Haryana Assembly Election 2024 Results: ವಿನೇಶ್ ಪೋಗಟ್‌ಗೆ ಶಾಕ್; ಪ್ರಾರಂಭಿಕ ಹಿನ್ನಡೆ, ಬಿಜೆಪಿ ಅಭ್ಯರ್ಥಿ ಮುನ್ನಡೆ
ಹರಿಯಾಣ ಹಾಗೂ ಜಮ್ಮು ಮತ್ತು ಕಾಶ್ಮೀರದ ವಿಧಾನಸಭೆ ಚುನಾವಣಾ ಫಲಿತಾಂಶ ಹೆಚ್ಚು ಕಾವು ಪಡೆದುಕೊಳ್ಳುತ್ತಿದೆ. ಕ್ಷಣದಿಂದ ಕ್ಷಣಕ್ಕೆ ಚುನಾವಣಾ ಟ್ರೆಂಡ್ ಬದಲಾಗುತ್ತಲ್ಲೇ ಇದೆ. ಕುಸ್ತಿಪಟು ಹಾಗೂ ಕಾಂಗ್ರೆಸ್‌ನಿಂದ ಸ್ಪರ್ಧೆ ಮಾಡಿದ್ದ ವಿನೇಶ್ ಪೋಗಟ್ ಅವರಿಗೆ ಪ್ರಾರಂಭಿಕ ಹಿನ್ನಡೆ ಆಗಿದೆ. ಈ ಎರಡು ವಿಧಾನಸಭೆ ಚುನಾವಣೆ ಫಲಿತಾಂಶಗಳು ಭಾರೀ ಕುತೂಹಲ ಮೂಡಿಸಿವೆ. ಅಲ್ಲದೇ ವಿನೇಶ್ ಫೋಗಟ್ ಅವರು ಬಿಜೆಪಿಗೆ ಸೆಡ್ಡು ಹೊಡೆದು ಚುನಾವಣಾ ಕಣಕ್ಕೆ ಇಳಿದಿದ್ದರು. ಆದರೆ, ಪ್ರಾರಂಭದ ಮತ ಎಣೆಕೆಯಲ್ಲಿ ಅವರು ಮುನ್ನಡೆ ಕಾಯ್ದುಕೊಂಡಿದ್ದರು. ಇದೀಗ ಅವರಿಗೆ ಪ್ರಾರಂಭಿಕ ಹಿನ್ನಡೆ ಆಗಿದೆ.
ಹರಿಯಾಣ ವಿಧಾನಸಭೆ ಚುನಾವಣೆಯ ಕ್ಷೇತ್ರ ಸಂಖ್ಯೆ 90 ಇದೆ. ಇದರ ಮ್ಯಾಜಿಕ್ ಸಂಖ್ಯೆ 46 ಇದೆ. ಕೇಂದ್ರ ಸರ್ಕಾರ, ಬಿಜೆಪಿ ಹಾಗೂ ಕುಸ್ತಿಪಟು ವಿನೇಶ್ ಪೋಗಟ್ ಅವರ ನಡುವೆ ಸಂಘರ್ಷ ಏರ್ಪಟ್ಟಿತ್ತು. ಈಚೆಗೆ ಅವರು ಕಾಂಗ್ರೆಸ್ ಸೇರ್ಪಡೆಯಾಗಿದ್ದರು. ಈ ಬಾರಿಯ ಹರಿಯಾಣ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಕಣಕ್ಕೆ ಇಳಿದು, ರಾಜಕೀಯದಲ್ಲೂ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ. ಆದರೆ, ಪ್ರಾರಂಭದಲ್ಲಿ ಮುನ್ನಡೆ ಕಾಯ್ದುಕೊಂಡಿದ್ದ ಅವರು ಇದೀಗ ಬಿಜೆಪಿ ಅಭ್ಯರ್ಥಿ ಯೋಗೇಶ್ ಕುಮಾರ್ ಅವರ ವಿರುದ್ಧ ಹಿನ್ನಡೆ ಅನುಭವಿಸಿದ್ದಾರೆ.

ವಿನೇಶ್ ಪೋಗಟ್‌ಗೆ ಪ್ರಾರಂಭಿಕ ಹಿನ್ನಡೆ
ಹರಿಯಾಣ ವಿಧಾನಸಭೆ ಚುನಾವಣೆಯ ಮತದಾನ ಮಂಗಳವಾರ ಮುಂಜಾನೆಯಿಂದ ಪ್ರಾರಂಭವಾಗಿದೆ. ವಿನೇಶ್ ಪೋಗಟ್ ಅವರು ಸ್ಪರ್ಧೆ ಮಾಡಿರುವ ಕ್ಷೇತ್ರದಲ್ಲಿ ಒಟ್ಟು 15 ಸುತ್ತಿನ ಮತ ಎಣಿಕೆ ನಡೆಯಲಿದೆ. ಮೊದಲ ಎರಡು ಹಂತದಲ್ಲಿ ವಿನೇಶ್ ಪೋಗಟ್ ಅವರು ಭಾರೀ ಮುನ್ನಡೆಯನ್ನು ಸಾಧಿಸಿದ್ದರು. ಆದರೆ, ಇದೀಗ ಮೂರು ಹಾಗೂ ನಾಲ್ಕನೇ ಸುತ್ತಿನ ಮತ ಎಣಿಕೆ ನಡೆಯುತ್ತಿದ್ದು, ವಿನೇಶ್ ಅವರ ಪ್ರತಿಸ್ಪರ್ಧಿ ಹಾಗೂ ಬಿಜೆಪಿ ಅಭ್ಯರ್ಥಿ ಮುನ್ನಡೆ ಸಾಧಿಸಿದ್ದಾರೆ. ವಿನೇಶ್ ಅವರಿಗೆ 12,290 ಮತಗಳು ಬಂದಿದ್ದು, ಯೋಗೇಶ್‌ಗೆ 14,329 ಮತಗಳು ಬಂದಿವೆ. ಈ ಮೂಲಕ ವಿನೇಶ್ ಪೋಗಟ್ ಅವರು 2039 ಮತಗಳ ಪ್ರಾರಂಭಿಕ ಹಿನ್ನಡೆಯನ್ನು ಅನುಭವಿಸಿದ್ದಾರೆ.
ಬಿಜೆಪಿ ಹ್ಯಾಟ್ರಿಕ್ ಕನಸು ನನಸು: ಹರಿಯಾಣದಲ್ಲಿ ಈ ಬಾರಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ. ಬಿಜೆಪಿಯ ಹ್ಯಾಟ್ರಿಕ್ ಕನಸು ಭಗ್ನವಾಗಲಿದೆ ಎಂದೇ ಹೇಳಲಾಗಿತ್ತು. ಎಕ್ಸಿಟ್ ಪೋಲ್‌ಗಳು ಸಹ ಇದೇ ಭವಿಷ್ಯವನ್ನು ನುಡಿದಿದ್ದವು. ಆದರೆ, ಈ ಲೆಕ್ಕಾಚಾರ ತಲೆಕೆಳಗಾಗಿದ್ದು, ಹರಿಯಾಣದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರುವ ಮುನ್ಸೂಚನೆ ಸಿಗುತ್ತಿದೆ. ಕಳೆದ 10 ವರ್ಷಗಳಿಂದ ಹರಿಯಾಣದಲ್ಲಿ ಬಿಜೆಪಿ ಸರ್ಕಾರ ಇದೆ.
ಹಲವು ಕಾರಣಗಳಿಂದ ಈ ಬಾರಿ ಬಿಜೆಪಿಗೆ ಸೋಲಾಗಲಿದ್ದು, ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಖಚಿತ ಎಂದೇ ಹೇಳಲಾಗಿತ್ತು. ಪ್ರಾರಂಭದ ಮತ ಎಣಿಕೆಯಲ್ಲಿ ಕಾಂಗ್ರೆಸ್‌ನ ಅಭ್ಯರ್ಥಿಗಳೇ ಮುನ್ನಡೆ ಕಾಪಾಡಿಕೊಂಡಿದ್ದರು. ಆದರೆ, ಮಧ್ಯಾಹ್ನದ ವೇಳೆಗೆ ಚುನಾವಣಾ ಲೆಕ್ಕಾಚಾರ ತಲೆಕೆಳಗಾಗಿದೆ. ಇದೀಗ ಹಲವು ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿಕೊಂಡಿದ್ದು, ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುವ ಮುನ್ಸೂಚನೆ ಸಿಕ್ಕಿದೆ.












Click it and Unblock the Notifications