Sonia Gandhi: ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು
ನವದೆಹಲಿ: ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ ಅವರ ಆರೋಗ್ಯ ಹದಗೆಟ್ಟ ಕಾರಣ ಸರ್ ಗಂಗಾ ರಾಮ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ತಜ್ಞ ವೈದ್ಯರಿಂದ ಚಿಕಿತ್ಸೆ ನೀಡಲಾಗುತ್ತಿದೆ. 79 ವರ್ಷದ ಸೋನಿಯಾ ಗಾಂಧಿ ಆರೋಗ್ಯ ಸ್ಥಿರವಾಗಿದ್ದು, ವೈದ್ಯರು ನಿಗಾ ವಹಿಸಿದ್ದಾರೆ ಎಂದು ತಿಳಿದು ಬಂದಿದೆ.
ಸೋನಿಯಾ ಗಾಂಧಿ ಅವರಿಗೆ ಕೆಮ್ಮಿನ ಸಮಸ್ಯೆ ಇದೆ. ನಗರದಲ್ಲಿ ವಾಯು ಮಾಲಿನ್ಯ ಹೆಚ್ಚಿರುವುದರಿಂದ ನಿಯಮಿತ ತಪಾಸಣೆಗಾಗಿ ಆಸ್ಪತ್ರೆಗೆ ಬರುತ್ತಲೇ ಇರುತ್ತಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ. ಸೋನಿಯಾ ಗಾಂಧಿ ಅವರ ಆರೋಗ್ಯ ಸ್ಥಿರವಾಗಿದ್ದು, ಯಾರೂ ಆತಂಕ ಪಡುವ ಅಗತ್ಯವಿಲ್ಲ. ಸೋನಿಯಾ ಅವರಿಗೆ ದೀರ್ಘಕಾಲದ ಕೆಮ್ಮಿನ ಸಮಸ್ಯೆ ಇದೆ ಮತ್ತು ಅವರು ತಪಾಸಣೆಗಾಗಿ ಬರುತ್ತಿರುತ್ತಾರೆ ಎಂದು ವರದಿಯಾಗಿದೆ.

ಸೋನಿಯಾ ಗಾಂಧಿ ಅವರನ್ನ ಸೋಮವಾರ ಸಂಜೆ ಆಸ್ಪತ್ರೆಗೆ ದಾಖಲಿಸಲಾಯಿತು. ದಾಖಲಾತಿಯನ್ನು ಸಾಮಾನ್ಯ ಎಂದು ವಿವರಿಸಿದ ಆಸ್ಪತ್ರೆಯ ಮೂಲಗಳು ಪಿಟಿಐಗೆ ತಿಳಿಸಿದ್ದು, ಗಾಂಧಿಯವರು ದೀರ್ಘಕಾಲದ ಕೆಮ್ಮಿನ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಮತ್ತು ನಗರದಲ್ಲಿ ಹೆಚ್ಚಿನ ವಾಯುಮಾಲಿನ್ಯದ ಅವಧಿಯಲ್ಲಿ ತಪಾಸಣೆಗಾಗಿ ನಿಯಮಿತವಾಗಿ ಆಸ್ಪತ್ರೆಗೆ ಭೇಟಿ ನೀಡುತ್ತಾರೆ. ಇನ್ನೂ ಕಳೆದ ಡಿಸೆಂಬರ್ 2025ರಲ್ಲಿ ಅವರು 79ನೇ ವರ್ಷಕ್ಕೆ ಕಾಲಿಟ್ಟಿದ್ದರು.
ಸೋನಿಯಾ ಗಾಂಧಿ ವಯೋಸಹಜ ಕಾಯಿಲೆ ಮತ್ತು ದೆಹಲಿಯಲ್ಲಿನ ವಾಯುಮಾಲಿನ್ಯದಿಂದಾಗಿ ಉಸಿರಾಟದ ಕಿರಿಕಿರಿ ತಪ್ಪಿಸಲು ವೈದ್ಯಕೀಯ ತಂಡ ನಿಗಾ ವಹಿಸಿದೆ. ಸದ್ಯ ಆತಂಕಪಡುವಂತದ್ದೇನಿಲ್ಲ. ಸೋನಿಯಾ ಗಾಂಧಿ ಅವರು ನಿತ್ಯ ಆಸ್ಪತ್ರೆಗೆ ಬಂದು ತಪಾಸಣೆಗೆ ಒಳಗಾಗುತ್ತಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ಸ್ಪಷ್ಟಪಡಿಸಿವೆ.
ಸೋನಿಯಾ ಗಾಂಧಿ ಅವರು ಕೆಲ ದಿನಗಳ ಹಿಂದೆಯಷ್ಟೇ ಹೊಟ್ಟೆಗೆ ಸಂಬಂಧಿಸಿದ ಅನಾರೋಗ್ಯದಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಅಲ್ಲದೇ ಚೇತರಿಸಿಕೊಂಡ ಬಳಿಕ ಡಿಸ್ಚಾರ್ಜ್ ಆಗಿದ್ದರು. ಇದೀಗ ಮತ್ತೆ ಅನಾರೋಗ್ಯದ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇನ್ನೂ, ಸೋನಿಯಾ ಗಾಂಧಿ ಅವರು ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದು, ಅವರು ಬೇಗ ಚೇತರಿಸಿಕೊಳ್ಳಲಿ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಪ್ರಾರ್ಥಿಸಿದ್ದಾರೆ.
ಅನಾರೋಗ್ಯದ ಕಾರಣಕ್ಕೆ ಸೋನಿಯಾ ಗಾಂಧಿ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನುವುದರ ಬಗ್ಗೆ ಅಧಿಕೃತ ಮಾಹಿತಿಯಿಲ್ಲ. ನನಗೂ ಇದರ ಬಗ್ಗೆ ಮಾಹಿತಿ ನೀಡಿದರು. ಅವರು ಶೀಘ್ರ ಗುಣಮುಖರಾಗಲಿ ಎಂದು ನಾವೆಲ್ಲರೂ ಪ್ರಾರ್ಥನೆ ಮಾಡುತ್ತೇವೆ. ದೀರ್ಘಕಾಲ ಆರೋಗ್ಯಯುತವಾಗಿರಲಿ. ಅವರ ಅಮೂಲ್ಯ ಸಲಹೆಗಳು ಈ ದೇಶ ಹಾಗೂ ಪಕ್ಷಕ್ಕೆ ಬೇಕಾಗಿದೆ. ಪಕ್ಷದ ಸಂಕಷ್ಟದ ಹೊತ್ತಿನಲ್ಲಿ ಅತ್ಯಮೂಲ್ಯ ಸಲಹೆ ನೀಡಿದವರು ಅವರು ಎಂದು ಡಿ ಕೆ ಶಿವಕುಮಾರ್ ಹೇಳಿದರು.












Click it and Unblock the Notifications