ಹಿಮಾಚಲ ಪ್ರದೇಶ: ಕಾಂಗ್ರೆಸಿನಿಂದ 40 ತಾರಾ ಪ್ರಚಾರಕರ ಪಟ್ಟಿ ಬಿಡುಗಡೆ
ನವದೆಹಲಿ, ಅಕ್ಟೋಬರ್ 22: ನವೆಂಬರ್ ನಲ್ಲಿ ನಡೆಯಲಿರುವ ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ತನ್ನ ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ ಮಾಡಿದೆ.
ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ, ಉಪಾಧ್ಯಕ್ಷ ರಾಹುಲ್ ಗಾಂಧಿ, ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಸೇರಿ 40 ಕಾಂಗ್ರೆಸ್ ನಾಯಕರು ಸ್ಟಾರ್ ಕ್ಯಾಂಪೇನರ್ ಗಳ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.

ಪಂಜಾಬ್ ಮುಖ್ಯಮಂತ್ರಿ ಕ್ಯಾ. ಅಮರಿಂದರ್ ಸಿಂಗ್, ನವಜೋತ್ ಸಿಂಗ್ ಸಿದ್ಧು, ರಾಜ್ ಬಬ್ಬರ್, ಸಚಿನ್ ಪೈಲಟ್, ಜ್ಯೋತಿರಾದಿತ್ಯ ಸಿಂಧ್ಯ, ವೀರಭದ್ರ ಸಿಂಗ್, ಸುಶೀಲ್ ಕುಮಾರ್ ಶಿಂಧೆ, ಶೀಲಾ ದೀಕ್ಷಿತ್, ಹರೀಶ್ ರಾವತ್ ಸೇರಿದಂತೆ ಹಿರಿ ಕಿರಿ ನಾಯಕರು ತಾರಾ ಪ್ರಚಾರಕರಲ್ಲಿ ಸ್ಥಾನ ಪಡೆದಿದ್ದಾರೆ.
#HimachalElections: Congress releases list of star campaigners for upcoming Himachal Pradesh Assembly Elections pic.twitter.com/IfgqmyUTWF
— ANI (@ANI) October 23, 2017
ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಲೋಕಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ್ ಖರ್ಗೆ ಸೇರಿದಂತೆ ಕರ್ನಾಟಕ ಮೂಲದ ಒಬ್ಬರೂ ತಾರಾ ಪ್ರಚಾರಕರ ಪಟ್ಟಿಯಲ್ಲಿಲ್ಲ.












Click it and Unblock the Notifications