ಬಿಟಿಪಿಎಸ್‌ನಲ್ಲಿ ಕಲ್ಲಿದ್ದಲು ಕೊರತೆ, ವಿದ್ಯುತ್ ಉತ್ಪಾದನೆ ಸ್ಥಗಿತ?

Posted By: Gururaj
Subscribe to Oneindia Kannada

ಬಳ್ಳಾರಿ, ನವೆಂಬರ್ 23 : ಬಿಟಿಪಿಎಸ್‌ನಲ್ಲಿ ಕಲ್ಲಿದ್ದಲು ಕೊರತೆ ಉಂಟಾಗಿದ್ದು ವಿದ್ಯುತ್ ಉತ್ಪಾದನೆ ಸ್ಥಗಿತಗೊಳ್ಳುವ ಆತಂಕ ಎದುರಾಗಿದೆ. ಪ್ರತಿದಿನ 17ಸಾವಿರ ಟನ್ ಕಲ್ಲಿದ್ದಲಿನ ಅಗತ್ಯವಿದೆ.

ವಿದ್ಯುತ್ ಖರೀದಿ ಹಗರಣದ ವರದಿ ಮಂಡನೆ, ಶಿಫಾರಸುಗಳು

ಬಳ್ಳಾರಿ ಶಾಖೋತ್ಪನ್ನ ವಿದ್ಯುತ್ ಕೇಂದ್ರ (ಬಿಟಿಪಿಎಸ್‌) ನಲ್ಲಿ ಎರಡು ದಿನಕ್ಕೆ ಸಾಕಾಗುವಷ್ಟು ಮಾತ್ರ ಕಲ್ಲಿದ್ದಲು ಸಂಗ್ರಹವಿದೆ. ಕಲ್ಲಿದ್ದಲು ಸರಬರಾಜು ಆಗದಿದ್ದರೆ ವಿದ್ಯುತ್ ಉತ್ಪಾದನೆ ಸ್ಥಗಿತಗೊಳ್ಳಲಿದ್ದು, ಲೋಡ್ ಶೆಡ್ಡಿಂಗ್ ಸಮಸ್ಯೆ ಎದುರಾಗಲಿದೆ.

ಲೋಡ್ ಶೆಡ್ಡಿಂಗ್ ಅನಿವಾರ್ಯ : ಡಿ.ಕೆ.ಶಿವಕುಮಾರ್

Shortage of coal leads to load-shedding

ಬಿಟಿಪಿಎಸ್ ಎರಡು ಘಟಕಗಳಲ್ಲಿ ಪ್ರತಿನಿತ್ಯ ವಿದ್ಯುತ್ ಉತ್ಪಾದನೆ ಮಾಡಲು 17 ಸಾವಿರ ಟನ್ ಕಲ್ಲಿದ್ದಲು ಬೇಕು. ಆದರೆ, 9 ಸಾವಿರ ಟನ್ ಕಲ್ಲಿದ್ದಲು ಸಂಗ್ರಹ ಮಾತ್ರವಿದೆ. ಆದ್ದರಿಂದ, ವಿದ್ಯುತ್ ಉತ್ಪಾದನೆ ಕಡಿಮೆಯಾಗಿದೆ.

500 ಮೆಗಾವಾಟ್ ವಿದ್ಯುತ್ ಉತ್ಪಾದನೆ ಮಾಡಲು 5 ಸಾವಿರ ಟನ್ ಕಲ್ಲಿದ್ದಲು ಬೇಕು. ಸಿಂಗರೇಣಿ ಕೋಲ್‌ನಿಂದ ಕಲ್ಲಿದ್ದಲು ಪೂರೈಕೆ ಸ್ಥಗಿತಗೊಂಡಿದೆ. ಆದ್ದರಿಂದ, ವಿದ್ಯುತ್ ಉತ್ಪಾದನೆ ಕಡಿಮೆಯಾಗಿದೆ.

ಅಗತ್ಯಬಿದ್ದಲ್ಲಿ 10 ಲಕ್ಷ ಟನ್ ಕಲ್ಲಿದ್ದಲು ಖರೀದಿ: ಡಿಕೆ ಶಿವಕುಮಾರ್

ಇನ್ನೂ ಎರಡು ದಿನದಲ್ಲಿ ಕಲ್ಲಿದ್ದಲು ಪೂರೈಕೆ ಆಗದಿದ್ದರೆ ವಿದ್ಯುತ್ ಪೂರೈಕೆ ಸ್ಥಗಿತಗೊಳ್ಳಲಿದೆ. ವಿದ್ಯುತ್ ಪೂರೈಕೆ ಸ್ಥಗಿತಗೊಂಡರೆ ಅನಿಯಮಿತ ಲೋಡ್ ಶೆಡ್ಡಿಂಗ್ ಜಾರಿಗೆ ಬರಲಿದೆ.

ಇಂಧನ ಸಚಿವ ಡಿ.ಕೆ.ಶಿವಕುಮಾರ್ ಅವರು ಕಳೆದ ವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ರಾಜ್ಯದ ವಿದ್ಯುತ್ ಸಮಸ್ಯೆ ಬಗ್ಗೆ ವಿವರಣೆ ನೀಡಿದ್ದರು. ಶಾಖೋತ್ಪನ್ನ ಕೇಂದ್ರದಲ್ಲಿ ಕಲ್ಲಿದ್ದಲು ಕೊರತೆ ಇದೆ ಎಂಬ ಕುರಿತು ಮಾಹಿತಿ ನೀಡಿದ್ದರು.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Ballari Thermal Power Station (BTPS) facing Shortage of coal. Load-shedding may implemented if power generation stopped at a station.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ