Shraddha Walkar Murder: 100 ಸಾಕ್ಷಿಗಳೊಂದಿಗೆ 3000 ಪುಟಗಳ ಚಾರ್ಜ್‌ಶೀಟ್ ಸಿದ್ಧಪಡಿಸಿದ ದೆಹಲಿ ಪೊಲೀಸರು
ನವದೆಹಲಿ, ಜನವರಿ, 22: ತಾನು ಪ್ರೀತಿಸಿದ ಯುವತಿಯನ್ನೇ ಬರ್ಬರವಾಗಿ ಹತ್ಯೆ ಮಾಡಿ ದೇಶದಲ್ಲೇ ಆತಂಕ ಮೂಡಿಸಿದ್ದ ಶ್ರದ್ಧಾ ವಾಕರ್ ಹತ್ಯೆ ಪ್ರಕರಣದ ಆರೋಪಿ ಆಫ್ತಾಬ್ ಪೂನಾವಾಲಾ ವಿರುದ್ಧ ದೆಹಲಿ ಪೊಲೀಸರು 3,000 ಪುಟಗಳ ಕರಡು ಚಾರ್ಜ್‌ಶೀಟ್ ಸಿದ್ಧಪಡಿಸಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.
ತನ್ನ ಸಂಗಾತಿ ಶ್ರದ್ಧಾ ವಾಕರ್ ಅವರನ್ನು ಹತ್ಯೆಗೈದು ಆಕೆಯ ದೇಹವನ್ನು 35 ತುಂಡುಗಳಾಗಿ ಕತ್ತರಿಸಿದ ಆಫ್ತಾಬ್ ಪೂನಾವಾಲಾ, ಆಕೆಯ ದೇಹವನ್ನು 35 ತುಂಡುಗಳಾಗಿ ಕತ್ತರಿಸಿ ಫ್ರಿಡ್ಜ್‌ನಲ್ಲಿ ಇಟ್ಟಿದ್ದರು. ನಂತರ 18 ದಿನಗಳ ಕಾಲ ದಕ್ಷಿಣ ದೆಹಲಿಯ ಮೆಹ್ರೌಲಿಯಲ್ಲಿರುವ ಅವರ ಬಾಡಿಗೆ ಫ್ಲಾಟ್‌ನ ಬಳಿ ಕಾಡಿನಲ್ಲಿ ಎಸೆದಿದ್ದರು.
ದೆಹಲಿ ಪೊಲೀಸರು ಸಿದ್ಧಪಡಿಸಿರುವ ಈ 3,000 ಪುಟಗಳ ಕರಡು ಚಾರ್ಜ್‌ಶೀಟ್‌ನಲ್ಲಿ 100 ಕ್ಕೂ ಹೆಚ್ಚು ಸಾಕ್ಷಿಗಳ ಸಾಕ್ಷ್ಯವನ್ನು ದಾಖಲಿಸಲಾಗಿದೆ. ಇದರಲ್ಲಿ ನಿರ್ಣಾಯಕ ಎಲೆಕ್ಟ್ರಾನಿಕ್ ಮತ್ತು ಫೋರೆನ್ಸಿಕ್ ಪುರಾವೆಗಳ ಆಧಾರವಿದೆ. ಪೊಲೀಸರು ಹಲವು ತಿಂಗಳುಗಳ ತನಿಖೆ ಮಾಡಿ ಈ ಸಾಕ್ಷಿಗಳನ್ನು ಸಂಗ್ರಹಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಸದ್ಯ ಈ ಆರೋಪ ಪಟ್ಟಿಯನ್ನು ಕಾನೂನು ತಜ್ಞರು ಪರಿಶೀಲಿಸುತ್ತಿದ್ದಾರೆ. ಆರೋಪಿ ಅಫ್ತಾಬ್ ಪೂನಾವಾಲಾರ ನಾರ್ಕೋ ಪರೀಕ್ಷೆಯ ಫಲಿತಾಂಶ ಮತ್ತು ವಿಧಿವಿಜ್ಞಾನ ಪರೀಕ್ಷೆಯ ವರದಿಗಳ ಜೊತೆಗೆ ಆತನ ತಪ್ಪೊಪ್ಪಿಗೆಯನ್ನು ಕೂಡ ಪೊಲೀಸರು ಆರೋಪಪಟ್ಟಿಯಲ್ಲಿ ಉಲ್ಲೇಖಿಸಿದ್ದಾರೆ.
28 ವರ್ಷದ ಅಫ್ತಾಬ್ ಪೂನಾವಾಲಾ ಮೇ ತಿಂಗಳಲ್ಲಿ ಶ್ರದ್ಧಾ ಅವರನ್ನು ಕೊಂದು ಆಕೆಯ ದೇಹವನ್ನು 35 ತುಂಡುಗಳಾಗಿ ಕತ್ತರಿಸಿ 300 ಲೀಟರ್ ಫ್ರಿಜ್‌ನಲ್ಲಿ ಇರಿಸಿ, ಸುಮಾರು ಮೂರು ವಾರಗಳ ಕಾಲ ದಕ್ಷಿಣ ದೆಹಲಿಯ ಮೆಹ್ರೌಲಿಯ ಕಾಡಿನಲ್ಲಿ ಎಸೆದಿದ್ದರು. ಮೃತ ಶ್ರದ್ಧಾ ಅವರ ತಂದೆ ನೀಡಿದ ದೂರಿನ ಆಧಾರದ ಮೇಲೆ ದೆಹಲಿ ಪೊಲೀಸರು ನವೆಂಬರ್ 10 ರಂದು ಎಫ್ಐಆರ್ ಎಫ್‌ಐಆರ್ ದಾಖಲಿಸಿ, ಅಫ್ತಾಬ್‌ನನ್ನು ಬಂಧಿಸಿದ್ದರು. ನಂತರ ದೆಹಲಿ ಪೊಲೀಸರು ಆರು ತಿಂಗಳ ಹಿಂದಿನ ಕೊಲೆ ಪ್ರಕರಣವನ್ನು ತನಿಖೆಗೆ ತೆಗೆದುಕೊಂಡಿದ್ದರು.

ವಿಚಾರಣೆಯಲ್ಲಿ ಆರೋಪಿ ಅಫ್ತಾಬ್ ಮೇ 18 ರಂದು ಶ್ರದ್ಧಾರನ್ನು ಕೊಂದಿದ್ದಾನೆ ಎಂದು ತಿಳಿದುಬಂದಿದೆ. ಮೃತ ದೇಹವನ್ನು ವಿಲೇವಾರಿ ಮಾಡುವ ವಿಧಾನಗಳನ್ನು ತಿಳಿದುಕೊಳ್ಳಲು ಹಲವು ಟಿವಿ ಶೋಗಳು, ಯೂಟ್ಯೂಬ್ ಗಳ ಸಹಾಯ ಪಡೆದುಕೊಂಡಿದ್ದಾರೆ ಎಂದು ದೆಹಲಿ ಪೊಲೀಸರು ಬಹಿರಂಗಪಡಿಸಿದ್ದಾರೆ. ಜೊತೆಗೆ ತನ್ನ ಪ್ರಿಯತಮೆಯ ದೇಹವನ್ನು ಕತ್ತರಿಸುವ ಮೊದಲು ಮಾನವ ಅಂಗರಚನಾಶಾಸ್ತ್ರವನ್ನು ಓದಿದ್ದೇನೆ ಎಂದು ಆರೋಪಿ ಪೊಲೀಸರಿಗೆ ತಿಳಿಸಿದ್ದಾರೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications