ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮಧ್ಯಾಹ್ನದ ಬಿಸಿಯೂಟದಲ್ಲಿ ಹಾವು: 30 ಮಕ್ಕಳು ಅಸ್ವಸ್ಥ, ಘಟನೆಗೆ ತೀವ್ರ ಆಕ್ರೋಶ

|
Google Oneindia Kannada News

ಕೋಲ್ಕತ್ತ, ಜನವರಿ 10: ಪಶ್ಚಿಮ ಬಂಗಾಳದ ಬಿರ್ಭೂಮ್ ಜಿಲ್ಲೆಯ ಶಾಲೆಯೊಂದರ ಮಧ್ಯಾಹ್ನದ ಬಿಸಿಯೂಟದಲ್ಲಿ ಹಾವು ಕಂಡುಬಂದಿದೆ. ಈ ವಿಷಕಾರಿ ಆಹಾರವನ್ನು ಸೇವಿಸಿದ ನಂತರ ಹಲವಾರು ಶಾಲಾ ಮಕ್ಕಳನ್ನು ಸೋಮವಾರ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜಿಲ್ಲೆಯ ಮಯೂರೇಶ್ವರ ಬ್ಲಾಕ್‌ನ ಪ್ರಾಥಮಿಕ ಶಾಲೆಯ ಸುಮಾರು 30 ವಿದ್ಯಾರ್ಥಿಗಳು ದಾಖಲಿಸಲಾಗಿದೆ. ಮಧ್ಯಾಹ್ನದ ಊಟದಲ್ಲಿ ಬಡಿಸಿದ ಆಹಾರವನ್ನು ಸೇವಿಸಿದ ನಂತರ ಅಸ್ವಸ್ಥರಾಗಿದ್ದಾರೆ ಎಂದು ಅವರು ಹೇಳಿದ್ದಾರೆ.

ಭೋಜನ ಸಿದ್ಧಪಡಿಸಿದ್ದ ಶಾಲೆಯ ಸಿಬ್ಬಂದಿಯೊಬ್ಬರು, ಬೇಳೆ ತುಂಬಿದ ಕಂಟೈನರ್ ಒಂದರಲ್ಲಿ ಹಾವು ಕಂಡುಬಂದಿದೆ ಎಂದು ಹೇಳಿಕೊಂಡಿದ್ದಾರೆ.

Snake allegedly found in midday meal, several children fall ill in Bengals Birbhum

'ಮಕ್ಕಳು ವಾಂತಿ ಮಾಡಲು ಪ್ರಾರಂಭಿಸಿದ್ದರಿಂದ ನಾವು ಅವರನ್ನು ರಾಂಪುರಹತ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಸಾಗಿಸಬೇಕಾಯಿತು' ಎಂದು ಅವರು ತಿಳಿಸಿದ್ದಾರೆ.

ಮಧ್ಯಾಹ್ನದ ಊಟ ತಿಂದು ಮಕ್ಕಳು ಅಸ್ವಸ್ಥರಾಗುತ್ತಿರುವ ಬಗ್ಗೆ ಹಲವಾರು ಗ್ರಾಮಸ್ಥರಿಂದ ದೂರುಗಳು ಬಂದಿವೆ ಎಂದು ಬ್ಲಾಕ್ ಅಭಿವೃದ್ಧಿ ಅಧಿಕಾರಿ ದೀಪಾಂಜನ್ ಜನಾ ಸುದ್ದಿಗಾರರಿಗೆ ಮಾಹಿತಿ ನೀಡಿದ್ದಾರೆ.

ಜನವರಿ 10 ರಂದು ಭೇಟಿ ನೀಡಲಿರುವ ಪ್ರಾಥಮಿಕ ಶಾಲೆಗಳ ಜಿಲ್ಲಾ ನಿರೀಕ್ಷಕರಿಗೆ ತಿಳಿಸಿದ್ದೇನೆ ಎಂದು ಜನರಿಗೆ ಹೇಳಿದ್ದಾರೆ.

Snake allegedly found in midday meal, several children fall ill in Bengals Birbhum

ಒಬ್ಬರನ್ನು ಹೊರತುಪಡಿಸಿ ಎಲ್ಲಾ ಮಕ್ಕಳನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ, ಅವರು ಅಪಾಯದಿಂದ ಪಾರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪಾಲಕರು ಶಾಲೆಯ ಮುಖ್ಯೋಪಾಧ್ಯಾಯರನ್ನು ಘೇರಾವ್ ಮಾಡಿ ಅವರ ದ್ವಿಚಕ್ರ ವಾಹನಕ್ಕೆ ಹಾನಿ ಮಾಡಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಜಿಲ್ಲಾಢಳಿತ ಘಟನೆಗೆ ಕಾರಣರಾದವರ ತನಿಖೆಗೆ ಆದೇಶಿಸಿದೆ. ಇದೇ ವೇಳೆ, ಘಟನೆಗೆ ಸಂಬಂಧಿಸಿದಂತೆ ಪೋಷಕರು ಹಾಗೂ ಜನರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯದಲ್ಲಿ ಬಿಸಿಯೂಟ ಸೇವಿಸಿದ ನಂತರ ಮಕ್ಕಳು ಅಶ್ವಸ್ಥರಾದ ಘಟನೆ ಹಲವಾರು ನಡೆದಿವೆ. ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದ, ಶಿಕ್ಷಣ ಇಲಾಖೆ ಘಟನೆಗೆ ಸಂಬಂಧಿಸಿದವರನ್ನು ತನಿಖೆಗೆ ಒಳಪಡಿಸಿತ್ತು.

ಸರ್ಕಾರವು ಶಾಲಾ ಮಕ್ಕಳಿಗೆ ಉಚಿತವಾಗಿ ಬಿಸಿಯೂಟ ನೀಡುತ್ತದೆ. ಈ ಯೋಜನೆಯೂ ದೇಶದ ಬಹುತೇಕ ರಾಜ್ಯಗಳಲ್ಲಿ ಜಾರಿಯಲ್ಲಿದೆ.

English summary
Several school children were hospitalised Monday in Bengal’s Birbhum district after consuming food in which a snake was allegedly found, officials said,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X