• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಎಸಿ ರೂಂನಲ್ಲಿ ಕುಳಿತು ಬಿಜೆಪಿ ಪ್ರಣಾಳಿಕೆ ತಯಾರಿಸುವುದಿಲ್ಲ: ನಿರ್ಮಲಾ ಸೀತಾರಾಮನ್

|
Google Oneindia Kannada News

ಪುದುಚೇರಿ, ಮಾರ್ಚ್ 26: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಪುದುಚೇರಿ ಚುನಾವಣೆಗೆ ಬಿಜೆಪಿಯ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿದರು.

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಕೇಂದ್ರ ಸಚಿವರುಗಳಾದ ಅರ್ಜುನ್ ರಾಮ್ ಮೇಘಾವಲ್ ಮತ್ತು ಗಿರಿರಾಜ್ ಸಿಂಗ್ ಉಪಸ್ಥಿತರಿದ್ದರು.

ಪುದುಚೇರಿ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿಯಲ್ಲಿ ನಾರಾಯಣಸ್ವಾಮಿ ಹೆಸರೇ ಇಲ್ಲಪುದುಚೇರಿ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿಯಲ್ಲಿ ನಾರಾಯಣಸ್ವಾಮಿ ಹೆಸರೇ ಇಲ್ಲ

ಎಸಿ ರೂಂನಲ್ಲಿ ಕುಳಿತುಕೊಂಡು ನಾವು ಪ್ರಣಾಳಿಕೆ ತಯಾರಿಸಿಲ್ಲ. ತಾವು ನೀಡಿರುವ ಭರವಸೆಗಳನ್ನು ಪ್ರಧಾನಿ ಮೋದಿಯವರು ಜನರಿಗೆ ನೀಡುತ್ತಾ ಬಂದಿದ್ದಾರೆ ಎಂದು ಪುದುಚೆರಿಯಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದರು.

ಜನರಿಂದ ಸಲಹೆ, ಸೂಚನೆಗಳನ್ನು ಪಡೆದುಕೊಂಡು ಬಿಜೆಪಿಯು ನ್ಯಾಯಯುತವಾದ ಚುನಾವಣಾ ಪ್ರಣಾಳಿಕೆಯನ್ನು ಇಂದು ಬಿಡುಗಡೆ ಮಾಡಿದೆ. ಮಾರ್ಚ್ 12ರಂದು ಅಧಿಸೂಚನೆ ಪ್ರಕಟ. ಮಾರ್ಚ್ 19 ನಾಮಪತ್ರ ಸಲ್ಲಿಸಲು ಕೊನೆಯ ದಿನ. ಮಾರ್ಚ್ 20 ನಾಮಪತ್ರ ಪರಿಶೀಲನೆ, 22ನೇ ಮಾರ್ಚ್ ನಾಮಪತ್ರ ಹಿಂಪಡೆಯಲು ಕೊನೆಯ ದಿನ, ಏಪ್ರಿಲ್ 6 ಚುನಾವಣೆ.

ಇತ್ತೀಚೆಗಷ್ಟೇ ಕಾಂಗ್ರೆಸ್ ಪುದುಚೇರಿ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿತ್ತು ಆದರೆ ಅದರಲ್ಲಿ ನಿರ್ಗಮಿತ ಸಿಎಂ ನಾರಾಯಣಸ್ವಾಮಿ ಅವರ ಹೆಸರೇ ಇರಲಿಲ್ಲ.

ಒಟ್ಟು 30 ಕ್ಷೇತ್ರಗಳಲ್ಲಿ 15 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಸ್ಪರ್ಧಿಸುತ್ತಿದ್ದು, ಡಿಎಂಕೆ 13 ಹಾಗೂ ಸಿಪಿಐ ಹಾಗೂ ವಿಎಂಕೆ ತಲಾ ಒಂದು ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿದೆ. ಕೇಂದ್ರ ಚುನಾವಣಾ ಆಯೋಗವು ತಮಿಳುನಾಡು,ಪುದುಚೇರಿ,ಅಸ್ಸಾಂ,ಕೇರಳ,ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ ದಿನಾಂಕಗಳ ವೇಳಾಪಟ್ಟಿಯನ್ನು ಪ್ರಕಟಿಸಿದೆ.

English summary
Few Days ahead of the state assembly election, the Bharatiya Janata Party (BJP) on Friday released the party’s manifesto for upcoming Puducherry elections.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X