SIR: ಮತದಾನದ ಹಕ್ಕು ಕಸಿದುಕೊಳ್ಳುವುದು “ಸಂವಿಧಾನದ ಹೃದಯಕ್ಕೇ ಹೊಡೆತ”: ಸುಪ್ರೀಂ ಕೋರ್ಟ್ ನ್ಯಾ. ಉಜ್ಜಲ್ ಭುಯಾನ್

SIR: ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ವಿಚಾರಕ್ಕೆ ಸಂಬಂಧಿಸಿದಂತೆ ದೇಶದಾದ್ಯಂತ ಭಾರೀ ಚರ್ಚೆ ನಡೆಯುತ್ತಿರುವ ಸಂದರ್ಭದಲ್ಲಿಯೇ ಸುಪ್ರೀಂ ಕೋರ್ಟ್ ಈ ವಿಚಾರಕ್ಕೆ ಸಂಬಂಧಿಸಿದಂತೆ ಮಹತ್ವದ ಅಭಿಪ್ರಾಯವನ್ನು ಹಂಚಿಕೊಂಡಿದೆ. ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಅವರು, ಭಾರತೀಯ ನಾಗರಿಕರ ಮತದಾನದ ಹಕ್ಕನ್ನು ದೊಡ್ಡ ಪ್ರಮಾಣದಲ್ಲಿ ಕಸಿದುಕೊಳ್ಳುವುದು "ಸಂವಿಧಾನದ ಹೃದಯಕ್ಕೇ ಹೊಡೆತ" ನೀಡಿದಂತಾಗುತ್ತದೆ ಎಂದು ಎಚ್ಚರಿಸಿದ್ದಾರೆ. ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ವಿವಾದ ಕುರಿತು ಮಾತನಾಡಿದ ಅವರು, ನೋಟಿಸ್ ನೀಡದೆ ಮತ್ತು ನಿಖರವಾದ ವಿಚಾರಣೆಯನ್ನು ನಡೆಸ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕುವಂತಿಲ್ಲ ಎಂದು ಹೇಳಿದ್ದಾರೆ.

ಭಾರತದಲ್ಲಿ ಕಳೆದ ಒಂದು ವರ್ಷದಿಂದಲೂ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆಗೆ ಸಂಬಂಧಿಸಿದಂತೆ ಗಂಭೀರ ಚರ್ಚೆಗಳು ನಡೆದಿವೆ. ಇದೀಗ ಎಸ್‌ಐಆರ್‌ಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಅವರು ಮಾತನಾಡಿದ್ದು, ಇಂತಹ ಕ್ರಮದಿಂದ ಭಾರತೀಯ ನಾಗರಿಕರು ತಮ್ಮದೇ ದೇಶದಲ್ಲಿ "ಎರಡನೇ ದರ್ಜೆಯ ನಾಗರಿಕರು" ಆಗುವ ಪರಿಸ್ಥಿತಿ ನಿರ್ಮಾಣವಾಗಬಹುದು ಎಂದು ಅವರು ಹೇಳಿದ್ದಾರೆ.

SIR Row Supreme Court Justice Ujjal Bhuyan Warns Mass Voter Deletions Could Strike Heart of Constitution

ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ವೇಳೆ ದೊಡ್ಡ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗುತ್ತಿದೆ ಎಂಬ ಆರೋಪಗಳ ನಡುವೆಯೇ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಅವರ ಹೇಳಿಕೆಯು ಮಹತ್ವ ಪಡೆದುಕೊಂಡಿದೆ. ಅರ್ಹ ಮತದಾರರನ್ನೇ ಮತದಾರರ ಪಟ್ಟಿಯಿಂದ ತೆಗೆದುಹಾಕಲು ಗುರಿಯಾಗಿಸಿಕೊಳ್ಳಲಾಗಿದೆ ಎನ್ನುವ ಆರೋಪವೂ ಈ ವಿಚಾರದಲ್ಲಿ ಕೇಳಿ ಬಂದಿದೆ.

ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಅವರು ಭಾರತೀಯ ನಾಗರಿಕರ ಮತದಾನದ ಹಕ್ಕನ್ನು ದೊಡ್ಡ ಪ್ರಮಾಣದಲ್ಲಿ ಕಸಿದುಕೊಳ್ಳುವುದು "ಸಂವಿಧಾನದ ಹೃದಯಭಾಗವನ್ನೇ ಹೊಡೆಯುತ್ತದೆ" ಮತ್ತು ಅವರನ್ನು "ಅವರ ಸ್ವಂತ ದೇಶದಲ್ಲಿ ಎರಡನೇ ದರ್ಜೆಯ ನಾಗರಿಕರು' ಎಂಬ ಭಾವನೆ ಮೂಡಿಸುತ್ತದೆ ಎಂದೂ ಹೇಳಲಾಗಿದೆ. ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (SIR) ಸಮಯದಲ್ಲಿ ಮತದಾರರ ಪಟ್ಟಿಯ ದೊಡ್ಡ ಪ್ರಮಾಣದ ಅಳಿಸುವಿಕೆಗಳು ಮತ್ತು ಅರ್ಹ ಮತದಾರರನ್ನು ತೆಗೆದುಹಾಕಲು ಗುರಿಯಾಗಿಸಲಾಗುತ್ತಿದೆ ಎಂದು ಕಾಂಗ್ರೆಸ್ ಪಕ್ಷವೂ ಸೇರಿದಂತೆ ವಿವಿಧ ವಿರೋಧ ಪಕ್ಷಗಳು ಗಂಭೀರ ಆರೋಪವನ್ನು ಮಾಡಿವೆ.

ಲಕ್ಷಾಂತರ ಭಾರತೀಯರ ಮತದಾನದ ಹಕ್ಕನ್ನು ಕಸಿದುಕೊಳ್ಳುವ ಯಾವುದೇ ಪ್ರಕ್ರಿಯೆಯು ಆಂತರಿಕವಾಗಿ ಅನಿಯಂತ್ರಿತವಾಗಿದೆ ಮತ್ತು ಯಾವುದೇ ರೀತಿಯಿಂದಲೂ ಅದನ್ನು ಸಮರ್ಥಿಸಲು ಸಾಧ್ಯವಿಲ್ಲ. ಇದು ಸಂವಿಧಾನದ ಹೃದಯಭಾಗಕ್ಕೆ ಪೆಟ್ಟು ನೀಡುತ್ತದೆ. ಇದು ಭಾರತದ ಸಂವಿಧಾನದ ಅಡಿಯಲ್ಲಿ ನಾವು ಅಳವಡಿಸಿಕೊಂಡ ಸಾಂವಿಧಾನಿಕ ಕ್ರಮದ ನಿರಾಕರಣೆ ಎಂದು ನಾನು ಹೇಳುವ ಮಟ್ಟಕ್ಕೂ ಹೋಗುತ್ತೇನೆ ಎಂದೂ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಅವರು ಅಭಿಪ್ರಾಯಪಟ್ಟಿದ್ದಾರೆ.

SIR Row: ಸಂವಿಧಾನದ 326 ಮತ್ತು 14ನೇ ವಿಧಿಗಳ ಉಲ್ಲಂಘನೆ

ದೊಡ್ಡ ಪ್ರಮಾಣದಲ್ಲಿ ಜನರ ಮತದಾನದ ಹಕ್ಕನ್ನು ಕಸಿದುಕೊಳ್ಳುವುದು ಸಂವಿಧಾನದ 326 ಮತ್ತು 14ನೇ ವಿಧಿಗಳ ಉಲ್ಲಂಘನೆ ಯಾಗುತ್ತದೆ. ಭಾರತೀಯ ಸಂವಿಧಾನವು ಎರಡು ರೀತಿಯ ನಾಗರಿಕರನ್ನು ಒಪ್ಪುವುದಿಲ್ಲ. ಅಂದರೆ, ಮತದಾನದ ಹಕ್ಕು ಹೊಂದಿರುವವರು ಮತ್ತು ಮತದಾನದ ಹಕ್ಕು ಇಲ್ಲದವರು ಎಂಬ ಎರಡು ವರ್ಗಳಿರುವುದಕ್ಕೆ ಸಾಧ್ಯವಿಲ್ಲ. ಸಂವಿಧಾನದ 326ನೇ ವಿಧಿ ವಯಸ್ಕ ಮತದಾನದ ಹಕ್ಕಿನ ಬಗ್ಗೆ ಹೇಳುತ್ತದೆ.


ಮತದಾನದ ಹಕ್ಕು ಕೊಡೋದು ಸರ್ಕಾರದ ಹೊಣೆ

ಇದರ ಪ್ರಕಾರ, 18 ವರ್ಷ ಅಥವಾ ಅದಕ್ಕಿಂತ ಹೆಚ್ಚಿನ ವಯಸ್ಸಿನ ಭಾರತೀಯ ನಾಗರಿಕರು ಮತದಾರರಾಗಿ ನೋಂದಾಯಿಸಿಕೊಳ್ಳುವ ಹಕ್ಕು ಹೊಂದಿದ್ದಾರೆ. 14ನೇ ವಿಧಿಯು ಕಾನೂನಿನ ಮುಂದೆ ಎಲ್ಲರೂ ಸಮಾನರು ಎಂಬುದನ್ನು ಖಚಿತಪಡಿಸುತ್ತದೆ. ಜೊತೆಗೆ, ಸರ್ಕಾರದ ಯಾವುದೇ ಅನಿಯಮಿತ ಅಥವಾ ತಾರತಮ್ಯದ ಕ್ರಮಗಳಿಂದ ನಾಗರಿಕರನ್ನು ರಕ್ಷಿಸುತ್ತದೆ ಎಂದೂ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಅಭಿಪ್ರಾಯಪಟ್ಟಿದ್ದಾರೆ.

ಯಾವುದೇ ಅಧಿಕಾರವೂ 326ನೇ ವಿಧಿಯ ಮೂಲ ಆಶಯವನ್ನು ಬದಲಿಸಲು ಸಾಧ್ಯವಿಲ್ಲ. ಅದನ್ನು ಯಾವುದೇ ನ್ಯಾಯಾಲಯವೂ ಕ್ಷಮಿಸಲು ಸಾಧ್ಯವಿಲ್ಲ ಎಂದು ನ್ಯಾಯಮೂರ್ತಿ ಭುಯಾನ್ ಹೇಳಿದರು. ಯಾರೂ ಸಂವಿಧಾನಕ್ಕಿಂತ ಮೇಲಲ್ಲ ಎಂದೂ ಅವರು ಇದೇ ಸಂದರ್ಭದಲ್ಲಿ ಸ್ಪಷ್ಟಪಡಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+