Tirupati: ಮಂಗಳಾರತಿ ಸಮಯದಲ್ಲಿ ತಿರುಪತಿ ತಿಮ್ಮಪ್ಪನ ಮುಖದಲ್ಲಿ ನಗು- ವಿಡಿಯೋ
ಅಖಿಲಾಂಡಕೋಟಿ ಬ್ರಹ್ಮಾಂಡ ನಾಯಕ ತಿರುಪತಿ ವೆಂಕಟರಮಣಸ್ವಾಮಿ ಸನ್ನಿಧಿಯಲ್ಲಿ ಪವಾಡವೊಂದು ನಡೆದಿದೆ. ಮಂಗಳಾರತಿ ಸಮಯದಲ್ಲಿ ತಿರುಪತಿ ತಿಮ್ಮಪ್ಪನ ಮುಖದಲ್ಲಿ ನಗು ಕಾಣಿಸಿಕೊಂಡಿದೆ. ಈ ದೃಶ್ಯ ಕಂಡು ಭಕ್ತರು ಆಶ್ಚರ್ಯಗೊಂಡಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗಿದ್ದು, ತಿಮ್ಮಪ್ಪನನ್ನು ಕಾಣುವ ಕುತೂಹಲ ಹೆಚ್ಚಿಸಿದೆ.
ಕಳೆದ ಬಾರಿ ತಿರುಮಲ ತಿರುಪತಿ ದೇವಸ್ಥಾನದ ಸುತ್ತಲು ಆಕಾಶದಲ್ಲಿ ಕಾಮನ ಬಿಲ್ಲು ಆವರಿಸಿತ್ತು. ಈ ಬಾರಿ ತಿಮ್ಮಪ್ಪನ ಮುಖದಲ್ಲಿ ನಗು ಕಾಣಿಸಿಕೊಂಡಿದೆ. ಇದನ್ನು ಕಂಡ ಜನ ಮಂಗಳಾರತಿಯಿಂದ ತಿಮ್ಮಪ್ಪ ಸಂತೋಷಗೊಂಡು ಭಕ್ತರನ್ನು ಆಶೀರ್ವದಿಸಿದ್ದಾನೆ ಎಂದು ಹೇಳುತ್ತಿದ್ದಾರೆ. ಹಿಂದೆಂದೂ ಇಂತಹ ಘಟನೆ ತಿರುಪತಿ ತಿಮ್ಮಪ್ಪನ ದೇವಸ್ಥನದಲ್ಲಿ ನಡೆದಿರಲಿಲ್ಲ. ಈ ದೃಶ್ಯವನ್ನು ಪೂಜೆಯ ವೇಳೆ ನೆರೆದ ಭಕ್ತರು ಸೆರೆಹಿಡಿದಿದ್ದಾರೆ. ಇದು ತಿಮ್ಮಪ್ಪನ ಮೇಲಿನ ನಂಬಿಕೆಯನ್ನು ಹೆಚ್ಚಿಸಿದೆ.

ಸದ್ಯ ನವರಾತ್ರಿಯ ಆಚರಣೆ ತಿರುಪತಿಯಲ್ಲಿ ಸಡಗರದಿಂದ ಸಾಗಿದೆ. ಅಕ್ಟೋಬರ್ 15 ರಿಂದ 23 ರವರೆಗೆ ನವರಾತ್ರಿ ಬ್ರಹ್ಮೋತ್ಸವಗಳು ನಡೆಯುತ್ತದೆ. ತಿರುಪತಿಯಲ್ಲಿ ಬ್ರಹ್ಮೋತ್ಸವದ ಪ್ರಯುಕ್ತ ನಿತ್ಯ ವಿಶೇಷ ಪೂಜೆಗಳು ನಡೆಯುತ್ತಿವೆ. ಇದನ್ನು ಕಣ್ತುಂಬಿಕೊಳ್ಳಲು ಭಕ್ತ ಸಾಗರವೇ ಹರಿದು ಬರುತ್ತಿದೆ.
ತಿರುಮಲ ತಿರುಪತಿ ದೇವಾಲಯವನ್ನು ಹಿಂದೂ ಧರ್ಮ ಗ್ರಂಥಗಳಲ್ಲಿ ವಿಷ್ಣು ದೇವನು ಕಲಿಯುಗದಲ್ಲಿ ವಾಸಿಸುವ ಐಹಿಕ ಸ್ಥಳವೆಂದು ವಿವರಿಸಲಾಗಿದೆ. ತಿರುಪತಿ ಬಾಲಾಜಿ ಅಥವಾ ಶ್ರೀ ವೆಂಕಟೇಶ್ವರ ಸ್ವಾಮಿ ದೇವಾಲಯವು ಹಿಂದೂ ಪುರಾಣದ ಅತ್ಯಂತ ಪ್ರಮುಖ ಹೆಗ್ಗುರುತುಗಳಲ್ಲಿ ಇಂದಾಗಿದೆ. ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯಲ್ಲಿ ನಾವು ಈ ಅದ್ಬುತವಾದ ಹಾಗೂ ಪ್ರಭಾವಶಾಲಿಯಾದ ದೇವಾಲಯವನ್ನು ನೋಡಬಹುದು.
ತಿರುಪತಿ ಬಾಲಾಜಿ ದೇವಾಲಯವು ಭೂಮಿಯ ಮೇಲಿನ ಅತ್ಯಂತ ಜನಪ್ರಿಯ ದೇವಾಲಯವಾಗಿದ್ದು, ವರ್ಷದ ಯಾವುದೇ ದಿನ ಈ ದೇವಾಲಯಕ್ಕೆ ಭೇಟಿ ನೀಡಬಹುದು. ಲಕ್ಷಾಂತರ ಜನ ನಿತ್ಯ ತಿರುಪತಿಗೆ ಭೇಟಿ ನೀಡುತ್ತಾರೆ. ಇಲ್ಲಿ ಭಕ್ತರು ತಮ್ಮೆಲ್ಲಾ ಇಚ್ಚೆಯನ್ನು ಈಡೇರಿಸುವಂತೆ ಭಗವಂತನಲ್ಲಿ ಬೇಡಿಕೊಳ್ಳುತ್ತಾರೆ.
ತಿರುಪತಿ ಇತಿಹಾಸ
ವಿಜಯನಗರ ಸಾಮ್ರಾಜ್ಯದ ಅಂತ್ಯದ ನಂತರ, ದೇವಾಲಯವು ಜುಲೈ 1656 ರಲ್ಲಿ ಗೋಲ್ಕೊಂಡದ ಕೈಗೆ ಹೋಯಿತು. 19ನೇ ಶತಮಾನದ ಪೂರ್ವಾರ್ಧದಲ್ಲಿ ಬ್ರಿಟೀಷರು ದೇವಾಲಯಕ್ಕೆ ವಿಶೇಷ ಸ್ಥಾನಮಾನವನ್ನು ನೀಡಿದರು ಮತ್ತು ದೇವಾಲಯದ ಚಟುವಟಿಕೆಗಳಲ್ಲಿ ಹಸ್ತಕ್ಷೇಪ ಮಾಡಲಿಲ್ಲ. 1933 ರಲ್ಲಿ ಟಿಟಿಡಿ ಕಾಯಿದೆಯ ಪರಿಣಾಮವಾಗಿ ತಿರುಮಲ ತಿರುಪತಿ ದೇವಸ್ಥಾನಗಳ ರಚನೆಯಾಯಿತು.
ಇಲ್ಲಿನ ವೆಂಕಟೇಶ್ವರ ಸ್ವಾಮಿಯ ಮುಖ್ಯ ವಿಗ್ರಹವು ತುಂಬಾ ವಿಶಿಷ್ಟ ಮತ್ತು ಶಕ್ತಿಯುತವಾಗಿದೆ ಎಂದು ಹೇಳಲಾಗುತ್ತದೆ. ಆಕರ್ಷಕ ವಿಗ್ರಹವು ಹಲವಾರು ಪವಾಡದ ಲಕ್ಷಣಗಳನ್ನು ಹೊಂದಿದೆ. ಪ್ರತಿದಿನವೂ, ವಿಗ್ರಹವನ್ನು ಹೂವುಗಳಿಂದ, ಉಡುಪುಗಳಿಂದ ಮತ್ತು ಆಭರಣಗಳಿಂದಭವ್ಯವಾದ ಅಲಂಕರಿಸಲಾಗುತ್ತದೆ. ನಿತ್ಯ ವಿಶೇಷ ಪೂಜೆಗಳನ್ನು ಕೈಗೊಳ್ಳಲಾಗುತ್ತದೆ. ಇದರಿಂದಾಗಿ ಇಲ್ಲಿಗೆ ಬರುವ ಭಕ್ತರ ಸಂಖ್ಯೆಯೂ ಅಧಿಕ.












Click it and Unblock the Notifications