ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಚಾಮುಂಡೇಶ್ವರಿಯಲ್ಲಿ ಕಾಂಗ್ರೆಸ್ ಜೆಡಿಎಸ್ ಕಾರ್ಯಕರ್ತರ ಬೀದಿ ಜಗಳ: ಚಿತ್ರಗಳು

|
Google Oneindia Kannada News

ಬೆಂಗಳೂರು, ಏಪ್ರಿಲ್ 21: ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಜೆಡಿಎಸ್ ನ ಅಭ್ಯರ್ಥಿ ಜಿ.ಟಿ. ದೇವೇಗೌಡ ಶುಕ್ರವಾರ ನಾಮಪತ್ರ ಸಲ್ಲಿಸಿದ್ದಾರೆ. ಇದೇ ವೇಳೆ ಕಾರ್ಯಕರ್ತರ ನಡುವೆ ಜಟಾಪಟಿಯೂ ನಡೆದಿದೆ.
ಕಾಂಗ್ರೆಸ್-ಬಿಜೆಪಿ ಎರಡೂ ಪಕ್ಷದ ಕಾರ್ಯಕರ್ತರು ಭಾರೀ ಸಂಖ್ಯೆಯಲ್ಲಿ ಅರಮನೆ ಮುಂಭಾಗ ಏಕಕಾಲದಲ್ಲಿ ಮೆರವಣಿಗೆಯಲ್ಲಿ ಆಗಮಿಸಿದ ಸಂದರ್ಭದಲ್ಲಿ ಪರಸ್ಪರ ವಿರುದ್ಧದ ಘೋಷಣೆಗಳು ಮೊಳಗಿವೆ.

ಈ ಸಂದರ್ಭದಲ್ಲಿ ಬಿಗುವಿನ ವಾತಾವರಣ ಉಂಟಾಗಿದೆ. ಪರಿಸ್ಥಿತಿ ನಿಭಾಯಿಸಲು ಪೊಲೀಸರು ಲಘು ಲಾಠಿ ಪ್ರಹಾರ ಮಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಚಾಮುಂಡೇಶ್ವರಿ ಕ್ಷೇತ್ರದ ಕಾಂಗ್ರೆಸ್ ಹುರಿಯಾಳಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಂಸ್ಕೃತಿಕ ನಗರಿ ಮೈಸೂರಿನ ಕೋಟೆ ಆಂಜನೇಯ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ನಂತರ ನಾಮಪತ್ರ ಸಲ್ಲಿಸಲು ತೆರಳಿದರು.

ಮಹಾರಾಷ್ಟ್ರದ ಕೆರೆ, ನದಿಯಷ್ಟೇ ಅಲ್ಲ ಮಂದಿಯ ಗಂಟಲೊಣಗಿಸಿದ ಬೇಸಿಗೆ!ಮಹಾರಾಷ್ಟ್ರದ ಕೆರೆ, ನದಿಯಷ್ಟೇ ಅಲ್ಲ ಮಂದಿಯ ಗಂಟಲೊಣಗಿಸಿದ ಬೇಸಿಗೆ!

ಈ ಸಂದರ್ಭದಲ್ಲಿ ಭಾರೀ ಸಂಖ್ಯೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ನೆರೆದಿದ್ದರು. ಇದೇ ವೇಳೆ ಜೆಡಿಎಸ್ ಕಾರ್ಯಕರ್ತರೂ ಮೆರವಣಿಗೆಯಲ್ಲಿ ಸಾಗಿ ಬಂದರು. ಎರಡೂ ಪಕ್ಷಗಳ ಕಾರ್ಯಕರ್ತರು ಮುಖಾಮುಖಿಯಾದರು. ಬಾವುಟಗಳನ್ನು ಹಿಡಿದು ಪರಸ್ಪರ ಘೋಷಣೆಗಳನ್ನು ಕೂಗಲು ಶುರುಮಾಡಿದರು.

ಮೈಸೂರು ಅರಮನೆ ಮುಂದೆ ಜನಸಾಗರ ಸೇರಿತ್ತು. ಈ ಸಂದರ್ಭದಲ್ಲಿ ಮಧ್ಯಪ್ರವೇಶಿಸಿದ ಪೊಲೀಸರು ಪರಿಸ್ಥಿತಿ ನಿಭಾಯಿಸಲು ಲಘು ಲಾಠಿ ಪ್ರಹಾರ ಮಾಡಲಾಯಿತು. ಸಿದ್ದರಾಮಯ್ಯ ಅವರು ಬಾದಾಮಿಯಲ್ಲಿ ಏ.23ರಂದು ನಾಮಪತ್ರ ಸಲ್ಲಿಸಲಿದ್ದು ಅವರ ಮುಂದೆ ಜೆಡಿಎಸ್ ನಿಂದ ಹನುಮಂತಪ್ಪ ಮಾವಿನ ಮರದ್ ಪ್ರತಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲಿದ್ದಾರೆ.

 ಸಿದ್ದರಾಮಯ್ಯ ಚಾಮುಂಡೇಶ್ವರಿಯಲ್ಲಿ ನಾಮಪತ್ರ ಸಲ್ಲಿಸಿದ ಸಮಯ

ಸಿದ್ದರಾಮಯ್ಯ ಚಾಮುಂಡೇಶ್ವರಿಯಲ್ಲಿ ನಾಮಪತ್ರ ಸಲ್ಲಿಸಿದ ಸಮಯ

ವಿಧಾನಸಭಾ ಚುನಾವಣೆಯಲ್ಲಿ ಚಾಮುಂಡಿ ಕ್ಷೇತ್ರದಿಂದ ಸ್ಪರ್ಧಿಸಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಶುಕ್ರವಾರ ನಾಮಪತ್ರ ಸಲ್ಲಿಸಿದರು, ನಾಮಪತ್ರ ಸಲ್ಲಿಕೆ ನಂತರ ಅವರು ತೆರಳುತ್ತಿರುವ ದೃಶ್ಯ.

 ಜರ್ಮನಿಯ ಹೊಲದಲ್ಲಿ ಮೀನಿನ ರಾಶಿ

ಜರ್ಮನಿಯ ಹೊಲದಲ್ಲಿ ಮೀನಿನ ರಾಶಿ

ಟ್ರಾಕ್ಟರ್ ಟ್ರೈಲರ್ ವೊಂದು ರಸ್ತೆ ತಿರುವಿನಲ್ಲಿ ಮುಗುಚಿ ಬಿದ್ದ ಪರಿಣಾಮ ಅದರಲ್ಲಿದ್ದ ಮೀನುಗಳು ಹೊಲವೊಂದರಲ್ಲಿ ರಾಶಿಯಾಗಿ ಬಿದ್ದ ಘಟನೆ ಜರ್ಮನಿಯಲ್ಲಿ ನಡೆದಿದೆ.ಪಶ್ಚಿಮ ಪೊಮರೆನಿಯದ ಮೆಕ್ಲನ್ ಬರ್ಗ್ ನಲ್ಲಿ ಶುಕ್ರವಾರ ಈ ಅಪಘಾತ ಸಂಭವಿಸಿದ್ದು ಸುಮಾರು 20 ಮೆಟ್ರಿಕ್ ಟನ್ ನಷ್ಟ ಉಂಟಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

 ಚಾಮುಂಡೇಶ್ವರಿಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಕಾದಾಟ

ಚಾಮುಂಡೇಶ್ವರಿಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಕಾದಾಟ

ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಜೆಡಿಎಸ್ ನ ಅಭ್ಯರ್ಥಿ ಜಿ.ಟಿ. ದೇವೇಗೌಡ ಶುಕ್ರವಾರ ನಾಮಪತ್ರ ಸಲ್ಲಿಸಿದ್ದಾರೆ. ಇದೇ ವೇಳೆ ಕಾರ್ಯಕರ್ತರ ನಡುವೆ ಜಟಾಪಟಿಯೂ ನಡೆದಿದೆ. ಚಾಮುಂಡೇಶ್ವರಿ ಕ್ಷೇತ್ರದ ಕಾಂಗ್ರೆಸ್ ಹುರಿಯಾಳಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಂಸ್ಕøತಿಕ ನಗರಿ ಮೈಸೂರಿನ ಕೋಟೆ ಆಂಜನೇಯ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ನಂತರ ನಾಮಪತ್ರ ಸಲ್ಲಿಸಲು ತೆರಳಿದರು.

 ಸುಟ್ಟು ಕರಕಲಾದ ಪೈಪ್ ಫ್ಯಾಕ್ಟರಿ

ಸುಟ್ಟು ಕರಕಲಾದ ಪೈಪ್ ಫ್ಯಾಕ್ಟರಿ

ಘಾಜಿಯಾಬಾದ್ ಕೌಶಂಬಿ ಮೆಟ್ರೋ ನಿಲ್ದಾಣದ ಬಳಿ ಇರುವ ಪೀಪ್ ಫ್ಯಾಕ್ಟರಿಯಲ್ಲಿ ಶುಕ್ರವಾರ ಅಗ್ನಿ ಅವಗಢ ಸಂಭವಿಸಿದೆ. 12 ಅಗ್ನಿಶಾಮಕ ಸಿಬ್ಬಂದಿಗಳು ಬಂದು ಬೆಂಕಿ ನಮದಿಸುವಲ್ಲಿ ಯಶಸ್ವಿಯಾದರೂ, ಅವಗಢದಲ್ಲಿ ಒಬ್ಬ ವ್ಯಕ್ತಿಗೆ ಗಾಯವಾಗಿದೆ.ಲಕ್ಷಾಂತರ ರೂಪಾಯಿ ನಷ್ಟ ಉಂಟಾಗಿದೆ.

 ಸ್ವಾತಿ ಮಳಿವಾಳ್ ಅವರ ಭೇಟಿ ಮಾಡಿದ ಅರವಿಂದ್ ಕೇಜ್ರಿವಾಲ್

ಸ್ವಾತಿ ಮಳಿವಾಳ್ ಅವರ ಭೇಟಿ ಮಾಡಿದ ಅರವಿಂದ್ ಕೇಜ್ರಿವಾಲ್

ಕಳೆದ ಎಂಟು ದಿನಗಳಿಂದ ಸ್ವಾತಿ ಮಳಿವಾಳ್ ಎನ್ನುವವರು ಉನ್ನಾವೋ, ಕತುವಾ ಅತ್ಯಾಚಾರ ಪ್ರಕರಣದ ವಿರುದ್ಧ ಅತ್ಯಾಚಾರಿಗಳಿಗೆ ಶಿಕ್ಷೆ ವಿಧಿಸುವಂತೆ ಒತ್ತಾಯಿಸಿ ಉಪವಾಸ ಪ್ರತಿಭಟನೆ ನಡೆಸುತ್ತಿದ್ದಾರೆ. ಅವರನ್ನು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಶುಕ್ರವಾರ ಭೇಟಿಯಾದರು.

English summary
Police personnel try to disperse supporters of Karnataka Chief Minister Siddaramaiah during his filing of nomination papers to contest from Chamundeshwari constituency in Mysore on Friday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X