ಕರ್ನಾಟಕ ಹೈಕೋರ್ಟ್‌ಗೆ ಸಿಜೆ ಹೆಸರು ಶಿಫಾರಸು

Posted By:
Subscribe to Oneindia Kannada

ನವದೆಹಲಿ, ಜನವರಿ 20 : ಕರ್ನಾಟಕ ಸೇರಿದಂತೆ 6 ಹೈಕೋರ್ಟ್‌ಗಳಿಗೆ ಮುಖ್ಯ ನ್ಯಾಯಮೂರ್ತಿಗಳ ನೇಮಕವಾಗಲಿದೆ. ಸದ್ಯ, ಕರ್ನಾಟಕ ಹೈಕೋರ್ಟ್ ಹಂಗಾಮಿ ಮುಖ್ಯ ನ್ಯಾಯಮೂರ್ತಿಗಳಾಗಿರುವ ಎಸ್.ಕೆ.ಮುಖರ್ಜಿ ಅವರ ಹೆಸರನ್ನೇ ಕೊಲಿಜಿಯಂ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದೆ.

ಸುಪ್ರೀಂಕೋರ್ಟ್ ಕೊಲಿಜಿಯಂ ವ್ಯವಸ್ಥೆ ಮಂಗಳವಾರ ರಾಜಸ್ಥಾನ, ಪಾಟ್ನಾ, ಗುಜರಾತ್, ಮೇಘಾಲಯ, ಗುಹವಾಟಿ ಮತ್ತು ಕರ್ನಾಟಕದ ಹೈಕೋರ್ಟ್‌ಗಳಿಗೆ ಮುಖ್ಯ ನ್ಯಾಯಮೂರ್ತಿಗಳ ಹೆಸರನ್ನು ಶಿಫಾರಸು ಮಾಡಿ, ಕೇಂದ್ರ ಸರ್ಕಾರಕ್ಕೆ ಕಳುಹಿಸಿದೆ.

high court

ನ್ಯಾಯಮೂರ್ತಿ ಸುಬ್ರೊ ಕಮಲ್ ಮುಖರ್ಜಿ ಅವರು ಸದ್ಯ ಕರ್ನಾಟಕ ಹೈಕೋರ್ಟ್ ಹಂಗಾಮಿ ಮುಖ್ಯ ನ್ಯಾಯಮೂರ್ತಿಗಳಾಗಿ ಕಾರ್ಯನಿರ್ವಹಣೆ ಮಾಡುತ್ತಿದ್ದು, ಅವರ ಹೆಸರನ್ನೇ ಖಾಯಂಗೊಳಿಸಲು ಕೊಲಿಜಿಯಂ ಶಿಫಾರಸು ಮಾಡಿದೆ. ಜನವರಿ 26ರಂದು ಸಿಜೆಗಳ ನೇಮಕದ ಪಟ್ಟಿ ಪ್ರಕಟಗೊಳ್ಳುವ ಸಾಧ್ಯತೆ ಇದೆ.

ಕೋಲ್ಕತ್ತಾ ಹೈಕೋರ್ಟ್‌ ಹಿರಿಯ ನ್ಯಾಯಮೂರ್ತಿಗಳಾಗಿದ್ದ ಮುಖರ್ಜಿ ಅವರು ಕರ್ನಾಟಕ ಹೈಕೋರ್ಟ್ ಹಂಗಾಮಿ ನ್ಯಾಯಮೂರ್ತಿಗಳಾಗಿ 2015ರ ಏ.15ರಂದು ಪ್ರಮಾಣವಚನ ಸ್ವೀಕರಿಸಿದರು.

1955ರ ಅಕ್ಟೋಬರ್ 10ರಂದು ಜನಿಸಿದ ಎಸ್.ಕೆ.ಮುಖರ್ಜಿ ಅವರು ಕೋಲ್ಕತ್ತಾ ವಿಶ್ವವಿದ್ಯಾಲಯದಿಂದ ಎಂಎ ಮತ್ತು ಎಲ್‌ಎಲ್‌ಬಿ ಪದವಿ ಪಡೆದಿದ್ದಾರೆ. 1982ರಲ್ಲಿ ಮುಖರ್ಜಿ ಅವರು ವಕೀಲರಾಗಿ ವೃತ್ತಿ ಆರಂಭಿಸಿದರು. 2000ದಿಂದ ಕೋಲ್ಕತ್ತಾ ಹೈಕೋರ್ಟ್ ನ್ಯಾಯಮೂರ್ತಿಯಾಗಿದ್ದ ಅವರನ್ನು ಕರ್ನಾಟಕ ಹೈಕೋರ್ಟ್‌ಗೆ ವರ್ಗಾವಣೆ ಮಾಡಲಾಗಿದೆ.

ಮೊದಲ ಶಿಫಾರಸು : ಕೇಂದ್ರ ಸರ್ಕಾರ ನ್ಯಾಯಮೂರ್ತಿಗಳ ನೇಮಕಕ್ಕೆ ಇರುವ ಕೊಲಿಜಿಯಂ ವ್ಯವಸ್ಥೆಯನ್ನು ರದ್ದುಪಡಿಸಿ, ನ್ಯಾಯಾಂಗ ನೇಮಕಾತಿ ಆಯೋಗ (ಎನ್‍ಜೆಎಸಿ) ವ್ಯವಸ್ಥೆ ಜಾರಿಗೆ ತರಲು ನಿರ್ಧರಿಸಿತ್ತು. ಈ ಕುರಿತು ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು.

ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್, ಕೇಂದ್ರ ಸರ್ಕಾರದ ನಿರ್ಧಾರ ಅಸವಿಂಧಾನಿಕ ಎಂದು ಹೇಳಿತ್ತು. ನ್ಯಾಯಮೂರ್ತಿಗಳ ಆಯ್ಕೆಗೆ ಈಗ ಇರುವ ಕೊಲಿಜಿಯಂ ವ್ಯವಸ್ಥೆಗೆ ಸಮರ್ಪಕವಾಗಿದೆ ಎಂದು ಹೇಳಿತ್ತು. ಈ ಬೆಳವಣಿಗೆಗಳ ಬಳಿಕ ಮೊದಲ ಬಾರಿಗೆ ಕೊಲಿಜಿಯಂ 6 ಹೈಕೋರ್ಟ್‌ಗಳ ಮುಖ್ಯ ನ್ಯಾಯಮೂರ್ತಿಗಳ ನೇಮಕಕ್ಕೆ ಶಿಫಾರಸು ಮಾಡಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Six high courts are set to get new Chief Justices with the Supreme Court collegium recommending their names to the government. Six judges to head high courts of Rajasthan, Patna, Gauhati, Meghalaya, Karnataka and Gujarat.
Please Wait while comments are loading...