ಕೊರೊನಾ ಏರಿಕೆ; ಈ ಆರು ರಾಜ್ಯಗಳಿಂದ ಎದುರಾಗಿದೆ ಆತಂಕ

ನವದೆಹಲಿ, ಮಾರ್ಚ್ 11: ದೇಶದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದ್ದು, ಮಹಾರಾಷ್ಟ್ರ, ಕೇರಳ, ಪಂಜಾಬ್, ಕರ್ನಾಟಕ, ಗುಜರಾತ್ ಹಾಗೂ ತಮಿಳುನಾಡು, ಈ ಆರು ರಾಜ್ಯಗಳಿಂದ ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 85.91% ಹೊಸ ಕೊರೊನಾ ಪ್ರಕರಣಗಳು ದಾಖಲಾಗಿರುವುದಾಗಿ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ ಒಟ್ಟಾರೆ 22,854 ಹೊಸ ಪ್ರಕರಣಗಳು ದಾಖಲಾಗಿದ್ದು, ಇದರಲ್ಲಿ ಈ ಆರು ರಾಜ್ಯಗಳ ಪಾಲು 85.91% ರಷ್ಟಿದೆ ಎಂದು ಸಚಿವಾಲಯ ತಿಳಿಸಿದೆ. ಮಹಾರಾಷ್ಟ್ರದಲ್ಲಿ ಅತಿ ಹೆಚ್ಚಿನ ಸಂಖ್ಯೆಯ ಪ್ರಕರಣಗಳು ದಾಖಲಾಗಿದ್ದು, ದೇಶದಲ್ಲಿ ದಾಖಲಾದ ಒಟ್ಟು ಪ್ರಕರಣಗಳಲ್ಲಿ 60% ಪಾಲು ಮಹಾರಾಷ್ಟ್ರದ್ದಾಗಿದೆ. ಇನ್ನೂ ಹಲವು ರಾಜ್ಯಗಳಲ್ಲಿ ಕೊರೊನಾ ಪ್ರಕರಣಗಳು ನಿರಂತರವಾಗಿ ಏರಿಕೆಯಾಗುತ್ತಲೇ ಇವೆ. ಮುಂದೆ ಓದಿ...

 ಈ ರಾಜ್ಯಗಳಲ್ಲಿ ನಿರಂತರ ಏರಿಕೆಯಾಗುತ್ತಿದೆ ಕೊರೊನಾ

ಈ ರಾಜ್ಯಗಳಲ್ಲಿ ನಿರಂತರ ಏರಿಕೆಯಾಗುತ್ತಿದೆ ಕೊರೊನಾ

ಕಳೆದ 24 ಗಂಟೆಗಳಲ್ಲಿ ಮಹಾರಾಷ್ಟ್ರದಲ್ಲಿ 13,659 ಪ್ರಕರಣಗಳು ದಾಖಲಾಗಿದ್ದು, ಕೇರಳದಲ್ಲಿ 2,475 ಪ್ರಕರಣಗಳು ದಾಖಲಾಗಿವೆ. ಪಂಜಾಬ್‌ನಲ್ಲಿ 1,393 ಪ್ರಕರಣಗಳು ದಾಖಲಾಗಿರುವುದಾಗಿ ತಿಳಿದುಬಂದಿದೆ. ಮಹಾರಾಷ್ರ, ತಮಿಳುನಾಡು, ಪಂಜಾಬ್, ಮಧ್ಯ ಪ್ರದೇಶ, ದೆಹಲಿ, ಗುಜರಾತ್, ಕರ್ನಾಟಕ ಹಾಗೂ ಹರಿಯಾಣದಲ್ಲಿ ಹೊಸ ಕೊರೊನಾ ಪ್ರಕರಣಗಳು ಏರಿಕೆಯಾಗುತ್ತಲೇ ಇರುವುದಾಗಿ ಸಚಿವಾಲಯ ತಿಳಿಸಿದೆ.

 ದೇಶದಲ್ಲಿ ಸಾವಿನ ಪ್ರಕರಣಗಳಲ್ಲೂ ಏರಿಕೆ

ದೇಶದಲ್ಲಿ ಸಾವಿನ ಪ್ರಕರಣಗಳಲ್ಲೂ ಏರಿಕೆ

ಮಹಾರಾಷ್ಟ್ರದಲ್ಲಿ ಸಾವಿನ ಸಂಖ್ಯೆಯೂ ಹೆಚ್ಚಾಗಿದ್ದು, ಕಳೆದ 24 ಗಂಟೆಗಳಲ್ಲಿ 54 ಮಂದಿ ಸಾವನ್ನಪ್ಪಿದ್ದಾರೆ. ಪಂಜಾಬ್‌ನಲ್ಲಿ 17 ಮಂದಿ, ಕೇರಳದಲ್ಲಿ 14 ಮಂದಿ ಸಾವನ್ನಪ್ಪಿರುವುದಾಗಿ ತಿಳಿದುಬಂದಿದೆ. ದೇಶದ ಸಾವಿನ ಪ್ರಕರಣಗಳಲ್ಲೂ 82.54% ಏರಿಕೆಯಾಗಿದ್ದು, ಕಳೆದ 24 ಗಂಟೆಗಳಲ್ಲಿ 126 ಸಾವಿನ ಪ್ರಕರಣಗಳು ದಾಖಲಾಗಿವೆ. ಮಹಾರಾಷ್ಟ್ರದಲ್ಲಿ ಕೊರೊನಾ ಏರಿಕೆಯಾಗುತ್ತಿರುವುದರಿಂದ ಕೆಲವು ಪ್ರದೇಶಗಳಲ್ಲಿ ಲಾಕ್‌ಡೌನ್‌ ಘೋಷಿಸಲು ಸಿಎಂ ಉದ್ಧವ್ ಠಾಕ್ರೆ ನಿರ್ಧರಿಸಿದ್ದಾರೆ.

 19 ರಾಜ್ಯಗಳಲ್ಲಿ ಸೋಂಕು ಸಂಬಂಧಿ ಸಾವಿನ ಪ್ರಕರಣಗಳಿಲ್ಲ

19 ರಾಜ್ಯಗಳಲ್ಲಿ ಸೋಂಕು ಸಂಬಂಧಿ ಸಾವಿನ ಪ್ರಕರಣಗಳಿಲ್ಲ

ದೇಶದ 19 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶದಲ್ಲಿ ಕೊರೊನಾದಿಂದ ಸಾವು ಸಂಭವಿಸಿಲ್ಲ ಎಂದು ಸಚಿವಾಲಯ ಮಾಹಿತಿ ತಿಳಿಸಿದ್ದು, ಸಮಾಧಾನಕರ ಸಂಗತಿ ಎನಿಸಿದೆ. ಗುಜರಾತ್, ರಾಜಸ್ಥಾನ, ಉತ್ತರ ಪ್ರದೇಶ, ಅಸ್ಸಾಂ, ಒಡಿಶಾ, ಗೋವಾ, ಜಾರ್ಖಂಡ್, ಪುದುಚೇರಿ, ಲಕ್ಷದ್ವೀಪ, ಸಿಖ್ಖಿಂ, ಲಡಾಖ್, ಮಣಿಪುರ, ದಮನ್, ದಾದ್ರ, ನಗರ್ ಹವೇಲಿ, ಮೇಘಾಲಯ, ಮಣಿಪುರ, ಡಿಯು, ಮಿಜೋರಾಂ, ನಾಗಾಲ್ಯಾಂಡ್, ತ್ರಿಪುರ, ಅಂಡಮಾನ್ ನಿಕೋಬಾರ್, ಅರುಣಾಚಲ ಪ್ರದೇಶದಲ್ಲಿ ಸೋಂಕಿನಿಂದ ಸಾವನ್ನಪ್ಪಿದ ವರದಿಯಾಗಿಲ್ಲ.

 ಕೇರಳದಲ್ಲಿ ತಗ್ಗಿರುವ ಪ್ರಕರಣ

ಕೇರಳದಲ್ಲಿ ತಗ್ಗಿರುವ ಪ್ರಕರಣ

ಕೇರಳದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಕ್ರಮೇಣ ತಗ್ಗುತ್ತಿದ್ದು, ಮಹಾರಾಷ್ಟ್ರದಲ್ಲಿ ಗರಿಷ್ಠ ಪ್ರಕರಣಗಳು ದಾಖಲಾಗಿವೆ. ಭಾರತದಲ್ಲಿ ಒಟ್ಟು 189,226 ಸಕ್ರಿಯ ಕೊರೊನಾ ಪ್ರಕರಣಗಳಿವೆ ಎಂದು ಸಚಿವಾಲಯ ಮಾಹಿತಿ ನೀಡಿದೆ. ಸದ್ಯಕ್ಕೆ ಕೊರೊನಾ ಪ್ರಕರಣಗಳ ಏರಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಕೇಂದ್ರ ಸರ್ಕಾರ ಆಯಾ ರಾಜ್ಯಗಳಿಗೆ ಸೂಚಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+