ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

#BhaagRahulBhaag ರಾಹುಲ್ ವ್ಯಂಗ್ಯವಾಡಿದ ಸ್ಮೃತಿ ಇರಾನಿ

|
Google Oneindia Kannada News

ನವದೆಹಲಿ, ಮಾರ್ಚ್ 24 : ಎಐಸಿಸಿ ಅಧ್ಯಕ್ಷ, ಅಮೇಥಿ ಕ್ಷೇತ್ರದ ಸಂಸದ ರಾಹುಲ್ ಗಾಂಧಿ ಅವರನ್ನು ಕೇಂದ್ರ ಸಚಿವೆ ಸ್ಮೃತಿ ಇರಾನಿ ವ್ಯಂಗ್ಯವಾಡಿದ್ದಾರೆ. 'ಬಾಗ್ ರಾಹುಲ್ ಬಾಗ್' ಎಂದು ಟ್ವೀಟ್ ಮಾಡಿದ್ದಾರೆ. ಅಮೇಥಿ ಕ್ಷೇತ್ರದಲ್ಲಿ ರಾಹುಲ್ ಮತ್ತು ಸ್ಮೃತಿ ಈ ಬಾರಿಯ ಚುನಾವಣೆಯಲ್ಲಿಯೂ ಎದುರಾಳಿಗಳು.

ದಕ್ಷಿಣ ಭಾರತದ ಕರ್ನಾಟಕ, ತಮಿಳುನಾಡು ಮತ್ತು ಕೇರಳ ರಾಜ್ಯಗಳು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ತಮ್ಮ ರಾಜ್ಯದಿಂದ ಸ್ಪರ್ಧಿಸುವಂತೆ ಆಹ್ವಾನ ನೀಡಿವೆ. ಈ ಬೇಡಿಕೆಯನ್ನು ಮುಂದಿಟ್ಟುಕೊಂಡು ರಾಹುಲ್ ಗಾಂಧಿ ಅವರನ್ನು ವ್ಯಂಗ್ಯವಾಡಿದ್ದಾರೆ.

ಕರ್ನಾಟಕದಿಂದ ರಾಹುಲ್ ಗಾಂಧಿ ಸ್ಪರ್ಧೆ : ಮೂರು ಕ್ಷೇತ್ರಗಳುಕರ್ನಾಟಕದಿಂದ ರಾಹುಲ್ ಗಾಂಧಿ ಸ್ಪರ್ಧೆ : ಮೂರು ಕ್ಷೇತ್ರಗಳು

ಸ್ಮೃತಿ ಇರಾನಿ ಟ್ವೀಟ್‌ಗೆ ಕಾಂಗ್ರೆಸ್ ತಿರುಗೇಟು ನೀಡಿದೆ. ಪದೇ ಪದೇ ಸೋತರೂ ಗೆಲ್ಲುವ ನಿರೀಕ್ಷೆ ಏಕೆ. ರಾಜ್ಯಸಭೆ ಸೀಟನ್ನು ಗಟ್ಟಿಮಾಡಿಕೊಳ್ಳಿ ಎಂದು ಲೇವಡಿ ಮಾಡಿದೆ. ಅಮೇಥಿ ಕ್ಷೇತ್ರದಲ್ಲಿ ರಾಹುಲ್ ಗಾಂಧಿ ಮತ್ತು ಸ್ಮೃತಿ ಇರಾನಿ ನಡುವಿನ ಕದನ ಕುತೂಹಲಕ್ಕೆ ಕಾರಣವಾಗಿದೆ.

#RaGaFromKarnataka ಕಾಂಗ್ರೆಸ್‌ ನಾಯಕರಿಂದ ಟ್ವಿಟರ್ ಅಭಿಯಾನ#RaGaFromKarnataka ಕಾಂಗ್ರೆಸ್‌ ನಾಯಕರಿಂದ ಟ್ವಿಟರ್ ಅಭಿಯಾನ

2014ರ ಚುನಾವಣೆಯಲ್ಲಿ ಸ್ಮೃತಿ ಇರಾನಿ ಮತ್ತು ರಾಹುಲ್ ಗಾಂಧಿ ಉತ್ತರ ಪ್ರದೇಶದ ಅಮೇಥಿ ಕ್ಷೇತ್ರದಲ್ಲಿ ಮುಖಾಮುಖಿಯಾಗಿದ್ದರು. ರಾಹುಲ್ ಗಾಂಧಿ 408651 ಮತಗಳನ್ನು ಪಡೆದಿದ್ದರು. ಸ್ಮೃತಿ ಇರಾನಿ 300748 ಮತಗಳನ್ನು ಪಡೆದು ಸೋಲು ಅನುಭವಿಸಿದ್ದರು...

ರಾಹುಲ್ ಗಾಂಧಿ ದಕ್ಷಿಣದಿಂದ ಸ್ಪರ್ಧೆ? ಮೊದಲ ಆಯ್ಕೆ ಕರ್ನಾಟಕರಾಹುಲ್ ಗಾಂಧಿ ದಕ್ಷಿಣದಿಂದ ಸ್ಪರ್ಧೆ? ಮೊದಲ ಆಯ್ಕೆ ಕರ್ನಾಟಕ

ಸ್ಮೃತಿ ಇರಾನಿ ಟ್ವೀಟ್‌

#BhaagRahulBhaag ಎಂಬ ಹ್ಯಾಷ್ ಟ್ಯಾಗ್ ಬಳಸಿ ಕೇಂದ್ರ ಸಚಿವೆ ಸ್ಮೃತಿ ಇರಾನಿ ಟ್ವೀಟ್ ಮಾಡಿದ್ದು, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ವ್ಯಂಗ್ಯವಾಡಿದ್ದಾರೆ.

ರಾಹುಲ್ ಗಾಂಧಿಗೆ ಆಹ್ವಾನ

ಕಾಂಗ್ರೆಸ್ ವಕ್ತಾರ ರಣ್‍ದೀಪ್ ಸಿಂಗ್ ಸುರ್ಜೇವಾಲ ಅವರು ಒಂದು ಟ್ವೀಟ್ ಮಾಡಿದ್ದರು. ಕೇರಳ, ತಮಿಳುನಾಡು, ಕರ್ನಾಟಕದಿಂದ ಸ್ಪರ್ಧಿಸುವಂತೆ ರಾಹುಲ್ ಅವರನ್ನು ಒತ್ತಾಯಿಸಲಾಗುತ್ತಿದೆ. ಪಕ್ಷ ಈ ಕುರಿತು ನಿರ್ಧಾರ ಕೈಗೊಳ್ಳಲಿದೆ ಎಂದು ಹೇಳಿದ್ದರು. ಈ ಟ್ವೀಟ್ ಬಳಿಕ ಸ್ಮೃತಿ ಇರಾನಿ ರಾಹುಲ್ ಗಾಂಧಿ ಅವರನ್ನು ವ್ಯಂಗ್ಯವಾಡಿದ್ದಾರೆ.

ಕಾಂಗ್ರೆಸ್ ತಿರುಗೇಟು

ಸ್ಮೃತಿ ಇರಾನಿ ಟ್ವೀಟ್‌ಗೆ ಕಾಂಗ್ರೆಸ್ ವಕ್ತಾರ ರಣ್‍ದೀಪ್ ಸಿಂಗ್ ಸುರ್ಜೇವಾಲ ಕವಿತೆ ಮೂಲಕ ತಿರುಗೇಟು ಕೊಟ್ಟಿದ್ದಾರೆ. ಚಾಂದಿನಿ ಚೌಕ್, ಅಮೇಥಿಯಲ್ಲಿ ಸೋತು ರಾಜ್ಯಸಭೆ ದಾರಿ ಗಟ್ಟಿ ಮಾಡಿಕೊಂಡಿರಿ. ಈ ಬಾರಿ ಅಮೇಥಿಯಲ್ಲಿ ಸೋತು ಹ್ಯಾಟ್ರಿಕ್ ಬಾರಿಸುವಿರೇ? ಎಂದು ಲೇವಡಿ ಮಾಡಿದ್ದಾರೆ.

ಕೇರಳದಿಂದ ಆಹ್ವಾನ

ಕೇರಳದಿಂದ ಆಹ್ವಾನ

ಕೇರಳದ ಮಾಜಿ ಮುಖ್ಯಮಂತ್ರಿ ಓಮನ್ ಚಾಂಡಿ ಅವರು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಕೇರಳದ ವಯನಾಡು ಲೋಕಸಭಾ ಕ್ಷೇತ್ರದಿಂದ 2019ರ ಲೋಕಸಭಾ ಚುನಾವಣೆಗೆ ಸ್ಪರ್ಧಿಸುವಂತೆ ಆಹ್ವಾನ ನೀಡಿದ್ದರು.

ಕರ್ನಾಟಕದಿಂದ ಆಹ್ವಾನ

ಕರ್ನಾಟಕದಿಂದ ಆಹ್ವಾನ

#RaGaFromKarnataka ಎಂದು ಕರ್ನಾಟಕದ ಕಾಂಗ್ರೆಸ್ ನಾಯಕರು ಟ್ವೀಟ್ ಮಾಡಿ ರಾಹುಲ್ ಗಾಂಧಿ ಅವರನ್ನು ಕರ್ನಾಟಕದಿಂದ ಸ್ಪರ್ಧಿಸುವಂತೆ ಆಹ್ವಾನ ನೀಡಿದ್ದರು. ಮೂರು ಕ್ಷೇತ್ರಗಳನ್ನು ಅವರಿಗಾಗಿ ಆಯ್ಕೆ ಮಾಡಿದ್ದರು.

English summary
Smriti Irani mocked Rahul Gandhi with #BhaagRahulBhaag after reports that people from various southern states have been urging AICC president Rahul Gandhi to contest from their states. Smriti Irani and Rahul Gandhi in fray from Amethi lok sabha seat.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X