ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪ್ರಧಾನಿ ಮೋದಿ ಭೇಟಿ ಮಾಡಿದ ಎಸ್ಸೆಂ ಕೃಷ್ಣ

ಎರಡು ದಿನಗಳ ಹಿಂದಷ್ಟೇ ಬಿಜೆಪಿಗೆ ಸೇರಿಕೊಂಡ ನಂತರ ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಹಾಗೂ ಪ್ರಧಾನಿ ನರೇಂದ್ರ ಮೋದಿಯವರ ಇದೇ ಮೊದಲ ಬಾರಿಗೆ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

|
Google Oneindia Kannada News

ನವದೆಹಲಿ, ಮಾರ್ಚ್ 24: ಎರಡು ದಿನಗಳ ಹಿಂದಷ್ಟೇ ಬಿಜೆಪಿಗೆ ಸೇರ್ಪಡೆಗೊಂಡಿರುವ ಕಾಂಗ್ರೆಸ್ ಮಾಜಿ ಸದಸ್ಯ ಹಾಗೂ ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರು, ಶುಕ್ರವಾರ (ಮಾರ್ಚ್ 24) ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.

ಮಾತುಕತೆ ವೇಳೆ, ಕೃಷ್ಣ ಅವರು ಬಿಜೆಪಿಗೆ ಆಗಮಿಸಿದ್ದಕ್ಕೆ ಖುಷಿ ವ್ಯಕ್ತಪಡಿಸಿದ ಮೋದಿ, ಬಿಜೆಪಿಯಲ್ಲಿ ಕೃಷ್ಣ ಅವರಿಗೆ ಒಳಿತಾಗಲಿ ಎಂದು ಹಾರೈಸಿರುವುದಾಗಿ ಮೂಲಗಳು ತಿಳಿಸಿವೆ.[ಎಸ್ಎಂ ಕೃಷ್ಣ ಅವರನ್ನು ಗೌರವಯುತವಾಗಿ ನಡೆಸಿಕೊಳ್ಳುತ್ತೇವೆ: ಅಮಿತ್ ಶಾ]

SM Krishna Meets Prime Minister Narendra Modi

ಮಾರ್ಚ್ 24ರ ಸಂಜೆ ನವದೆಹಲಿಯಿಂದ ಬೆಂಗಳೂರಿಗೆ ತೆರಳಲಿರುವ ಎಸ್.ಎಂ. ಕೃಷ್ಣ ಅವರಿಗಾಗಿ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ರಾಜ್ಯ ಬಿಜೆಪಿ ಕಚೇರಿಯಲ್ಲಿ ಸ್ವಾಗತ ಸಮಾರಂಭವನ್ನು ಏರ್ಪಡಿಸಲಾಗಿತ್ತು.[ಎಸ್ಎಂ ಕೃಷ್ಣ ಬಿಜೆಪಿ ಸೇರಿದರೆ ಆಗುವ ಲಾಭನಷ್ಟಗಳೇನು?]

ಈ ಸಮಾರಂಭದಲ್ಲಿ ಮಾತನಾಡಿದ ಎಸ್ಸೆಂ ಕೃಷ್ಣ, ತಾವು ಮೋದಿಯವರ ರಾಜಕೀಯ ನಡೆಗಳು, ಚಿಂತನೆಗಳಿಗೆ ಆಕರ್ಷಿಸಲ್ಪಟ್ಟು ಬಿಜೆಪಿಗೆ ಸೇರಿರುವುದಾಗಿ ತಿಳಿಸಿದರಲ್ಲದೆ, ಕಾಂಗ್ರೆಸ್ಸಿನಲ್ಲಿ ಅನುಭವಿಸಿದ ಮಾನಸಿಕ ಯಾತನೆಗಳೇ ಬಿಜೆಪಿಯತ್ತ ಮುಖ ಮಾಡಲು ಕಾರಣ ಎಂದು ತಿಳಿಸಿದರು.

English summary
A day after joining BJP, former Chief Minister of Karnataka, SM Krishna met Prime Minister Narendra Modi on March 24, 2017.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X