Breaking: ಬಾಂಗ್ಲಾದೇಶ ಗಡಿಯಲ್ಲಿ ಬಿಎಸ್ಎಫ್ ಸಿಬ್ಬಂದಿ ಮೇಲೆ ಫೈರಿಂಗ್
ನವದೆಹಲಿ, ಆಗಸ್ಟ್ 8: ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯ ಬಾಂಗ್ಲಾದೇಶ ಗಡಿಯ ಬಳಿ ಸೋಮವಾರ ಸಂಜೆ ಕಳ್ಳಸಾಗಣೆದಾರರು ಬಿಎಸ್‌ಎಫ್ ಯೋಧನ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸುಳಿವಿನ ಮೇರೆಗೆ ಕಾರ್ಯಾಚರಣೆ ನಡೆಸಿದ ಬಿಎಸ್‌ಎಫ್ ತಂಡವು ಚಾಪ್ರಾ ಪ್ರದೇಶದ ಗಡಿಯಲ್ಲಿ ಫೆನ್ಸೆಡಿಲ್ ಕೆಮ್ಮು ಸಿರಪ್‌ಗಳನ್ನು ಕಳ್ಳಸಾಗಣೆ ಮಾಡಲು ಪ್ರಯತ್ನಿಸುತ್ತಿದ್ದ ಕಳ್ಳಸಾಗಣೆದಾರರ ಗುಂಪನ್ನು ತಡೆದಿದೆ. ಈ ವೇಳೆ ಯೋಧರಿಂದ ತಪ್ಪಿಸಿಕೊಳ್ಳುವುದಕ್ಕೆ ಕಳ್ಳಸಾಗಣೆದಾರರು ಗುಂಡಿನ ದಾಳಿ ನಡೆಸಿದ್ದಾರೆ ಎಂದು ಅವರು ಹೇಳಿದ್ದಾರೆ.
"ಭದ್ರತಾ ಸಿಬ್ಬಂದಿ ಅನ್ನು ತಡೆಯಲು ಪ್ರಯತ್ನಿಸಿದಾಗ, ಕಳ್ಳಸಾಗಣೆದಾರರು ಗುಂಡು ಹಾರಿಸಿದರು. ಈ ವೇಳೆ ಒಬ್ಬ ಸಿಬ್ಬಂದಿ ಗಾಯಗೊಂಡಿದ್ದಾರೆ. ಸ್ಥಳದಲ್ಲಿ ಕೆಲವು ಬುಲೆಟ್ ಅನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ" ಎಂದು ಬಿಎಸ್ಎಫ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಗಾಯಗೊಂಡ ಯೋಧ ಆಸ್ಪತ್ರೆಗೆ ದಾಖಲು: ಬಾಂಗ್ಲಾದೇಶ ಗಡಿ ಪ್ರದೇಶದಲ್ಲಿ ಕಳ್ಳಸಾಗಾಣೆದಾರರು ನಡೆಸಿದ ಗುಂಡಿನ ದಾಳಿಯಲ್ಲಿ ಗಡಿ ಭದ್ರತಾ ಸಿಬ್ಬಂದಿಯೊಬ್ಬರು ಗಾಯಗೊಂಡಿದ್ದಾರೆ. ಗಾಯಗೊಂಡ ಬಿಎಸ್ಎಫ್ ಸಿಬ್ಬಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಬಿಎಸ್ಎಫ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.












Click it and Unblock the Notifications