G20 Summit 2023: ರಾಷ್ಟ್ರಪತಿಗಳ ಜಿ20 ಔತಣಕೂಟ: ಯಾರೆಲ್ಲಾ ಗೈರು?

ನವದೆಹಲಿ, ಸೆಪ್ಟೆಂಬರ್‌ 09: ಭಾರತದ ಅಧ್ಯಕ್ಷತೆಯಲ್ಲಿ ಮೊದಲ ಬಾರಿಗೆ ಜಿ20 ಶೃಂಗಸಭೆ ನಡೆಯುತ್ತಿರುವ ಹಿನ್ನಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಶನಿವಾರ (ಸೆಪ್ಟೆಂಬರ್‌ 09) ರಾತ್ರಿ ಔತಣಕೂಟ ಆಯೋಜಿಸಿದ್ದು, ದೇಶದ ಎಲ್ಲಾ ಮುಖ್ಯಮಂತ್ರಿಗಳಿಗೆ ಹಾಗೂ ಎಲ್ಲಾ ನಾಯಕರಿಗೂ ಸಹ ಆಹ್ವಾನ ನೀಡಲಾಗಿದೆ ಎಂದು ತಿಳಿದು ಬಂದಿದ್ದು, ಹಲವು ನಾಯಕರು ಈ ಔತಣಕೂಟಕ್ಕೆ ಗೈರಾಗಲಿದ್ದಾರೆ.

ಹೌದು, ದ್ರೌಪದಿ ಮುರ್ಮು ಅವರು ಕರೆದಿರುವ ಔತಣಕೂಟಕ್ಕೆ ಮನಮೋಹನ್ ಸಿಂಗ್ ಮತ್ತು ದೇವೇಗೌಡ ಇಬ್ಬರೂ ಆರೋಗ್ಯದ ಕಾರಣಗಳಿಂದ ರಾಷ್ಟ್ರಪತಿಗಳ ಔತಣಕೂಟದಲ್ಲಿ ಭಾಗವಹಿಸಲು ಸಾಧ್ಯವಾಗದಿರುವ ಬಗ್ಗೆ ಕೇಂದ್ರ ಸರ್ಕಾರಕ್ಕೆ ತಿಳಿಸಿದೆ. ಇನ್ನೂ ಸಾಂವಿಧಾನಿಕ ಸ್ಥಾನ ಹೊಂದಿರುವ ವಿರೋಧ ಪಕ್ಷದ ನಾಯಕ ಹಾಗೂ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಔತಣಕೂಟಕ್ಕೆ ಆಹ್ವಾನಿಸಿಲ್ಲ ಎಂದು ಕಾಂಗ್ರೆಸ್ ಹೇಳಿದೆ. ಹೀಗಾಗಿ ಕಾಂಗ್ರೆಸ್ ಆಡಳಿತವಿರುವ ಕರ್ನಾಟಕ, ಛತ್ತೀಸ್‌ಗಢ ಮತ್ತು ರಾಜಸ್ಥಾನದ ಮುಖ್ಯಮಂತ್ರಿಗಳು ಜಿ20 ಔತಣಕೂಟಕ್ಕೆ ಹಾಜರಾಗುವ ಸಾಧ್ಯತೆ ಇಲ್ಲ ಎಂದು ಹೇಳಲಾಗಿದೆ. ಇನ್ನೂ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಹ ಈ ಔತಣಕೂಟದಲ್ಲಿ ಎಂದು ಅವರ ಆಪ್ತ ಮೂಲಗಳು ತಿಳಿಸಿವೆ.

Some Opposition CM Not To Be Present At President Murmu G20 Dinner On September 9

ಇನ್ನೂ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಕೂಡ ಔತಣಕೂಟದಲ್ಲಿ ಪಾಲ್ಗೊಳ್ಳಬಹುದು ಎಂಬ ವರದಿಗಳೂ ತಿಳಿಸಿವೆ. ಟಿಎಂಸಿ ಮುಖ್ಯಸ್ಥೆ ಮತ್ತು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಔತಣಕೂಟದಲ್ಲಿ ಭಾಗವಹಿಸುವುದಾಗಿ ಈಗಾಗಲೇ ಖಚಿತಪಡಿಸಿದ್ದಾರೆ. ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಕೂಡ ಜಿ20 ಔತಣಕೂಟದಲ್ಲಿ ಪಾಲ್ಗೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ.

ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ಅವರು ಸೆಪ್ಟೆಂಬರ್ 9 ರಂದು ರಾಷ್ಟ್ರಪತಿಯವರ ಔತಣಕೂಟದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಅವರ ಆಪ್ತರು ಖಚಿತಪಡಿಸಿದ್ದಾರೆ. ಇನ್ನೂ ಛತ್ತೀಸ್‌ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಮತ್ತು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ಭಾಗವಹಿಸುವ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+