ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮಧ್ಯಪ್ರದೇಶದಲ್ಲಿ ಮತ್ತೆ ಬಿಜೆಪಿಯೇ ಅಧಿಕಾರಕ್ಕೆ! ಚೌಹಾಣ್ ವಿಶ್ವಾಸ

|
Google Oneindia Kannada News

ಇಂದೋರ್, ಅಕ್ಟೋಬರ್ 22: 'ಮಧ್ಯಪ್ರದೇಶದಲ್ಲಿ ಮತ್ತೆ ಬಿಜೆಪಿಯೇ ಅಧಿಕಾರಕ್ಕೆ ಬರಲಿದೆ' ಎಂದು ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇಂದೋರ್ ನಲ್ಲಿ ನಡೆದ ಜನಾಶೀರ್ವಾದ ಯಾತ್ರೆಯಲ್ಲಿ ಮಾತನಾಡುತ್ತಿದ್ದ ಅವರು, ಗೆಲ್ಲುವ ಸಂಪೂರ್ಣ ವಿಶ್ವಾಸ ವ್ಯಕ್ತಪಡಿಸಿದರು.

ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಮುಗಿಬೀಳುತ್ತಿರುವ ಸಂಸದರುವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಮುಗಿಬೀಳುತ್ತಿರುವ ಸಂಸದರು

'ನಾವು ಇಷ್ಟು ವರ್ಷದ ಆಡಳಿತದಲ್ಲಿ ಮಧ್ಯಪ್ರದೇಶವನ್ನು ಅಭಿವೃದ್ಧಿಯತ್ತ ಕೊಂಡೊಯ್ದಿದ್ದೇವೆ. ಮತ್ತೆ ಅಧಿಕಾರಕ್ಕೆ ಬಂದು ಮಧ್ಯಪ್ರದೇಶವನ್ನು ದೇಶದಲ್ಲೇ ಅತ್ಯುತ್ತಮ ರಾಜ್ಯವನ್ನಾಗಿ ಮಾಡುತ್ತೇವೆ' ಎಂದು ಅವರು ಹೇಳಿದರು.

ಸಮೀಕ್ಷೆಗಳ ಸಮೀಕ್ಷೆ: ಮಧ್ಯಪ್ರದೇಶದಲ್ಲಿ ಮೋದಿ ಬಲದಿಂದ ಮತ್ತೆ ಅಧಿಕಾರಸಮೀಕ್ಷೆಗಳ ಸಮೀಕ್ಷೆ: ಮಧ್ಯಪ್ರದೇಶದಲ್ಲಿ ಮೋದಿ ಬಲದಿಂದ ಮತ್ತೆ ಅಧಿಕಾರ

ಇದೇ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷವನ್ನು ತರಾಟೆಗೆ ತೆಗೆದುಕೊಂಡ ಅವರು, '2003 ರಲ್ಲಿ ಮಧ್ಯಪ್ರದೇಶದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವ ಸಮಯದಲ್ಲಿ ರಾಜ್ಯದ ಪರಿಸ್ಥಿತಿ ತೀರಾ ಚಿಂತಾಜನಕವಾಗಿತ್ತು. ಕಾಂಗ್ರೆಸ್ ಪಕ್ಷವು ತನ್ನ ಆಳ್ವಿಕೆಯಲ್ಲಿ ದೇಶವನ್ನು ಕತ್ತಲೆಗೆ ದೂಡಿತ್ತು. ರಾಜ್ಯವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯಲು ನಾವು ಸಾಕಷ್ಟು ಪ್ರಯತ್ನ ಮಾಡಿದ್ದೇವೆ' ಎಂದರು.

ಬಿಜೆಪಿ ಮೇಲೆ ಮೇಲ್ಜಾತಿಯ ಮುನಿಸು: ಸಂಧಾನಕ್ಕೆ ಬಂದ ಆರೆಸ್ಸೆಸ್?!ಬಿಜೆಪಿ ಮೇಲೆ ಮೇಲ್ಜಾತಿಯ ಮುನಿಸು: ಸಂಧಾನಕ್ಕೆ ಬಂದ ಆರೆಸ್ಸೆಸ್?!

Shivraj Singh Chouhan says he is confident that BJP will come to power again

ಮಧ್ಯಪ್ರದೇಶದಲ್ಲಿ ನವೆಂಬರ್ 28 ರಂದು ವಿಧಾನಸಭೆ ಚುನಾವಣೆ ನಡೆಯಲಿದ್ದು ಡಿಸೆಂಬರ್ 11 ರಂದು ಫಲಿತಾಂಶ ಹೊರಬೀಳಲಿದೆ. ಒಟ್ಟು 230 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ಮಧ್ಯಪ್ರದೇಶದಲ್ಲಿ ಸರ್ಕಾರ ರಚಿಸಲು ಬೇಕಿರುವ ಮ್ಯಾಜಿಕ್ ನಂಬರ್ 116. ಮೂರು ಅವಧಿಯಲ್ಲೂ ಬಿಜೆಪಿಯೇ ಅಧಿಕಾರಕ್ಕೆ ಬಂದಿದ್ದು, ಇದೀಗ ಬಿಜೆಪಿಯ ನಾಗಾಲೋಟಕ್ಕೆ ಬ್ರೇಕ್ ಹಾಕಲು ಕಾಂಗ್ರೆಸ್ ಪ್ರಯತ್ನಿಸುತ್ತಿದೆ.

English summary
Madhya Pradesh chief minister Sivraj Singh Chouhan says, he is confident that BJP will come to power in Madhya Pradesh again.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X