಿಕ್ಕಿದೆ.
ಶಿವಸೇನೆ ನಾಯಕರು ಹೇಳಿದ್ದು ಏನು?
ಮತ್ತೊಂದು ಕಡೆ ಶಿವಸೇನೆ ಉದ್ಧವ್ ಠಾಕ್ರೆ ಬಣ ಈ ರೀತಿ ಸ್ವತಂತ್ರ ಸ್ಪರ್ಧೆ ಮಾಡುವ ನಿರ್ಧಾರ ಪ್ರಕಟಿಸಿದ ಬೆನ್ನಲ್ಲೇ ಹಲವು ರೀತಿ ಚರ್ಚೆಗಳು ಶುರುವಾಗಿವೆ. ಈ ಬಗ್ಗೆ, ಶಿವಸೇನೆ ಉದ್ಧವ್ ಠಾಕ್ರೆ ಬಣದ ನಾಯಕ ಸಂಜಯ್ ರಾವುತ್ ಪ್ರತಿಕ್ರಿಯೆ ನೀಡಿದ್ದಾರೆ. ಪಕ್ಷ ಸಂಘಟನೆ ಮತ್ತಷ್ಟು ಗಟ್ಟಿ ಆಗಬೇಕಿದ್ದು, ಈ ಹಕ್ಕು ನಮಗೆ ಇರುತ್ತದೆ ಎಂದಿದ್ದಾರೆ ಸಂಜಯ್ ರಾವುತ್.
ಅಲ್ಲದೆ ಮೈತ್ರಿಕೂಟದ ಭಾಗವಾಗಿ ನಾವು ಸ್ಪರ್ಧೆಯನ್ನ ಮಾಡಿದ್ರೆ ನಮ್ಮ ಪಕ್ಷದ ಕಾರ್ಯಕರ್ತರ ಅವಕಾಶಗಳು ಕಮ್ಮಿ ಆಗಲಿವೆ. ಈ ಮೂಲಕ ಗೊಂದಲ ಉಂಟಾಗದ ರೀತಿ ಇಂತಹ ನಿರ್ಧಾರ ಕೈಗೊಂಡು ಮುನ್ನುಗ್ಗಲಿದ್ದೇವೆ ಎಂದಿದ್ದಾರೆ ರಾವುತ್. ಇದು ಶಿವಸೇನೆಯ ಸ್ಪಷ್ಟನೆಯಾಗಿದ್ದು, ಇದರಿಂದ ಹೊಸ ತಲ್ಲಣವೇ ಎದ್ದಿದೆ.
ಇಷ್ಟೆಲ್ಲಾ ಬೆಳವಣಿಗೆ ನಡೆದರೂ ಕಾಂಗ್ರೆಸ್ ಹೈಕಮಾಂಡ್ ಮಾತ್ರ ಯಾವುದೇ ಸ್ಪಷ್ಟನೆಯನ್ನ ನೀಡಿಲ್ಲ & ಪ್ರತಿಕ್ರಿಯೆ ಕೂಡ ಕೊಟ್ಟಿಲ್ಲ. ಹೀಗಾಗಿ ಕಾಂಗ್ರೆಸ್ ನಾಯಕರ ನಡೆ ಈಗ ಕುತೂಹಲ ಕೆರಳಿಸಿದೆ. ಮತ್ತೊಂದು ಕಡೆ ವಿಪಕ್ಷಗಳ ಒಳಗಿನ ಈ ಬಿರುಕು, ಬಿಜೆಪಿ ನೇತೃತ್ವದ ಸರ್ಕಾರಕ್ಕೆ ಇನ್ನಷ್ಟು ಪ್ಲಸ್ ಪಾಯಿಂಟ್ ಆಗುವ ನಿರೀಕ್ಷೆ ಕೂಡ ಇದೆ.
-
ಬೆಂಗಳೂರು ಬಂಗಲೆ ವಿವಾದ: ರಾಜೀವ್ ಚಂದ್ರಶೇಖರ್ ನಾಮಪತ್ರ ಅಂಗೀಕರಿಸಿದ ಚುನಾವಣಾ ಆಯೋಗ -
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್












Click it and Unblock the Notifications