ರಾಹುಲ್ ಗಾಂಧಿ ಕ್ಷೇತ್ರಕ್ಕೆ ಭಾರೀ ಕೊಡುಗೆ ನೀಡಿದ ಸ್ಮೃತಿ ಇರಾನಿ!

ಅಮೇಥಿ, ಆಗಸ್ಟ್ 31: ಉತ್ತರ ಪ್ರದೇಶದ ಅಮೇಥಿಯ ಪಿಂಡಾರಾ ಠಾಕೂರ್ ಎಂಬ ಹಳ್ಳಿಯನ್ನು ಸಂಪೂರ್ಣ ಡಿಜಿಟಲೀಕರಣ ಮಾಡಲು ಕೇಂದ್ರ ಜವಳಿ ಖಾತೆ ಸಚಿವೆ ಸ್ಮೃತಿ ಇರಾನಿ ನಿರ್ಧರಿಸಿದ್ದಾರೆ. ಒಂದು ಮೌಸ್ ಕ್ಲಿಕ್ ನಲ್ಲಿ 200 ಕ್ಕೂ ಹೆಚ್ಚು ಸರ್ಕಾರಿ ಯೋಜನೆಗಳ ಲಾಭ ಪಡೆಯಬಹುದಾದ ಈ ಪರಿಕಲ್ಪನೆ ಸೆಪ್ಟೆಂಬರ್ ತಿಂಗಳಿನಿಂದ ಜಾರಿಗೆ ಬರಲಿದೆ.

ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರ ಲೋಕಸಭಾ ಕ್ಷೇತ್ರವಾಗಿರುವ ಅಮೇಥಿಯಲ್ಲಿ 2014 ರ ಲೋಕಸಭಾ ಚುನಾವಣೆಯಲ್ಲಿ ಸ್ಮೃತಿ ಇರಾನಿ ಅವರು ಬಿಜೆಪಿ ಅಭ್ಯರ್ಥಿಯಾಗಿ ನಿಂತು ಸೋತಿದ್ದರು.

ಪಿಂಡಾರಾ ಠಾಕೂರ್ ಹಳ್ಳಿಯಲ್ಲಿ ವೈಫೈ ಸೌಲಭ್ಯವನ್ನೂ ಕಲ್ಪಿಸಲಾಗುತ್ತಿದೆ. ಜೊತೆಗೆ ಜನರು 15 ದಿನಗಳವರೆಗೆ 2 ಜಿಬಿ ಡೆಟಾವನ್ನು ಉಚಿತವಾಗಿ ಪಡೆಯಬಹುದಾಗಿದೆ.

Smriti Irani to make a village in Amethi go digital from September

ಅಮೇಥಿಯ ಮುಖ್ಯ ಅಂಚೆ ಕಚೇರಿಯಲ್ಲಿ 'ಡಿಜಿಟಲ್ ಇಂಡಿಯಾ ಬ್ಯಾಂಕಿಂಗ್ ಸರ್ವಿಸ್' ಅನ್ನು ಸಹ ಸ್ಮೃತಿ ಇರಾನಿ ಉದ್ಘಾಟಿಸಲಿದ್ದಅರೆ. ಈ ಮೂಲಕ ಜನರನ್ನು ಡಿಜಿಟಲ್ ಲೋಕಕ್ಕೆ ತೆರೆದುಕೊಳ್ಳಲು ಪ್ರೋತ್ಸಾಹಿಸುವುದು ಸರ್ಕಾರದ ಗುರಿಯಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+