SIR: ತಮಿಳುನಾಡಿನಲ್ಲಿ ಇಷ್ಟು ಲಕ್ಷ ಮತದಾರರ ಹೆಸರು ಡಿಲೀಟ್
ವಿರೋಧ ಪಕ್ಷಗಳ ವಿರೋಧದ ನಡುವೆಯೂ ಕೇಂದ್ರ ಸರ್ಕಾರ ಹಾಗೂ ಭಾರತೀಯ ಚುನಾವಣಾ ಆಯೋಗವು ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯನ್ನು ನಡೆಸಿದ್ದು, ತಮಿಳುನಾಡಿನಲ್ಲಿ ಭಾರೀ ಸಂಖ್ಯೆಯಲ್ಲಿ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ.
ತಮಿಳುನಾಡಿನಲ್ಲಿ ವಿಶೇಷ ತೀವ್ರ ಪರಿಷ್ಕರಣೆ (SIR) ನಂತರ ತಮಿಳುನಾಡು ಮುಖ್ಯ ಚುನಾವಣಾ ಅಧಿಕಾರಿ ಅರ್ಚನಾ ಪಟ್ನಾಯಕ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ರಾಜ್ಯದ ಕರಡು ಮತದಾರರ ಪಟ್ಟಿಯಲ್ಲಿ ಈಗ 5,43,76,755 ಮತದಾರರು ಸೇರಿದ್ದಾರೆ. ಇದರಲ್ಲಿ 2.66 ಕೋಟಿ ಮಹಿಳೆಯರು ಮತ್ತು 2.77 ಕೋಟಿ ಪುರುಷರು ಸೇರಿದ್ದಾರೆ. ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಮಾಡುವುದಕ್ಕಿಂತ ಮೊದಲು ತಮಿಳುನಾಡಿನಲ್ಲಿ 6.41 ಕೋಟಿ ನೋಂದಾಯಿತ ಮತದಾರರಿದ್ದರು. ಈ ಎಸ್ಐಆರ್ನಿಂದಾಗಿ 97,37,832 ಹೆಸರುಗಳನ್ನು ಪಟ್ಟಿಯಿಂದ ಅಳಿಸಲಾಗಿದೆ ಅಥವಾ ಮತದಾರರ ಪಟ್ಟಿಯಿಂದ ತೆದುಹಾಕಲಾಗಿದೆ ಎಂದು ಹೇಳಿದ್ದಾರೆ.

ಇನ್ನು ಮತದಾರರ ಪಟ್ಟಿಯಿಂದ ಹೆಸರು ತೆಗೆದು ಹಾಕಲಾಗಿರುವವರಲ್ಲಿ ಮರಣ ಹೊಂದಿರುವ ಮತದಾರರ ಸಂಖ್ಯೆ 26.94 ಲಕ್ಷ, ಶಾಶ್ವತವಾಗಿ ಸ್ಥಳಾಂತರಗೊಂಡ ಅಥವಾ ವಲಸೆ ಹೋಗಿರುವ ಮತದಾರರ ಸಂಖ್ಯೆ 66.44 ಲಕ್ಷ ಮತ್ತು 3,39,278 ನಕಲಿ ನಮೂದುಗಳು ಸೇರಿವೆ. ಅಲ್ಲದೇ ಇದರಲ್ಲಿ ಒಂದಕ್ಕಿಂತ ಹೆಚ್ಚು ಸ್ಥಳಗಳಲ್ಲಿ ನೋಂದಾಯಿಸಲ್ಪಟ್ಟಿರುವವರ ಹೆಸರನ್ನೂ ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ ಎಂದು ಹೇಳಲಾಗಿದೆ. ಮುಖ್ಯವಾಗಿ ರಾಜ್ಯಾದ್ಯಂತ ಮೂರು ಸುತ್ತಿನ ಮನೆ-ಮನೆ ಸಮೀಕ್ಷೆ ನಡೆಸಲಾಗಿದ್ದು ಇದರಲ್ಲಿ 66,44,881 ಜನರು ತಮ್ಮ ನೋಂದಾಯಿತ ವಿಳಾಸಗಳಲ್ಲಿ ವಾಸಿಸುತ್ತಿಲ್ಲ ಎಂದು ಚುನಾವಣಾ ಆಯೋಗವು ತಿಳಿಸಿದೆ.
ದಕ್ಷಿಣ ಭಾರತದ ಪ್ರಮುಖ ರಾಜ್ಯಗಳಲ್ಲಿ ಒಂದಾಗಿರುವ ತಮಿಳುನಾಡಿನಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯ ವಿರುದ್ಧ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದರು. ತೀವ್ರ ವಿರೋಧದ ನಡುವೆಯೇ ಡಿಎಂಕೆ ಆಡಳಿತದ ರಾಜ್ಯದಲ್ಲಿ ಎಸ್ಐಆರ್ ನಡೆಸಲಾಗಿತ್ತು. ಈ ಪ್ರಜಾಪ್ರಭುತ್ವ ವಿರೋಧಿ ನಡೆಯನ್ನು ತಡೆಯಲು, ನಾವು ಸರ್ವಪಕ್ಷ ಸಭೆಯನ್ನು ಕರೆದು ಎಸ್ಐಆರ್ ಅನ್ನು ಖಂಡಿಸುವ ನಿರ್ಣಯವನ್ನು ಅಂಗೀಕರಿಸಿದ್ದೇವೆ. ಚುನಾವಣೆಗೆ ಕೆಲವೇ ತಿಂಗಳುಗಳ ಮೊದಲು ಮತದಾರರ ಪಟ್ಟಿಯ ಸಂಪೂರ್ಣ ಪರಿಷ್ಕರಣೆಯನ್ನು ಕೈಗೊಳ್ಳುವ ಚುನಾವಣಾ ಆಯೋಗದ ನಿರ್ಧಾರವು ಕಾನೂನುಬದ್ಧ ಮತದಾರರನ್ನು ಅಳಿಸಲು ಯೋಜಿತ ತಂತ್ರದ ಭಾಗವಾಗಿದೆ ಎಂದು ತಮಿಳುನಾಡಿನ ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಅವರು ವಾಗ್ದಾಳಿ ನಡೆಸಿದ್ದರು.
ಬಿಹಾರದಿಂದ ಪ್ರಾರಂಭ
ಇನ್ನು ದೇಶದಾದ್ಯಂತ ವಿಧಾನಸಭೆ ಚುನಾವಣೆ ನಡೆಯುತ್ತಿರುವ ಪ್ರಮುಖ ರಾಜ್ಯಗಳಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯು ನಡೆಯುತ್ತಿದ್ದು, ಬಿಹಾರದಲ್ಲಿ ಈ ಪ್ರಕ್ರಿಯೆ ನಡೆದಾಗಲೇ ವಿರೋಧ ಪಕ್ಷಗಳು ಈ ಪ್ರಕ್ರಿಯೆ ವಿರೋಧ ದಾಖಲಿಸಿದ್ದವು. ಬಿಹಾರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಮಾಡಿದ ಸಂದರ್ಭದಲ್ಲಿ ಲಕ್ಷಾಂತರ ಜನ ಮತದಾರರನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿತ್ತು. ಲೋಕಸಭೆಯ ವಿರೋಧ ಪಕ್ಷದ ನಾಯಕ ಹಾಗೂ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು ಸಹ ಈ ಪ್ರಕ್ರಿಯೆಗೆ ತೀವ್ರ್ ಆಕ್ಷೇಪ ದಾಖಲಿಸಿದ್ದರು.
ತಮಿಳುನಾಡಿನ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಎಡಪ್ಪಾಡಿ ಕೆ ಪಳನಿಸ್ವಾಮಿ ಅವರನ್ನು ಗುರಿಯಾಗಿಸಿಕೊಂಡು ಸಿಎಂ ಸ್ಟಾಲಿನ್ ಅವರು ಡಬಲ್ ಗೇಮ್ ಆಡುತ್ತಿದ್ದಾರೆ. ಅಲ್ಲದೇ ಬಿಜೆಪಿಯೊಂದಿಗಿನ ಅವರ ಸಂಬಂಧದಿಂದಾಗಿ ಚುನಾವಣಾ ಆಯೋಗಕ್ಕೆ ಹೆದರುತ್ತಿದ್ದಾರೆ ಎಂದು ಆರೋಪಿಸಿದ್ದರು. ಬಿಹಾರದ ವಲಸೆ ಕಾರ್ಮಿಕರು ತಮಿಳುನಾಡಿನಲ್ಲಿ ಜೀವನೋಪಾಯ ಮತ್ತು ಗೌರವವನ್ನು ಕಂಡುಕೊಂಡಿದ್ದರೂ, ಪ್ರಧಾನಿ ಚುನಾವಣಾ ಲಾಭಕ್ಕಾಗಿ ಬಿಹಾರದಲ್ಲಿ ರಾಜಕೀಯ ನಾಟಕ ಆಡುತ್ತಿದ್ದಾರೆ ಎಂದೂ ಅವರು ದೂರಿದ್ದರು.
-
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ












Click it and Unblock the Notifications