ರಾಜಕೀಯ ನಿವೃತ್ತಿ ಘೋಷಿಸಿದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ
Recommended Video

ನವದೆಹಲಿ, ಡಿಸೆಂಬರ್ 15: ದಾಖಲೆಯ ಅವಧಿಗೆ ಐತಿಹಾಸಿಕ ಕಾಂಗ್ರೆಸ್ ಪಕ್ಷವನ್ನು ಮುನ್ನಡೆಸಿದ್ದ ಸೋನಿಯಾ ಗಾಂಧಿ ರಾಜಕೀಯ ನಿವೃತ್ತಿ ಘೋಷಿಸುವ ಸುಳಿವು ನೀಡಿದ್ದಾರೆ.
"ನನ್ನ ಪಾತ್ರ ಈಗ ನಿವೃತ್ತಿಯಾಗುವುದು," ಎಂದು ಸೋನಿಯಾ ಗಾಂಧಿ ಪ್ರತಿಕ್ರಿಯೆ ನೀಡಿದ್ದು ನಿವೃತ್ತಿಯ ಸೂಚನೆಗಳನ್ನು ಬಿಟ್ಟುಕೊಟ್ಟಿದ್ದಾರೆ.
ನಾಳೆ ಅಂದರೆ ಡಿಸೆಂಬರ್ 16ರಂದು ಸೋನಿಯಾ ಗಾಂಧಿ ತಮ್ಮ ಪುತ್ರ ರಾಹುಲ್ ಗಾಂಧಿಗೆ ಕಾಂಗ್ರೆಸ್ ಪಕ್ಷದ ಅಧ್ಯಕ್ಷಗಿರಿ ಹಸ್ತಾಂತರಿಸಲಿದ್ದು ಇದಾದ ಬಳಿಕ ರಾಜಕೀಯ ನಿವೃತ್ತಿ ಪಡೆಯಲಿದ್ದಾರೆ ಎಂದುಕೊಳ್ಳಲಾಗಿದೆ.

1998ರ ಮಾರ್ಚ್ 14ರಂದು ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಸೋನಿಯಾ ಗಾಂಧಿ ನಾಳೆ ತಮ್ಮ ಅಧಿಕಾರ ಬಿಟ್ಟುಕೊಡಲಿದ್ದಾರೆ. 131 ವರ್ಷಗಳ ಕಾಂಗ್ರೆಸ್ ಪಕ್ಷದ ಇತಿಹಾಸದಲ್ಲಿ 19 ವರ್ಷಗಳ ದೀರ್ಘ ಕಾಲ ಅಧ್ಯಕ್ಷರಾಗಿದ್ದ ಸಾಧನೆ ಸೋನಿಯಾ ಗಾಂಧಿಯವರದ್ದು. ಬೇರೆ ಯಾರೂ ಇಷ್ಟು ದೀರ್ಘ ಅವಧಿಗೆ ಕಾಂಗ್ರೆಸ್ ಪಕ್ಷವನ್ನು ಮುನ್ನಡೆಸಿದ ಉದಾಹರಣೆ ಇಲ್ಲ.
ಸತತ ಅನಾರೋಗ್ಯಕ್ಕೆ ಒಳಗಾಗುತ್ತಿರುವ 71 ವರ್ಷದ ಸೋನಿಯಾ ಗಾಂಧಿ ತಮ್ಮ ಪುತ್ರನಿಗೆ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಹುದ್ದೆಯನ್ನು ಬಿಟ್ಟುಕೊಡಲಿದ್ದಾರೆ. ನಂತರ ಸಕ್ರಿಯ ರಾಜಕೀಯದಿಂದ ದೂರ ಸರಿಯಲಿದ್ದಾರೆ ಎಂಬುದನ್ನು ಅವರ ಮಾತುಗಳು ಧ್ವನಿಸುತ್ತಿವೆ.
ಆದರೆ ಸೋನಿಯಾ ಗಾಂಧಿ ರಾಜಕೀಯವಾಗಿ ನಿವೃತ್ತಿ ಹೊಂದುತ್ತಿಲ್ಲ ಎಂದು ಕಾಂಗ್ರೆಸ್ ವಕ್ತಾರ ರಣದೀಪ್ ಸುರ್ಜೇವಾಲಾ ಸ್ಪಷ್ಟಪಡಿಸಿದ್ದಾರೆ.
"ಸೋನಿಯಾ ಗಾಂಧಿ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಸ್ಥಾನದಿಂದ ನಿವೃತ್ತಿಯಾಗಲಿದ್ದಾರೆ ಅಷ್ಟೆ. ರಾಜಕೀಯದಿಂದ ನಿವೃತ್ತಿಯಾಗುತ್ತಿಲ್ಲ. ಆಕೆಯ ಆಶೀರ್ವಾದ, ಬುದ್ಧಿವಂತಿಕೆ ಮತ್ತು ಕಾಂಗ್ರೆಸ್ ಸಿದ್ಧಾಂತಕ್ಕೆ ತೋರುವ ಸಹಜವಾದ ಬದ್ಧತೆ ಯಾವಾಗಲೂ ನಮ್ಮ ಮಾರ್ಗದರ್ಶಿ ಬೆಳಕು," ಎಂದು ಸುರ್ಜೇವಾಲಾ ಹೇಳಿದ್ದಾರೆ.
Would sincerely request friends in the media to not rely upon innuendos.
— Randeep S Surjewala (@rssurjewala) December 15, 2017
Smt. Sonia Gandhi has retired as President of Indian National Congress and not from politics. Her blessings, wisdom and innate commitment to Congress ideology shall always be our guiding light.
-
Bagalkote: ಕೃಷ್ಣ ಮೇಲ್ದಂಡೆ ಯೋಜನೆ ವಿಳಂಬಕ್ಕೆ ಕಾಂಗ್ರೆಸ್ಸೇ ಕಾರಣ: ವಿವರ ಬಿಚ್ಚಿಟ್ಟ ಬಸವರಾಜ ಬೊಮ್ಮಾಯಿ -
ಕೇರಳದಲ್ಲಿ ಬದಲಾವಣೆಯ ಪರ್ವ ಆರಂಭ: ಅಭಿವೃದ್ಧಿಗಾಗಿ ಜನ ಕಾಂಗ್ರೆಸ್ ಕೈಹಿಡಿಯಲಿದ್ದಾರೆ-ಡಿ.ಕೆ.ಶಿವಕುಮಾರ್ ಭವಿಷ್ಯ -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು












Click it and Unblock the Notifications