ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಿಜೆಪಿ ಶಾಸಕನಿಂದ ಅತ್ಯಾಚಾರ, ತನಿಖೆಗೆ ವಿಶೇಷ ತಂಡ ರಚನೆ

By Sachhidananda Acharya
|
Google Oneindia Kannada News

ಲಕ್ನೋ, ಏಪ್ರಿಲ್ 10: ಉತ್ತರ ಪ್ರದೇಶದ ಉನ್ನಾವೋ ಬಿಜೆಪಿ ಶಾಸಕರ ಮೇಲೆ ಕೇಳಿ ಬಂದ ಅತ್ಯಾಚಾರ ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ (ಎಸ್ಐಟಿ) ರಚಿಸಲಾಗಿದೆ. ರಾಜ್ಯದಾದ್ಯಂತ ತೀವ್ರ ಆಕ್ರೋಶ ಹುಟ್ಟುಹಾಕಿರುವ ಈ ಪ್ರಕರಣದ ತನಿಖೆಗೆ ಎಸ್ಐಟಿ ರಚಿಸಿ ಲಕ್ನೋ ಎಡಿಜಿಪಿ ಆನಂದ್ ಕುಮಾರ್ ಆದೇಶ ಹೊರಡಿಸಿದ್ದಾರೆ.

ಇದೆಂಥ ಅಮಾನವೀಯತೆ?! ಪತ್ನಿಯನ್ನು ಮರಕ್ಕೆ ಕಟ್ಟಿ ಥಳಿಸಿದ ನಿರ್ದಯಿ ಪತಿ!ಇದೆಂಥ ಅಮಾನವೀಯತೆ?! ಪತ್ನಿಯನ್ನು ಮರಕ್ಕೆ ಕಟ್ಟಿ ಥಳಿಸಿದ ನಿರ್ದಯಿ ಪತಿ!

ಸಂತ್ರಸ್ತೆಯ ತಂದೆ ಜೈಲಿನಲ್ಲಿ ಸಾವನ್ನಪ್ಪಿರುವ ಪ್ರಕರಣವನ್ನೂ ತನಿಖೆ ನಡೆಸಲಾಗುತ್ತದೆ ಎಂದು ಅವರು ಇದೇ ಸಂದರ್ಭದಲ್ಲಿ ಹೇಳಿದ್ದಾರೆ.

ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಬಿಜೆಪಿ ಅಭ್ಯರ್ಥಿಗಳ ಮೊದಲ ಅಧಿಕೃತ ಪಟ್ಟಿ ಪ್ರಕಟ

ಇದೇ ವೇಳೆ ಮರಣೋತ್ತರ ಪರೀಕ್ಷೆ ಬಗ್ಗೆ ವಿವರ ನೀಡಿದ ಅವರು ಸಂತ್ರಸ್ತೆ ತಂದೆ ಸಾವನ್ನಪ್ಪಲು ಆಘಾತ ಮತ್ತು ಸೆಪ್ಟಿಸೆಮಿಯಾ ಕಾರಣ ಎಂದಿದ್ದಾರೆ.

SIT to probe all allegations in Unnao rape case

ಭಾನುವಾರ ಮಹಿಳೆ ಮತ್ತು ಅವರ ಕುಟುಂಬಸ್ಥರು ಲಕ್ನೋದಲ್ಲಿರುವ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನಿವಾಸದ ಮುಂದೆ ಆತ್ಮಹತ್ಯೆಗೆ ಯತ್ನಿಸಿದ್ದರು. ತನ್ನನ್ನು ಬಿಜೆಪಿ ಶಾಸಕ ಕುಲ್ದೀಪ್ ಸಿಂಗ್ ಸೆನ್ಗಾರ್ ಅತ್ಯಾಚಾರ ಮಾಡಿದ್ದಾರೆ ಎಂದು ಆಕೆ ದೂರಿದ್ದರು.

ಈ ಸಂದರ್ಭದಲ್ಲಿ ಸಂತ್ರಸ್ತೆಯ ತಂದೆಯನ್ನು ಬಂಧಿಸಲಾಗಿತ್ತು. ಮತ್ತು ಅವರು ಪೊಲೀಸ್ ಕಸ್ಟಡಿಯಲ್ಲಿ ಸಾವನ್ನಪ್ಪಿದ್ದರು.

ಈ ಘಟನೆ ಬೆನ್ನಲ್ಲೆ 6 ಜನ ಪೊಲೀಸರನ್ನು ಅಮಾನತು ಮಾಡಲಾಗಿತ್ತು. ಮತ್ತು 4 ಜನ ಆರೋಪಿಗಳನ್ನು ಸಂತ್ರಸ್ತೆಯ ತಂದೆಗೆ ಜೈಲಿನಲ್ಲಿ ಹೊಡೆದ ಕಾರಣಕ್ಕೆ ಬಂಧಿಸಲಾಗಿತ್ತು.

ಇನ್ನು ಇಂದು ಮುಂಜಾನೆ ಶಾಸಕರ ಸಹೋದರ ಅತುಲ್ ಸಿಂಗ್ ರನ್ನು ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲಾಗಿದೆ.

English summary
In the wake of rape allegations leveled against a Bharatiya Janata Party (BJP) MLA from Unnao, Lucknow Additional Director General Police (ADG) Law and Order Anand Kumar stated that a Special Investigation Team (SIT) has been constituted to examine the same.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X