Siddaramaiah: 'ಎರಡು ದಿನದಲ್ಲಿ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ'

ನವದೆಹಲಿ, ಸೆಪ್ಟೆಂಬರ್‌ 25: ಮುಡಾ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರು ನೀಡಿದ್ದ ಪ್ರಾಸಿಕ್ಯೂಷನ್​ ಅನುಮತಿಯನ್ನು ಹೈಕೋರ್ಟ್​ ಎತ್ತಿ ಹಿಡಿದಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಿಗ್‌ ಶಾಕ್‌ ಎದುರಾಗಿದೆ, ಇತ್ತ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ವಿಪಕ್ಷಗಳು ಸಿದ್ದರಾಮಯ್ಯ ಅವರಿಗೆ ಒತ್ತಾಯಿಸುತ್ತಿದ್ದಾರೆ.

ಈ ಕುರಿತು ಕೇಂದ್ರ ಸಚಿವ ವಿ ಸೋಮಣ್ಣ ಅವರು ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸೆನ್ಸಿಟಿವ್ ಮನುಷ್ಯ. ಎರಡು ದಿನದಲ್ಲಿ ಸಿದ್ದರಾಮಯ್ಯ ಅವರು ರಾಜೀನಾಮೆ ಕೊಡುತ್ತಾರೆ ಎಂದು ಭಾವಿಸಿದ್ದೇನೆ. ನನ್ನ ಜೀವನ ತೆರೆದ ಪುಸ್ತಕ ಎನ್ನುತ್ತಿದ್ದರು ಆ ಪುಸ್ತಕ ಎಲ್ಲಿ ಕಳೆದು ಹೋಗಿದೆ ಗೊತ್ತಿಲ್ಲ ಎಂದಿದ್ದಾರೆ.

Siddaramaiah Will Resign As Chief Ministerin Two Days Says V Somanna

ಮುಡಾ ಕೇಸ್ ನಲ್ಲಿ ಹೈಕೋರ್ಟ್ ಆದೇಶವನ್ನು ಸ್ವಾಗತಿಸುತ್ತೇನೆ ಕಾನೂನಿಗಿಂತ ಯಾರೂ ದೊಡ್ಡವರಲ್ಲ ನ್ಯಾಯಾಂಗ ವ್ಯವಸ್ಥೆಯಲ್ಲಿ ಕಾನೂನು ದೊಡ್ಡದು ನಾನು ಸಿದ್ದರಾಮಯ್ಯ ಅವರನ್ನು ಹತ್ತಿರದಿಂದ ನೋಡಿದ್ದೇನೆ. ಸಿದ್ದರಾಮಯ್ಯನವರು ಗಾಂಭೀರ್ಯ ಅರ್ಥಮಾಡಿಕೊಳ್ಳಬೇಕು. ತಪ್ಪು ಮಾಡುವುದು ಸಹಜ ಆದರೆ, ತಿದ್ದಿಕೊಳ್ಳಬೇಕು. ಹೈಕೋರ್ಟ್ ಆದೇಶ ಗೌರವಿಸಿ ಸಿಎಂ ರಾಜೀನಾಮೆ ನೀಡಲಿ ಎಂದು ಸಿದ್ದರಾಮಯ್ಯ ರಾಜೀನಾಮೆಗೆ ಕೇಂದ್ರ ಸಚಿವ ಸೋಮಣ್ಣ ಆಗ್ರಹಿಸಿದ್ದಾರೆ.

ರಾಜೀನಾಮೆ ಕೊಡಿ: ಎನ್. ರವಿಕುಮಾರ್ ಒತ್ತಾಯ

ಸಿದ್ದರಾಮಯ್ಯನವರು ಸಂವಿಧಾನ, ಪ್ರಜಾಪ್ರಭುತ್ವ ಮತ್ತು ನ್ಯಾಯಾಂಗಕ್ಕೆ ಗೌರವ ಕೊಟ್ಟು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು ಎಂದು ವಿಧಾನಪರಿಷತ್ ಸದಸ್ಯ ಎನ್. ರವಿಕುಮಾರ್ ಅವರು ಒತ್ತಾಯಿಸಿದರು.
ಪಾರ್ವತಿ ಮೇಡಂ ಅವರು ನಿಮ್ಮ ಪತ್ನಿ. ನಿಮ್ಮ ಕುಟುಂಬದವರೇ ಆಗಿದ್ದಾರೆ ಎಂದು ಮುಖ್ಯಮಂತ್ರಿಗಳಿಗೆ ನೆನಪಿಸಿದರು. ಮಾನ್ಯ ರಾಜ್ಯಪಾಲರ ಕ್ರಮವನ್ನು ಕೋರ್ಟ್ ಎತ್ತಿಹಿಡಿದಿದೆ ಎಂದು ಗಮನ ಸೆಳೆದರು.

ಸಿದ್ದರಾಮಯ್ಯನವರು ರಾಜೀನಾಮೆ ಕೊಡದಿದ್ದರೆ ಅದು ಪ್ರಜಾಪ್ರಭುತ್ವ, ನ್ಯಾಯಾಂಗ ಮತ್ತು ಸಂವಿಧಾನಕ್ಕೆ ಮಾಡುವ ಅವಮಾನ ಎಂದು ಅವರು ತಿಳಿಸಿದರು. ಈ ತೀರ್ಪು ನೀಡಿದ ಹೈಕೋರ್ಟ್ ನ್ಯಾಯಮೂರ್ತಿಗಳನ್ನು ಅವರು ಅಭಿನಂದಿಸಿದರು.

ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಅವರು ಮಾತನಾಡಿ, ಕುರ್ಚಿ ಉಳಿಸಿಕೊಳ್ಳಲು ಭಂಡತನದಿಂದ ಪ್ರಯತ್ನ ಮಾಡಿದವರ ಇತಿಹಾಸ ಏನಾಗಿದೆ ಎಂಬುದನ್ನು ಅರ್ಥ ಮಾಡಿಕೊಳ್ಳಿ. ಕರ್ನಾಟಕ ರಾಜ್ಯದ ಗೌರವ ಉಳಿಸುವ ದೃಷ್ಟಿಯಿಂದ ನೈತಿಕ ಹೊಣೆ ಹೊತ್ತು ಕೂಡಲೇ ರಾಜೀನಾಮೆ ಕೊಡಿ ಎಂದು ಸಿದ್ದರಾಮಯ್ಯನವರನ್ನು ಒತ್ತಾಯಿಸಿದರು.

ಸಿದ್ದರಾಮಯ್ಯನವರು ಹಿಂದೆ ಯಡಿಯೂರಪ್ಪ ಅವರ ರಾಜೀನಾಮೆಗೆ ಆಗ್ರಹಿಸಿದ್ದನ್ನು ನೆನಪಿಸಿದರಲ್ಲದೆ, ನಿಮ್ಮ ಹಿಂದಿನ ಮಾತಿನಂತೆ ರಾಜೀನಾಮೆ ಕೊಡಿ ಎಂದು ಆಗ್ರಹಿಸಿದರು. ನಾವೇನೂ ನಿಮ್ಮ ಕುರ್ಚಿ ಮೇಲೆ ಟವೆಲ್ ಹಾಕಿಲ್ಲ. ಸಿಎಂ ಸ್ಥಾನಕ್ಕಾಗಿ ನಾವೇನೂ ಬ್ರೇಕ್‍ಫಾಸ್ಟ್, ಡಿನ್ನರ್ ಮೀಟಿಂಗ್ ಮಾಡಿಲ್ಲ. ತನಿಖೆಯಲ್ಲಿ ನೀವು ನಿರ್ದೋಷಿ ಎಂದು ಸಾಬೀತಾದರೆ ಮತ್ತೆ ಮುಖ್ಯಮಂತ್ರಿ ಆಗಬಹುದಲ್ಲವೇ ಎಂದು ಪ್ರಶ್ನಿಸಿದರು.

ನೀವು ರಾಜೀನಾಮೆ ಕೊಡದಿದ್ದರೆ ಪ್ರಾಮಾಣಿಕರಲ್ಲ ಎಂದು ಗೊತ್ತಾಗಲಿದೆ. ಕಾಂಗ್ರೆಸ್ ಪಕ್ಷ ನಿಮ್ಮ ರಾಜೀನಾಮೆ ಕೇಳದಿದ್ದರೆ ಅದು ಭ್ರಷ್ಟಾಚಾರದ ರಕ್ಷಣೆ ಮಾಡುವುದು ಸ್ಪಷ್ಟ ಎಂದು ಗೊತ್ತಾಗಲಿದೆ ಎಂಬುದಾಗಿ ಎಚ್ಚರಿಸಿದರು. ನೀವು ಭ್ರಷ್ಟಾಚಾರದ ಸಮರ್ಥನೆಗೆ ಇದ್ದೀರಾ ಅಥವಾ ವಿರುದ್ಧ ಇದ್ದೀರಾ ಎಂಬ ಬಗ್ಗೆ ಆಗ ರಾಹುಲ್ ಗಾಂಧಿಯವರು ಉತ್ತರ ಕೊಡಬೇಕಾಗುತ್ತದೆ ಎಂದು ತಿಳಿಸಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+