School: ಶಾಲಾ ಮಕ್ಕಳ ಮಧ್ಯಾಹ್ನದ ಬಿಸಿಯೂಟದಲ್ಲಿ ಮಹತ್ವದ ಬದಲಾವಣೆ!
Midday Meal: ಕರ್ನಾಟಕದಲ್ಲಿ ಮಧ್ಯಾಹ್ನ ಮಕ್ಕಳಿಗೆ ಕೊಡುವ ಬಿಸಿಯೂಟದ ವಿಚಾರದಲ್ಲಿ ಮಹತ್ವದ ಬದಲಾವಣೆಯನ್ನು ಮಾಡುವುದಕ್ಕೆ ಕೇಂದ್ರ ಬಿಜೆಪಿ ಸರ್ಕಾರ ಮುಂದಾಗಿದೆ. ಕರ್ನಾಟಕ ಮಾತ್ರವಲ್ಲದೆ ದೇಶದಾದ್ಯಂತ ಮಧ್ಯಾಹ್ನ ಮಕ್ಕಳಿಗೆ ಕೊಡುವ ಬಿಸಿಯೂಟದಲ್ಲಿ ಕೆಲವೊಂದು ಪ್ರಮುಖ ಬದಲಾವಣೆಗಳನ್ನು ಮಾಡಿಕೊಳ್ಳುವುದಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ನಿರ್ದೇಶನವನ್ನು ನೀಡಿದೆ. ಯಾವ ಕಾರಣಕ್ಕೆ ಈ ಮುನ್ಸೂಚನೆ ನೀಡಲಾಗಿದೆ. ಈ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದು ಏನು ಎನ್ನುವ ವಿವರ ಇಲ್ಲಿದೆ.
ದೇಶದಲ್ಲಿ ಅಡುಗೆ ಎಣ್ಣೆ ಬಳಕೆಯ ಬಗ್ಗೆ ಪ್ರಧಾನಿ ಮೋದಿ ಅವರು ಕಳೆದ ಕೆಲವು ದಿನಗಳಿಂದ ಎಚ್ಚರಿಕೆಯನ್ನು ನೀಡುತ್ತಿದ್ದಾರೆ. ಈ ನಿಟ್ಟಿನಲ್ಲಿ ಕೇಂದ್ರ ಶಿಕ್ಷಣ ಇಲಾಖೆಯ ಕಾರ್ಯದರ್ಶಿ ಸಂಜಯ್ ಕುಮಾರ್ ಅವರು ದೇಶದ ಎಲ್ಲಾ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಪತ್ರವನ್ನು ಬರೆದಿದ್ದು ಮಹತ್ವದ ಸೂಚನೆಯೊಂದನ್ನು ಕೊಟ್ಟಿದ್ದಾರೆ. ದೇಶದಾದ್ಯಂತ ಮಕ್ಕಳಲ್ಲಿ ಬೊಜ್ಜು ಹೆಚ್ಚಳವಾಗುತ್ತಿರುವುದು ಭಾರೀ ಚರ್ಚೆಗೆ ಕಾರಣವಾಗಿದೆ. ಅಲ್ಲದೆ ಮಕ್ಕಳಲ್ಲಿ ಬೊಜ್ಜಿನ ಪ್ರಮಾಣ ಹೆಚ್ಚಳವಾಗುತ್ತಿರುವ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಆತಂಕ ವ್ಯಕ್ತಪಡಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಈಚೆಗೆ ದೇಶದಲ್ಲಿ ಬೊಜ್ಜಿನ ಸಮಸ್ಯೆ ಹೆಚ್ಚಾಗುತ್ತಿರುವ ಬಗ್ಗೆ ಪ್ರಸ್ತಾಪಿಸಿದ್ದರು. ದೇಶದಲ್ಲಿ ಮಕ್ಕಳು ಸೇರಿದಂತೆ ಎಲ್ಲರೂ ದೇಹದ ತೂಕ / ಬೊಜ್ಜನ್ನು ಕಡಿಮೆ ಮಾಡಿಕೊಳ್ಳುವ ಅವಶ್ಯಕತೆ ಇದೆ ಎಂದಿದ್ದರು. ಅಲ್ಲದೆ 2050ರ ವೇಳೆಗೆ ಭಾರತದಲ್ಲಿ ಅಂದಾಜು 44 ಕೋಟಿ ಜನ ಬೊಜ್ಜಿನ ಸಮಸ್ಯೆಗೆ ಒಳಗಾಗಲಿದ್ದಾರೆ.
ಇದೊಂದು ಭಾರತದ ತುಂಬಾ ದೊಡ್ಡ ಸಮಸ್ಯೆ ಆಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ವಿವರಿಸಿದ್ದರು. ಪರೀಕ್ಷಾ ಪೇ ಚರ್ಚಾ ಹಾಗೂ ಮನ್ ಕೀ ಬಾತ್‌ನಲ್ಲಿ ಇದೇ ವಿಷಯದ ಬಗ್ಗೆ ಚರ್ಚೆಗಳು ನಡೆದಿದ್ದವು. ಮಕ್ಕಳಲ್ಲಿ ಬೊಜ್ಜು ಬೆಳೆಯುತ್ತಿದ್ದು ಇದನ್ನು ತುರ್ತಾಗಿ ಕಡಿಮೆ ಅಥವಾ ತಪ್ಪಿಸಬೇಕಾಗಿದೆ ಎಂದಿದ್ದರು.
ಮಕ್ಕಳಿಗೆ ಕೊಡಲಾಗುತ್ತಿರುವ ಮಧ್ಯಾಹ್ನದ ಬಿಸಿಯೂಟದಲ್ಲಿ ಶೇ.10ರಷ್ಟು ಅಡುಗೆ ಎಣ್ಣೆ ಬಳಕೆ ಕಡ್ಡಾಯವಾಗಿ ಕಡಿಮೆ ಮಾಡಲು ತೀರ್ಮಾನಿಸಲಾಗಿದೆ. ದೇಶದಲ್ಲಿ ಮಕ್ಕಳ್ಳಲ್ಲಿ ಬೊಜ್ಜು ಹೆಚ್ಚಾಗುತ್ತಿರುವ ಬಗ್ಗೆ ಇತ್ತೀಚಿನ ದಿನಗಳಲ್ಲಿ ಹೆಚ್ಚು ಚರ್ಚೆ ಆಗುತ್ತಿದೆ. ಇನ್ನು ಅಡುಗೆಯಲ್ಲಿ ಕಡಿಮೆ ಎಣ್ಣೆಯ ಬಳಕೆ. ಆರೋಗ್ಯಕರ ಆಹಾರ ಸೇವನೆಗೆ ಸಂಬಂಧಿಸಿದಂತೆ ಪೌಷ್ಠಿಕ ಆಹಾರ ತಜ್ಞರೊಂದಿಗೆ ಚರ್ಚಿಸಲಾಗಿದೆ. ಹೀಗಾಗಿ, ಅಡುಗೆಯಲ್ಲಿ ಎಣ್ಣೆ ಬಳಕೆಯನ್ನು ಕಡಿಮೆ ಮಾಡುವುದರೊಂದಿಗೆ ಎಲ್ಲರಲ್ಲೂ ಜಾಗೃತಿ ಮೂಡಿಸುವ ಅವಶ್ಯಕತೆ ಇದೆ ಎಂದು ಕೇಂದ್ರ ಸರ್ಕಾರವು ಹೇಳಿದೆ.
ಮಧ್ಯಾಹ್ನದ ಬಿಸಿಯೂಟದಲ್ಲಿ ಬದಲಾವಣೆ: ಇನ್ನು ಬೊಜ್ಜಿನ ಸಮಸ್ಯೆಗೆ ಸಂಬಂಧಿಸಿದಂತೆ ಮಧ್ಯಾಹ್ನದ ಬಿಸಿಯೂಟದಲ್ಲಿ ಕೆಲವೊಂದು ಬದಲಾವಣೆಗಳನ್ನು ಮಾಡಿಕೊಳ್ಳಲು ನಿರ್ಧರಿಸಲಾಗಿದೆ. ಪ್ರಧಾನಮಂತ್ರಿ ಪೋಷಣ್ ಶಕ್ತಿ ನಿರ್ಮಾಣ್ ಸ್ಕೀಂನ ಅಡಿಯಲ್ಲಿ ಮಧ್ಯಾಹ್ನದ ಬಿಸಿಯೂಟ ಕೊಡಲಾಗುತ್ತಿದೆ. ಈ ರೀತಿ ಬಿಸಿಯೂಟದಲ್ಲಿ ಅಡುಗೆ ಎಣ್ಣೆ ಬಳಕೆಯನ್ನು ಶೇ10ರಷ್ಟು ಕಡಿಮೆ ಮಾಡುವುದರಿಂದ ಬೊಜ್ಜಿನ ಸಮಸ್ಯೆಗೆ ಬ್ರೇಕ್ ಹಾಕಬೇಕು ಎಂದು ದೇಶದ ಎಲ್ಲಾ ರಾಜ್ಯಗಳಿಗೆ ಕೇಂದ್ರ ಸರ್ಕಾರದ ಶಿಕ್ಷಣ ಇಲಾಖೆ ಸೂಚನೆ ಕೊಟ್ಟಿದೆ.
ಅಲ್ಲದೆ ಮುಂದುವರಿದು ವಿದ್ಯಾರ್ಥಿಗಳಲ್ಲಿ ದೈಹಿಕ ಕಸರತ್ತು, ಯೋಗಾಭ್ಯಾಸ ಸಹ ಮಾಡಿಸಬೇಕು. ಆರೋಗ್ಯಕರ ಜೀವನ ಶೈಲಿಯ ಉದ್ದೇಶದಿಂದ ದೇಶದ ತೂಕವನ್ನು ವೈಜ್ಞಾನಿಕವಾಗಿ ಕಡಿಮೆ ಮಾಡಬೇಕು ಎಂದು ಶಿಕ್ಷಣ ಇಲಾಖೆಗೆ ಕೇಂದ್ರದ ಶಿಕ್ಷಣ ಇಲಾಖೆಯು ನಿರ್ದೇಶನ ನೀಡಿದೆ.











Click it and Unblock the Notifications