Sonia Gandhi: ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು

Sonia Gandhi: ಕಾಂಗ್ರೆಸ್ ನಾಯಕಿ ಹಾಗೂ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಅನಾರೋಗ್ಯ ಹಿನ್ನೆಲೆ ದಾಖಲಿಸಲಾಗಿದೆ. ನವದೆಹಲಿಯ ಸರ್‌ ಗಂಗಾ ರಾಮ್ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದುಬಂದಿದೆ.

ಇನ್ನು ಮಾಹಿತಿ ಪ್ರಕಾರ, ಅವರು ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದು, ಇಂದು (ಫೆಬ್ರವರಿ 21) ಶುಕ್ರವಾರ ಡಿಸ್ಚಾರ್ಜ್ ಆಗುವ ಸಾಧ್ಯತೆಯಿದೆ ಎಂದು ವೈದ್ಯರ ಮೂಲಗಳಿಂದ ಮಾಹಿತಿ ತಿಳಿದುಬಂದಿದೆ. 78 ವರ್ಷದ ಸೋನಿಯಾ ಗಾಂಧಿ ಅವರನ್ನು ಇಂದು ಬೆಳಗ್ಗೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರು ಆಸ್ಪತ್ರೆಗೆ ದಾಖಲಾಗಿರುವುದರ ಬಗ್ಗೆ ನಿಖರವಾದ ಮಾಹಿತಿ ಇದುವರೆಗೂ ಬಹಿರಂಗವಾಗಿಲ್ಲ.

Sonia Gandhi admitted to Hospital

ಆದರೆ, ಅವರು ವೈದ್ಯರ ತಂಡದ ನಿಗಾದಲ್ಲಿ ಇರಿಸಲಾಗಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. ಕಳೆದ ವಾರ ಫೆಬ್ರವರಿ 13ರಂದು ಸಂಸತ್ತಿನ ಬಜೆಟ್ ಅಧಿವೇಶನದ ವೇಳೆ ಸೋನಿಯಾ ಗಾಂಧಿ ಅವರು ರಾಜ್ಯಸಭೆಯಲ್ಲಿ ಕಾಣಿಸಿಕೊಂಡಿದ್ದೇ ಕೊನೆಯದಾಗಿತ್ತು ಎನ್ನಲಾಗುತ್ತಿದೆ.

ಸೋನಿಯಾ ಗಾಂಧಿ ಅವರು ಕಳೆದ ವಾರದ ವರೆಗೂ ಅಧಿವೇಶನದಲ್ಲಿ ಪಾಲ್ಗೊಂಡು ಸಮೀಕ್ಷೆ ವಿಳಂಬದ ಕುರಿತು ಧ್ವನಿ ಎತ್ತಿದ್ದರು. ಅಲ್ಲದೆ, ಭಾರತದ ಜನಸಂಖ್ಯೆಗೆ ಅನುಗುಣವಾಗಿ ಆಹಾರ ಭದ್ರತೆ ನೀಡುವಲ್ಲಿ ನ್ಯಾಷನಲ್ ಫುಡ್ ಸೆಕ್ಯುರಿಟಿ ಆಕ್ಟ್‌ನ ಪ್ರಾಮುಖ್ಯತೆ, ದೇಶದ 140 ಕೋಟಿ ಜನಸಂಖ್ಯೆಗೆ ಆಹಾರ ಲಭ್ಯತೆ ಬಗ್ಗೆ ಅವರು ಮಾತನಾಡಿದ್ದರು.

ಇನ್ನು ಈ ಕಾಯ್ದೆಯಿಂದ ಮಹಾಮಾರಿ ಕೋವಿಡ್ ಸಮಯದಲ್ಲೂ ತುಂಬಾ ಪ್ರಯಾಜನಕಾರಿ ಆಗಿದೆ. ಇದನ್ನು ಯುಪಿಎ ಸರ್ಕಾರ 2013ರಲ್ಲಿ ಜಾರಿಗೆ ತಂದಿತ್ತು ಎಂದು ಹೇಳಿ ಗಮನ ಸೆಳೆದಿದ್ದರು. ಬಳಿಕ ಅವರು ರಾಜ್ಯಸಭೆಯಲ್ಲಿ ಕಾಣಿಸಿಕೊಂಡಿರಲಿಲ್ಲ. ಇದೀಗ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಮಾಹಿತಿ ಪ್ರಕಾರ, ಸೋನಿಯಾ ಗಾಂಧಿ ಅವರಿಗೆ ಹೊಟ್ಟೆ ಸೋಂಕು ಇದ್ದು, ನಿಯಮಿತ ತಪಾಸಣೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೈದ್ಯರು ತಂಡದ ಮೇಲ್ವಿಚಾರಣೆಯಲ್ಲಿ ಅವರಿಗೆ ಆರೋಗ್ಯ ತಪಾಸಣೆ ನಡೆಸಿ ಚಿಕಿತ್ಸೆ ನೀಡಿದ್ದು, ಇದೀಗ ಅವರ ಆರೋಗ್ಯ ಸುಧಾರಿಸಿದ್ದು, ಆಸ್ಪತ್ರೆಯಿಂದ ದಿಸ್ಚಾರ್ಜ್‌ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಅನಾರೋಗ್ಯದ ಹಿನ್ನೆಲೆ ಸೋನಿಯಾ ಗಾಂಧಿ ಅವರು ಡಿಸೆಂಬರ್ 2024ರಲ್ಲಿ ಕರ್ನಾಟಕದ ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಗೆ ಹಾಜರಾಗಿರಲಿಲ್ಲ. ಸೆಪ್ಟೆಂಬರ್ 2024ರಲ್ಲಿ, ಜ್ವರ ಹಿನ್ನೆಲೆ ಸೋನಿಯಾ ಗಾಂಧಿ ಅವರನ್ನು ಸರ್ ಗಂಗಾ ರಾಮ್ ಆಸ್ಪತ್ರೆಗೆ ದಾಖಲಿಸಲಾಯಿತು. ಮಾರ್ಚ್ 2024ರಲ್ಲಿಯೂ ಸಹ ಅನಾರೋಗ್ಯದ ಹಿನ್ನೆಲೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆಗ ಒಂದು ದಿನದ ನಂತರ ಸಂಪೂರ್ಣವಾಗಿ ಗುಣಮುಖರಾಗಿ ಡಿಸ್ಚಾರ್ಜ್‌ ಆಗಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+