Shivaji Statue Collapses: ಮೋದಿ ಅನಾವರಣಗೊಳಿಸಿದ್ದ ಛತ್ರಪತಿ ಶಿವಾಜಿ ಪ್ರತಿಮೆ ಕುಸಿತ
ಮುಂಬೈ ಆಗಸ್ಟ್ 27: ಕಳೆದ ವರ್ಷ ನೌಕಾಪಡೆಯ ದಿನದಂದು ಮಹಾರಾಷ್ಟ್ರದ ಸಿಂಧುದುರ್ಗದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಅನಾವರಣಗೊಳಿಸಿದ್ದ ಛತ್ರಪತಿ ಶಿವಾಜಿ ಪ್ರತಿಮೆ ಕುಸಿದು ಬಿದ್ದಿದೆ. ಈ ಘಟನೆಯಿಂದಾಗಿ ಭಾರತೀಯ ನೌಕಾಪಡೆ ಕಳವಳ ವ್ಯಕ್ತಪಡಿಸಿದ್ದು ತನಿಖೆಗೆ ಆದೇಶಿಸಿದೆ. ಶಿವಾಜಿ ಪ್ರತಿಮೆ ಕುಸಿಯಲು ಕಾರಣ ಪತ್ತೆ ಹಚ್ಚಿ, ದುರಸ್ತಿ ಕಾರ್ಯ ಆರಂಭಿಸಲು ತಂಡವನ್ನು ನಿಯೋಜಿಸಲಾಗಿದೆ.
ಹೌದು.. ಕಳೆದ ವರ್ಷ ನೌಕಾಪಡೆಯ ದಿನದಂದು ಈ ಪ್ರತಿಮೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಅನಾವರಣಗೊಳಿಸಿದ್ದರು. ಸಿಂಧುದುರ್ಗ ಜಿಲ್ಲೆಯ ರಾಜ್‌ಕೋಟ್ ಕೋಟೆಯಲ್ಲಿ ಸೋಮವಾರ ಮಧ್ಯಾಹ್ನ 1 ಗಂಟೆ ಸುಮಾರಿಗೆ 35 ಅಡಿ ಎತ್ತರದ ಪ್ರತಿಮೆ ಕುಸಿದು ಬಿದ್ದಿದೆ.

ಈ ಬಗ್ಗೆ ಭಾರತೀಯ ನೌಕಾಪಡೆ ತಡರಾತ್ರಿ ಹೇಳಿಕೆ ನೀಡಿದೆ. ಘಟನೆಯ ಕಾರಣವನ್ನು ತಕ್ಷಣವೇ ತನಿಖೆ ಮಾಡಲು ಮತ್ತು ಸಾಧ್ಯವಾದಷ್ಟು ಬೇಗ ಪ್ರತಿಮೆಯನ್ನು ಸರಿಪಡಿಸಿ ಪುನಃಸ್ಥಾಪಿಸಲು ತಂಡವನ್ನು ನಿಯೋಜಿಸಲಾಗಿದೆ ಎಂದು ಅದು ಹೇಳಿದೆ. ಡಿಸೆಂಬರ್ 4, 2023 ರಂದು ನೌಕಾಪಡೆಯ ದಿನದಂದು ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಅನಾವರಣಗೊಳಿಸಿದ್ದರು. ಆದರೆ ಅದು ಒಂದು ವರ್ಷ ಪೂರ್ಣಗೊಳಿಸುವ ಮುನ್ನವೇ ನೆಲಕ್ಕಚ್ಚಿದೆ. ಈ ಘಟನೆ ಸಿಂಧುದುರ್ಗದ ನಿವಾಸಿಗಳ ಆತಂಕವನ್ನು ಹೆಚ್ಚಿಸಿದೆ. ಇದರ ಹಿಂದಿನ ಸೂಚನೆ ಬಗ್ಗೆ ಸ್ಥಳೀಯರು ಆತಂಕಗೊಂಡಿದೆ.
ಇನ್ನೊಂದೆಡೆ ಪ್ರತಿಮೆ ನಿರ್ಮಾಣ ಮಾಡಲು ಕಳಪೆ ಮಟ್ಟದ ವಸ್ತುಗಳನ್ನು ಬಳಕೆ ಮಾಡಿರುವುದೇ ಪ್ರತಿಮೆ ಕುಸಿಯಲು ಕಾರಣ ವಿಪಕ್ಷಗಳು ಆರೋಪ ಮಾಡಿವೆ. ಈ ಘಟನೆ ವಿರೋಧ ಪಕ್ಷಗಳ ವಾಗ್ದಾಳಿಗೂ ಕಾರಣವಾಗಿದೆ. ಮೋದಿ ಸರ್ಕಾರದಲ್ಲಿ ಕಾಮಗಾರಿಗಳು ಕಳಪೆ ಮಟ್ಟದ್ದಾಗಿರುತ್ತವೆ ಅನ್ನೋದಕ್ಕೆ ಇದೊಂದು ನೇರ ನಿದರ್ಶನ ಎಂದು ವಿಪಕ್ಷಗಳು ದಾಳಿ ಮಾಡಿವೆ.

ಗುತ್ತಿಗೆದಾರರ ವಿರುದ್ಧ ಯಾವ ಕ್ರಮ ಕೈಗೊಳ್ಳಲಾಗುವುದು? ಪ್ರಿಯಾಂಕಾ ಚತುರ್ವೇದಿ ಪ್ರಶ್ನೆ
ಪ್ರತಿಮೆ ನಿರ್ಮಾಣ ಕಾಮಗಾರಿಯ ಕಳಪೆ ಗುಣಮಟ್ಟದ ಬಗ್ಗೆ ವಿರೋಧ ಪಕ್ಷಗಳು ಮಹಾರಾಷ್ಟ್ರದ ಮಹಾಯುತಿ ಸಮ್ಮಿಶ್ರ ಸರ್ಕಾರ ಮತ್ತು ಬಿಜೆಪಿ ವಿರುದ್ಧ ವಾಗ್ದಾಳಿ ಮಾಡಿದೆ. ಪ್ರತಿಮೆ ನಿರ್ಮಾಣದ ಗುತ್ತಿಗೆ ನೀಡುವಲ್ಲಿ ಎಷ್ಟು ಕೋಟಿ ರೂಪಾಯಿ ಭ್ರಷ್ಟಾಚಾರ ನಡೆದಿದೆ ಎಂದು ಶಿವಸೇನೆ (ಯುಬಿಟಿ) ರಾಜ್ಯಸಭಾ ಸಂಸದೆ ಪ್ರಿಯಾಂಕಾ ಚತುರ್ವೇದಿ ಪ್ರಶ್ನಿಸಿದ್ದಾರೆ.

ಸೋಷಿಯಲ್ ಮೀಡಿಯಾ ಪ್ಲಾಟ್‌ಫಾರ್ಮ್ ಎಕ್ಸ್‌ನಲ್ಲಿ ಪ್ರಿಯಾಂಕಾ ಚತುರ್ವೇದಿ ರಾಜ್ಯ ಸರ್ಕಾರಕ್ಕೆ ಪ್ರಶ್ನೆಗಳನ್ನು ಎತ್ತಿದ್ದಾರೆ. ''ಇದನ್ನು ನಿರ್ಮಾಣ ಮಾಡಿದ ಗುತ್ತಿಗೆದಾರ ಯಾರು? ಥಾಣೆ ಮೂಲದ ಗುತ್ತಿಗೆದಾರರಿಗೆ ಕಾಮಗಾರಿ ನೀಡಿರುವುದು ನಿಜವೇ? ಗುತ್ತಿಗೆದಾರರ ವಿರುದ್ಧ ಯಾವ ಕ್ರಮ ಕೈಗೊಳ್ಳಲಾಗುವುದು? 'ದೋಕಾ ಸರ್ಕಾರ'ಕ್ಕೆ ಗುತ್ತಿಗೆದಾರರು ಕೊಟ್ಟ 'ಹಣ' ಎಷ್ಟು?'' ಎಂದು ಕೆಣಕಿದ್ದಾರೆ.
The statue of Chhatrapati Shivaji Maharaj erected at Sindhudurg collapsed today. Modiji had inaugurated the structure in December last year
— Priyanka Chaturvedi🇮🇳 (@priyankac19) August 26, 2024
- who was the contractor?
- is it correct that the work was given to a Thane based contractor?
- what action will be taken against the… pic.twitter.com/oHxxdgMCpf
ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಒವೈಸಿ ಕಿಡಿ
ಅಲ್ಲದೆ ಈ ಘಟನೆಯ ಬಗ್ಗೆ ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ ಅಧ್ಯಕ್ಷ ಅಸಾದುದ್ದೀನ್ ಓವೈಸಿ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಸಾದುದ್ದೀನ್ ಓವೈಸಿ ಅವರು ಸೋಷಿಯಲ್ ಮೀಡಿಯಾ ಪ್ಲಾಟ್‌ಫಾರ್ಮ್ ಎಕ್ಸ್‌ನಲ್ಲಿ, '35 ಅಡಿ ಎತ್ತರದ ಶಿವಾಜಿ ಪ್ರತಿಮೆಯನ್ನು ನರೇಂದ್ರ ಮೋದಿ ಉದ್ಘಾಟಿಸಿ ಒಂದು ವರ್ಷದ ನಂತರ ಕುಸಿದಿದೆ. ಇದು ಮೋದಿ ಸರಕಾರ ಸೃಷ್ಟಿಸಿರುವ ಮೂಲಸೌಕರ್ಯದ ಕಳಪೆ ಗುಣಮಟ್ಟವನ್ನು ಪ್ರತಿಬಿಂಬಿಸುತ್ತದೆ. ಶಿವಾಜಿ ಅವರು ಸಮಾನತೆ ಮತ್ತು ಜಾತ್ಯತೀತತೆಯ ಸಂಕೇತವಾಗಿದ್ದರು, ಅವರ ಪ್ರತಿಮೆಯ ಪತನವು ಶಿವಾಜಿಯ ದೃಷ್ಟಿಗೆ ನರೇಂದ್ರ ಮೋದಿಯವರ ಬದ್ಧತೆಯ ಕೊರತೆಯನ್ನು ತೋರಿಸುತ್ತದೆ' ಎಂದು ಕಿಡಿ ಕಾರಿದ್ದಾರೆ.
The 35-feet Shivaji Statue inaugurated by @narendramodi collapsed today. It’s a reflection of the poor quality of infrastructure built by Modi sarkar. Shivaji was a symbol of equality & secularism, his statue’s collapse is an example of @narendramodi’s lack of commitment to… pic.twitter.com/BY6VysT2G1
— Asaduddin Owaisi (@asadowaisi) August 26, 2024
-
ಬಾಗಲಕೋಟೆ, ದಾವಣಗೆರೆ ಉಪಚುನಾವಣೆ: ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ನಿಶ್ಚಿತ-ಬಿ.ಎಸ್.ಯಡಿಯೂರಪ್ಪ -
Vijay Thalapathi: ಟಿವಿಕೆ ಸಂಸ್ಥಾಪಕ, ನಟ ವಿಜಯ್ ದಳಪತಿ ವಿರುದ್ಧ ಪ್ರಕರಣ ದಾಖಲು -
Thalapathy Vijay Assets: ನಾಮಪತ್ರ ಸಲ್ಲಿಸಿದ ವಿಜಯ್, ಇವರ ಒಟ್ಟು ಆಸ್ತಿ ಎಷ್ಟು? ಇಲ್ಲಿದೆ ಮಾಹಿತಿ -
ಉಜ್ವಲ ಯೋಜನೆ ಬದಲು ಸೌದೆ ಒಲೆ ಯೋಜನೆ: ಡಿಸಿಎಂ ಡಿ.ಕೆ. ಶಿವಕುಮಾರ್ ಕಿಡಿ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ












Click it and Unblock the Notifications