Sitaram Yechury: ಸಿಪಿಎಂ ಹಿರಿಯ ನಾಯಕ ಸೀತಾಮ್ ಯೆಚೂರಿ ನಿಧನ
ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ಹಿರಿಯ ನಾಯಕ, ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ಗುರುವಾರ ನಿಧನವಾಗಿದ್ದಾರೆ. ಅವರಿಗೆ 72 ವರ್ಷ ವಯಸ್ಸಾಗಿತ್ತು. ಉಸಿರಾಟದ ಸೋಂಕಿನಿಂದ ಬಳಲುತ್ತಿದ್ದ ಅವರನ್ನು ಸೆಪ್ಟೆಂಬರ್ 10 ರಂದು ನವದೆಹಲಿಯ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (ಎಐಐಎಂಎಸ್) ಗೆ ದಾಖಲಿಸಲಾಗಿತ್ತು, ಅಲ್ಲಿ ಅವರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಇಂದು ಅವರು ಚಿಕಿತ್ಸೆ ಪಡೆಯದೆ ಮೃತಪಟ್ಟಿದ್ದಾರೆ.
ಆಗಸ್ಟ್ 12, 1952 ರಂದು ಚೆನ್ನೈನಲ್ಲಿ ಜನಿಸಿದ ಸೀತಾರಾಂ ಯೆಚೂರಿ ಅವರು ಭಾರತೀಯ ರಾಜಕೀಯ ಕ್ಷೇತ್ರದಲ್ಲಿ ಪ್ರಮುಖ ಹೆಸರ. ಸಮ್ಮಿಶ್ರ ರಾಜಕೀಯಕ್ಕೆ ಅವರ ಕಾರ್ಯತಂತ್ರದ ವಿಧಾನ ಮತ್ತು ಮಾರ್ಕ್ಸ್‌ವಾದದ ತತ್ವಗಳನ್ನು ಅನುಸರಿಸುವ ಮೂಲಕ ಹೆಸರು ಮಾಡಿದ್ದರು.

1974ರಲ್ಲಿ ಸ್ಟೂಡೆಂಟ್ಸ್ ಫೆಡರೇಶನ್ ಆಫ್ ಇಂಡಿಯಾ (ಎಸ್‌ಎಫ್‌ಐ) ಸೇರುವ ಮೂಲಕ ಅವರ ರಾಜಕೀಯ ಜೀವನ ಆರಂಭವಾಯಿತು. ಮೂರು ಬಾರಿ ಜೆಎನ್‌ಯು ವಿದ್ಯಾರ್ಥಿಗಳ ಒಕ್ಕೂಟದ ಅಧ್ಯಕ್ಷರಾಗಿದ್ದರು. ಎಸ್‌ಎಫ್‌ಐ ಅಖಿಲ ಭಾರತದ ಅಧ್ಯಕ್ಷರಾದರು, 1984 ರಲ್ಲಿ ಅವರು ಸಿಪಿಐ (ಎಂ) ಕೇಂದ್ರ ಸಮಿತಿಗೆ ಆಯ್ಕೆಯಾದರು. 1992 ರಿಂದ ಮೂರು ದಶಕಗಳ ಕಾಲ ಪಾಲಿಟ್‌ಬ್ಯೂರೊದ ಸದಸ್ಯರಾಗಿದ್ದರು.
ರಾಜ್ಯಸಭಾ ಸದಸ್ಯರಾಗಿ ಸೇವೆ
ಸೀತಾರಾಮ್ ಯೆಚೂರಿ 2005 ರಿಂದ 2017 ರವರೆಗೆ ಪಶ್ಚಿಮ ಬಂಗಾಳದಿಂದ ಸಂಸತ್ತಿನ ಸದಸ್ಯರಾಗಿ, ರಾಜ್ಯಸಭಾ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ. ಪ್ರಕಾಶ್ ಕಾರಟ್ ಬಳಿಕ 2015 ರಲ್ಲಿ ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿಯಾದರು, 2018 ಮತ್ತು 2022 ರಲ್ಲಿ ಎರಡು ಬಾರಿ ಮರು ಆಯ್ಕೆಯಾದರು.
ವಿವಿಧ ಗಣ್ಯರ ಸಂತಾಪ
ಹಿರಿಯ ನಾಯಕನ ನಿಧನಕ್ಕೆ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಸಂತಾಪ ಸೂಚಿಸಿದ್ದಾರೆ. "ಭಾರತದ ಬಗ್ಗೆ ಆಳವಾದ ತಿಳುವಳಿಕೆ ಹೊಂದಿದ್ದ, ನೈಜ ಭಾರತದ ಕಲ್ಪನೆಯ ರಕ್ಷಲ" ಎಂದು ಕರೆದಿದ್ದಾರೆ.
"ನಾವಿಬ್ಬರೂ ಸುದೀರ್ಘವಾಗಿ ನಡೆಸಿದ್ದ ಚರ್ಚೆಗಳನ್ನು ಕಳೆದುಕೊಳ್ಳಯತ್ತೇನೆ. ಈ ದುಃಖದ ಸಮಯದಲ್ಲಿ ಅವರ ಕುಟುಂಬ, ಸ್ನೇಹಿತರು ಮತ್ತು ಅನುಯಾಯಿಗಳಿಗೆ ಸಂತಾಪಗಳು" ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.
Sitaram Yechury ji was a friend.
— Rahul Gandhi (@RahulGandhi) September 12, 2024
A protector of the Idea of India with a deep understanding of our country.
I will miss the long discussions we used to have. My sincere condolences to his family, friends, and followers in this hour of grief. pic.twitter.com/6GUuWdmHFj
ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕೂಡ ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿದ್ದು, ಸಿಪಿಎಂ ಮುಖಂಡ ಸೀತಾರಾಂ ಯೆಚೂರಿ ನಿಧನ ರಾಷ್ಟ್ರೀಯ ರಾಜಕೀಯಕ್ಕೆ ನಷ್ಟ ಎಂದು ಹೇಳಿದ್ದಾರೆ.
ಸಿಪಿಐಎಂ ಪ್ರಧಾನ ಕಾರ್ಯದರ್ಶಿ
— Siddaramaiah (@siddaramaiah) September 12, 2024
ಸೀತಾರಾಮ್ ಯಚೂರಿ ಅವರ ಸಾವಿನಿಂದ ಆಘಾತಕ್ಕೀಡಾಗಿದ್ದೇನೆ.
ಎಡ ಸಿದ್ದಾಂತದ ಪ್ರಖರ ಚಿಂತಕರಾಗಿದ್ದ ಯಚೂರಿ ಅವರು ಅಪ್ಪಟ ಪ್ರಜಾಪ್ರಭುತ್ವವಾದಿಯೂ ಆಗಿದ್ದರು.
ಕೋಮುವಾದಿ ರಾಜಕೀಯದ ವಿರುದ್ಧ ಜಾತ್ಯತೀತ ಶಕ್ತಿಗಳ ಒಗ್ಗೂಡಿಸುವಿಕೆಯಲ್ಲಿ ಮುಖ್ಯ ಪಾತ್ರ ವಹಿಸುತ್ತಾ ಬಂದಿರುವ ಯಚೂರಿಯವರು ಕಾಂಗ್ರೆಸ್ ನೇತೃತ್ವದ ಯುಪಿಎ… pic.twitter.com/Q2DuS3DvDL
ಸಂತಾಪ ವ್ಯಕ್ತಪಡಿಸಿದ ಸಿದ್ದರಾಮಯ್ಯ
ಸಿಪಿಐಎಂ ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯಚೂರಿ ಅವರ ಸಾವಿನಿಂದ ಆಘಾತಕ್ಕೀಡಾಗಿದ್ದೇನೆ. ಎಡ ಸಿದ್ದಾಂತದ ಪ್ರಖರ ಚಿಂತಕರಾಗಿದ್ದ ಯಚೂರಿ ಅವರು ಅಪ್ಪಟ ಪ್ರಜಾಪ್ರಭುತ್ವವಾದಿಯೂ ಆಗಿದ್ದರು. ಕೋಮುವಾದಿ ರಾಜಕೀಯದ ವಿರುದ್ಧ ಜಾತ್ಯತೀತ ಶಕ್ತಿಗಳ ಒಗ್ಗೂಡಿಸುವಿಕೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಯಚೂರಿಯವರು ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರದ ರೂವಾರಿಗಳಲ್ಲೊಬ್ಬರಾಗಿದ್ದರು. ಕಳೆದ ವರ್ಷ ನಾನು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಸಮಾರಂಭಕ್ಕೆ ಆಗಮಿಸಿ, ಶುಭ ಹಾರೈಸಿದ್ದರು. ಇಂಡಿಯಾ ಒಕ್ಕೂಟ ಸ್ಥಾಪನೆಯಲ್ಲಿ ಕೂಡ ಅವರ ಕೊಡುಗೆ ಇದೆ.ಸೀತಾರಾಮ್ ಯಚೂರಿ ಅವರ ನಿಧನದಿಂದ ಕೋಮುವಾದ ಮತ್ತು ಬಂಡವಾಳವಾದದ ವಿರುದ್ಧದ ಹೋರಾಟಕ್ಕೆ ತುಂಬಲಾರದ ನಷ್ಟವಾಗಿದೆ. ಅವರ ಕುಟುಂಬ ಮತ್ತು ಸಂಗಾತಿಗಳ ದು:ಖದಲ್ಲಿ ನಾನೂ ಭಾಗಿಯಾಗಿದ್ದೇನೆ ಎಂದು ಹೇಳಿದ್ದಾರೆ.
-
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
ಇಡೀ ಸರ್ಕಾರವೇ ಉಮೇಶ್ ಮೇಟಿ ಜೊತೆಗಿದೆ: ಬಾಗಲಕೋಟೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಶಿವಕುಮಾರ್ ಅಭಯ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ











Click it and Unblock the Notifications