‘ಇಂಡಿಯಾ’ ವನ್ನು ಈಸ್ಟ್ ಇಂಡಿಯಾ ಕಂಪನಿಗೆ ಹೋಲಿಸಿದ ಮೋದಿ ವಿರುದ್ಧ ಸಿದ್ದರಾಮಯ್ಯ ಟ್ವೀಟಾಸ್ತ್ರ
ಬೆಂಗಳೂರು ಜುಲೈ 26: ವಿರೋಧ ಪಕ್ಷಗಳ ಮೈತ್ರಿಕೂಟ 'ಇಂಡಿಯಾ' ವನ್ನು ಈಸ್ಟ್ ಇಂಡಿಯಾ ಕಂಪೆನಿ ಮತ್ತು ಇಂಡಿಯನ್ ಮುಜಾಹಿದ್ದೀನ್ ಗೆ ಹೋಲಿಸಿರುವ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶಗೊಂಡಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿದ ಅವರು ಮೋದಿ ಉಪನಾಮದ ಬಗ್ಗೆ ಪ್ರಸ್ತಾಪಿಸಿದ್ದಾರೆ.
ಪ್ರಧಾನಿ @narendramodi ಅವರೇ, ಇಂಡಿಯಾ ಎಂಬ ಸುಂದರ, ಸುಮಧುರ ಮತ್ತು ಪವಿತ್ರ ಹೆಸರಿನ ಬಗ್ಗೆ ನಿಮಗೆ ಯಾಕೆ ಇಷ್ಟೊಂದು ದ್ವೇಷ?
— Siddaramaiah (@siddaramaiah) July 26, 2023
ಇಂಡಿಯಾ ಹೆಸರಿನ ಬಗ್ಗೆ ಇಷ್ಟೊಂದು ಅಸಹನೆ ಹೊಂದಿರುವ ನೀವು ನಿಮ್ಮದೇ ಸರ್ಕಾರದ ಕಾರ್ಯಕ್ರಮಗಳಾದ ಮೇಕ್ ಇನ್ ಇಂಡಿಯಾ, ಸ್ಟಾರ್ಟ್ ಅಪ್ ಇಂಡಿಯಾ, ಸ್ಕಿಲ್ ಇಂಡಿಯಾ ಮೊದಲಾದ ಕಾರ್ಯಕ್ರಮಗಳ ಹೆಸರನ್ನೂ ಬದಲಾಯಿಸುವಿರಾ?…
''ವಿರೋಧ ಪಕ್ಷಗಳ ಮೈತ್ರಿಕೂಟ 'ಇಂಡಿಯಾ' ವನ್ನು ಈಸ್ಟ್ ಇಂಡಿಯಾ ಕಂಪೆನಿ ಮತ್ತು ಇಂಡಿಯನ್ ಮುಜಾಹಿದ್ದೀನ್ ಗೆ ಹೋಲಿಸಿರುವ ಸನ್ಮಾನ್ಯ ಪ್ರಧಾನಿ ನರೇಂದ್ರ ಮೋದಿ ಅವರೇ. ಭಾರತೀಯರ ನೂರಾರು ಕೋಟಿ ತೆರಿಗೆ ಹಣವನ್ನು ಲೂಟಿ ಮಾಡಿ ದೇಶ ಬಿಟ್ಟು ಓಡಿಹೋಗಿರುವ ನೀರವ್ ಮೋದಿ ಮತ್ತು ಲಲಿತ್ ಮೋದಿ ಅವರ ಹೆಸರಿನಲ್ಲಿಯೂ ನಿಮ್ಮ ಹೆಸರಿನ ಮೋದಿ ಇದೆಯಲ್ಲಾ? ಅವರನ್ನು ನಿಮ್ಮ ಜೊತೆ ಹೋಲಿಸಬಹುದಾ?'' ಎಂದು ಮೋದಿ ಅವರಿಗೆ ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ.

''ಲಲಿತ್ ಮತ್ತು ನೀರವ್ ಹೆಸರಲ್ಲಿಯೂ ಮೋದಿ ಇದೆಯಲ್ಲಾ ಎಂಬ ಸಾಮಾನ್ಯ ಪ್ರಶ್ನೆ ಕೇಳಿದ ರಾಹುಲ್ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿ, ಎರಡು ವರ್ಷ ಜೈಲು ಶಿಕ್ಷೆ ನೀಡಿ, ಲೋಕಸಭೆಯಿಂದ ಅನರ್ಹಗೊಳಿಸಲಾಯಿತು. ಈಗ ಇಂಡಿಯಾವನ್ನು ಈಸ್ಟ್ ಇಂಡಿಯಾ ಕಂಪೆನಿ ಮತ್ತು ಇಂಡಿಯನ್ ಮುಜಾಹಿದ್ದೀನ್ ಗೆ ಹೋಲಿಸಿರುವ ನಿಮ್ಮ ಹೋಲಿಕೆಗೆ ರಾಹುಲ್ ಗಾಂಧಿಯವರ ವಿರುದ್ಧದ ಕ್ರಮ ಅನ್ವಯವಾಗುವುದಿಲ್ಲವೇ?'' ಎಂದು ಕಟುವಾಗಿ ಪ್ರಶ್ನೆ ಮಾಡಿದ್ದಾರೆ.
ವಿರೋಧ ಪಕ್ಷಗಳ ಮೈತ್ರಿಕೂಟ ‘ಇಂಡಿಯಾ’ ವನ್ನು ಈಸ್ಟ್ ಇಂಡಿಯಾ ಕಂಪೆನಿ ಮತ್ತು ಇಂಡಿಯನ್ ಮುಜಾಹಿದ್ದೀನ್ ಗೆ ಹೋಲಿಸಿರುವ ಸನ್ಮಾನ ಪ್ರಧಾನಿ @narendramodi ಅವರೇ.
— Siddaramaiah (@siddaramaiah) July 26, 2023
ಭಾರತೀಯರ ನೂರಾರು ಕೋಟಿ ತೆರಿಗೆ ಹಣವನ್ನು ಲೂಟಿ ಮಾಡಿ ದೇಶ ಬಿಟ್ಟು ಓಡಿಹೋಗಿರುವ ನೀರವ್ ಮೋದಿ ಮತ್ತು ಲಲಿತ್ ಮೋದಿ ಅವರ ಹೆಸರಿನಲ್ಲಿಯೂ ನಿಮ್ಮ ಹೆಸರಿನ ಮೋದಿ ಇದೆಯಲ್ಲಾ? ಅವರನ್ನು…
ಪ್ರಧಾನಿ ನರೇಂದ್ರ ಮೋದಿ ಅವರೇ, ಇಂಡಿಯಾ ಎಂಬ ಸುಂದರ, ಸುಮಧುರ ಮತ್ತು ಪವಿತ್ರ ಹೆಸರಿನ ಬಗ್ಗೆ ನಿಮಗೆ ಯಾಕೆ ಇಷ್ಟೊಂದು ದ್ವೇಷ? ಇಂಡಿಯಾ ಹೆಸರಿನ ಬಗ್ಗೆ ಇಷ್ಟೊಂದು ಅಸಹನೆ ಹೊಂದಿರುವ ನೀವು ನಿಮ್ಮದೇ ಸರ್ಕಾರದ ಕಾರ್ಯಕ್ರಮಗಳಾದ ಮೇಕ್ ಇನ್ ಇಂಡಿಯಾ, ಸ್ಟಾರ್ಟ್ ಅಪ್ ಇಂಡಿಯಾ, ಸ್ಕಿಲ್ ಇಂಡಿಯಾ ಮೊದಲಾದ ಕಾರ್ಯಕ್ರಮಗಳ ಹೆಸರನ್ನೂ ಬದಲಾಯಿಸುವಿರಾ? ಎಂದು ಕೇಳಿದ್ದಾರೆ.
ಅಷ್ಟಕ್ಕೂ ಏನಿದು ವಿರೋಧ ಪಕ್ಷಗಳ ಮೈತ್ರಿಕೂಟ?
2024ರ ಲೋಕಸಭೆ ಚುನಾವಣೆಯ ಕದನಕ್ಕೆ ಅಖಾಡ ಸಿದ್ಧವಾಗುತ್ತಿದೆ. ಸತತ ಎರಡನೇ ಅವಧಿಯಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರವನ್ನು ಉರುಳಿಸಲು ವಿರೋಧ ಪಕ್ಷಗಳು ಪರಸ್ಪರ ಕೈಜೋಡಿಸಿವೆ. 26 ಪಕ್ಷಗಳ ಮಹಾ ಮೈತ್ರಿಕೂಟ 'ಇಂಡಿಯಾ' ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿಗೆ ಸವಾಲು ಹಾಕುತ್ತಿದೆ. ಈ ವಿಪಕ್ಷಗಳ ಮೈತ್ರಿಕೂಟಕ್ಕೆ I.N.D.I.A (ಭಾರತದ ರಾಷ್ಟ್ರೀಯ ಅಭಿವೃದ್ಧಿಗಾಗಿ ಒಳಗೊಳ್ಳುವಿಕೆಯ ಒಕ್ಕೂಟ) ಎಂಬ ಹೆಸರಿಡಲಾಗಿದೆ. ಈ ಬಗ್ಗೆ ಬಿಜೆಪಿ ಕಾಮೆಂಟ್‌ಗಳನ್ನು ಮಾಡುತ್ತಲೇ ಇದೆ.












Click it and Unblock the Notifications