ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಗುಜರಾತ್: ತನ್ನ ಮಗಳಿಗೆ ಸಂಬಂಧಿಸಿದ್ದ ಅಶ್ಲೀಲ ವಿಡಿಯೋ ವಿರೋಧಿಸಿಕ್ಕಾಗಿ ಯೋಧನ ಹತ್ಯೆ

|
Google Oneindia Kannada News

ನವದೆಹಲಿ, ಡಿಸೆಂಬರ್‌ 26: ತನ್ನ ಮಗಳ ಅಶ್ಲೀಲ ವೀಡಿಯೋವನ್ನು ಪ್ರಸಾರ ಮಾಡಿದ್ದಕ್ಕೆ ವಿರೋಧ ವ್ಯಕ್ತಪಡಿಸಿದ್ದ ಗಡಿ ಭದ್ರತಾ ಪಡೆಯ ಯೋಧನನ್ನು ಹತ್ಯೆ ಮಾಡಲಾಗಿದೆ. ಗುಜರಾತ್‌ನ ನಾಡಿಯಾಡ್‌ನಲ್ಲಿ ಯೋಧನನ್ನು ಹೊಡೆದು ಕೊಂದ ಘಟನೆ ನಡೆದಿದೆ. ಈ ಘಟನೆಗೆ ಸಂಬಂಧಿದಂತೆ ಪೊಲೀಸ್ ಕೇಸು ದಾಖಲಾಗಿದೆ.

ಶನಿವಾರ ಚಕ್ಲಾಸಿ ಗ್ರಾಮದಲ್ಲಿ ವಿಡಿಯೋವನ್ನು ಆನ್‌ಲೈನ್‌ನಲ್ಲಿ ಪೋಸ್ಟ್ ಮಾಡಿದ 15 ವರ್ಷದ ಯುವಕನ ಮನೆಗೆ ಯೋಧ ಹೋಗಿದ್ದ ಎಂದು ಮೂಲಗಳು ತಿಳಿಸಿವೆ. ಅಲ್ಲಿ ಮನೆಯವರು ಆತನ ಮೇಲೆ ಹಲ್ಲೆ ನಡೆಸಿದ್ದಾರೆ.

ವಿಡಿಯೋ ಮಾಡಿದ್ದ ಆರೋಪಿ ಬಾಲಕಿ ಓದಿದ ಶಾಲೆಯ ವಿದ್ಯಾರ್ಥಿಯಾಗಿದ್ದು, ಇಬ್ಬರೂ ಸಂಬಂಧ ಹೊಂದಿದ್ದರು ಎಂದು ಮೂಲಗಳು ತಿಳಿಸಿವೆ.

Soldier Lynched In Gujarat For Protesting Against Daughters Obscene Video

ಆತ(ಆರೋಪಿ) ಬಾಲಕಿಯ ಅಶ್ಲೀಲ ವಿಡಿಯೋವನ್ನು ಆನ್‌ಲೈನ್‌ನಲ್ಲಿ ಪೋಸ್ಟ್ ಮಾಡಿದ್ದ. ಆ ನಂತರ ಬಿಎಸ್‌ಎಫ್ ಜವಾನ ತನ್ನ ಕುಟುಂಬದೊಂದಿಗೆ ಹುಡುಗನ ಕುಟುಂಬದೊಂದಿಗೆ ಮಾತನಾಡಲು ಹೋಗಿದ್ದ ಎಂದು ಗಡಿ ಭದ್ರತಾ ಪಡೆ ಮೂಲಗಳು ಖಚಿತಪಡಿಸಿವೆ.

ಪೊಲೀಸರು ದಾಖಲಿಸಿದ ಎಫ್‌ಐಆರ್‌ನಲ್ಲಿ ಶನಿವಾರ ರಾತ್ರಿ ಯೋಧನು ತನ್ನ ಪತ್ನಿ, ಇಬ್ಬರು ಪುತ್ರರು ಮತ್ತು ಸೋದರಳಿಯನೊಂದಿಗೆ ಯುವಕನ ಮನೆಗೆ ಹೋಗಿದ್ದರು.

Soldier Lynched In Gujarat For Protesting Against Daughters Obscene Video

ಆರೋಪಿಯ ಕುಟುಂಬದ ಸದಸ್ಯರು ಅವರನ್ನು ನಿಂದಿಸಲು ಪ್ರಾರಂಭಿಸಿದರು. ಯೋಧ ಅದನ್ನು ವಿರೋಧಿಸಿದಾಗ, ಗುಂಪು ಆತನ ಕುಟುಂಬದ ಮೇಲೆ ಹಲ್ಲೆ ನಡೆಸಿತು. ಆ ನಂತರ ಯೋಧ ಸಾವನ್ನಪ್ಪಿದನೆಂದು ತಿಳಿದುಬಂದಿದೆ.

ಪ್ರಧಾನಿ ಮೋದಿ ಅವರ ತವರು ರಾಜ್ಯದಲ್ಲಿ ಇಂತಹ ಘಟನೆ ನಡೆದಿರುವುದಕ್ಕೆ ವ್ಯಾಪಕ ಟೀಕೆಗಳು ವ್ಯಕ್ತವಾಗಿವೆ. ಬಿಎಸ್‌ಎಫ್‌ ಯೋಧರಿಗೆ ಭದ್ರತೆ ಇಲ್ಲದಿರುವಾಗ ಇನ್ನು ಸಾಮಾನ್ಯ ಜನರಿಗೆ ಭದ್ರತೆ ಎಲ್ಲಿಂದ ಸಿಗುತ್ತದೆಂದು ಕೆಲವರು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್‌ ಮಾಡಿದ್ದಾರೆ. ಈ ಪ್ರಕರಣವನ್ನು ಗುಜರಾತ್‌ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದು ಮೂಲಗಳು ತಿಳಿಸಿವೆ.

English summary
A Border Security Force soldier has been killed for protesting the airing of his daughter's obscene video. An incident took place in Gujarat's Nadiad where a soldier was beaten to death. A police case has been registered in connection with this incident,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X