ಸೋನಿಯಾ ಗಾಂಧಿಗೆ 77 ನೇ ವರ್ಷದ ಜನ್ಮದಿನ: ಮೋದಿ ಶುಭ ಹಾರೈಸಿದ್ದು ಹೀಗೆ
ನವದೆಹಲಿ, ಡಿಸೆಂಬರ್ 9: ಎಐಸಿಸಿ ಮಾಜಿ ಅಧ್ಯಕ್ಷೆ ಹಾಗೂ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರ 77ನೇ ಹುಟ್ಟುಹಬ್ಬದ ಸಂಭ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ಶನಿವಾರ ಶುಭಾಶಯ ಕೋರಿದ್ದಾರೆ.
सभी कांग्रेस कार्यकर्ताओं की ओर से कांग्रेस संसदीय दल की चेयरपर्सन व पूर्व कांग्रेस अध्यक्ष, श्रीमती सोनिया गाँधी जी को आज उनके जन्मदिन की हार्दिक शुभकामनाएँ।
— Mallikarjun Kharge (@kharge) December 9, 2023
देश व पार्टी के प्रति उनका साहसी व गरिमापूर्ण योगदान सभी के लिए प्रेरणादायी है।
उनके उत्तम स्वास्थ्य व दीर्घायु जीवन… pic.twitter.com/iWEfEw7Nvt
ಹೌದು, ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರ ಹುಟ್ಟು ಹಬ್ಬಕ್ಕೆ ಸಾಮಾಜಿಕ ಮಾಧ್ಯಮ ಟ್ವೀಟ್ ಮೂಲಕ ಶುಭಾಶಯ ಸಂದೇಶ ಪ್ರಕಟಿಸಿರುವ ಮೋದಿ, ಶ್ರೀಮತಿ ಸೋನಿಯಾ ಗಾಂಧಿ ಜಿ ಅವರಿಗೆ ಅವರ ಜನ್ಮದಿನದ ಶುಭಾಶಯಗಳು. ಸೋನಿಯಾ ಗಾಂಧಿ ಅವರಿಗೆ ಭಗವಂತ ದೀರ್ಘ ಮತ್ತು ಆರೋಗ್ಯಕರ ಜೀವನವನ್ನು ಆಶೀರ್ವದಿಸಲಿ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹಾರೈಸಿದ್ದಾರೆ.

ಇನ್ನೂ ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಟ್ವೀಟ್ ಮಾಡಿದ್ದು, ತುಳಿತಕ್ಕೊಳಗಾದವರ ಹಕ್ಕುಗಳಿಗಾಗಿ ಸೋನಿಯಾ ಗಾಂಧಿ ಅವಿರತವಾಗಿ ಶ್ರಮಿಸುತ್ತಿದ್ದಾರೆ. ಅಂಚಿನಲ್ಲಿರುವವರ ಹಕ್ಕುಗಳ ನಿರಂತರ ಪ್ರತಿಪಾದಕರಾದ ಅವರು ಧೈರ್ಯ ಮತ್ತು ನಿಸ್ವಾರ್ಥ ಸೇವೆಯೊಂದಿಗೆ ಪ್ರತಿಕೂಲ ಪರಿಸ್ಥಿತಿಯ ವಿರುದ್ಧ ಹೋರಾಡುತ್ತಿದ್ದಾರೆ. ನಾನು ಅವರಿಗೆ ದೀರ್ಘ ಮತ್ತು ಆರೋಗ್ಯಕರ ಜೀವನ ಸಿಗಲಿ ಎಂದು ಬಯಸುತ್ತೇನೆ ಎಂದು ಮಲ್ಲಿಕಾರ್ಜುನ್ ಖರ್ಗೆ ಶುಭಕೋರಿದ್ದಾರೆ.
Best wishes to Smt. Sonia Gandhi Ji on her birthday. May she be blessed with a long and healthy life.
— Narendra Modi (@narendramodi) December 9, 2023
ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಸಹ ಸೋನಿಯಾ ಗಾಂಧಿ ಅವರಿಗೆ ಜನ್ಮದಿನದ ಶುಭಾಶಯ ಕೋರಿದ್ದಾರೆ. 'ನನ್ನ ಹಿತೈಷಿಗಳು, ಮಾರ್ಗದರ್ಶಿಗಳು, ಕಾಂಗ್ರೆಸ್ ಪಕ್ಷದ ಹಿರಿಯ ನಾಯಕಿಯಾದ ಶ್ರೀಮತಿ ಸೋನಿಯಾ ಗಾಂಧಿ ಅವರಿಗೆ ಜನ್ಮದಿನದ ಶುಭಾಶಯಗಳು. ದೀರ್ಘ ಆಯಸ್ಸು, ಆರೋಗ್ಯದ ಭಾಗ್ಯ ತಮ್ಮದಾಗಲಿ, ನಿಮ್ಮ ಸಲಹೆ - ಮಾರ್ಗದರ್ಶನ ಪಕ್ಷಕ್ಕೆ ಇನ್ನು ಹಲವು ಕಾಲ ಸಿಗುವಂತಾಗಲಿ ಎಂದು ಹಾರೈಸುತ್ತೇನೆ' ಎಂದು ಸಿದ್ದರಾಮಯ್ಯ ಟ್ವೀಟ್ ಮೂಲಕ ಶುಭಕೋರಿದ್ದಾರೆ.
ನನ್ನ ಹಿತೈಷಿಗಳು, ಮಾರ್ಗದರ್ಶಿಗಳು, ಕಾಂಗ್ರೆಸ್ ಪಕ್ಷದ ಹಿರಿಯ ನಾಯಕಿಯಾದ ಶ್ರೀಮತಿ ಸೋನಿಯಾ ಗಾಂಧಿ ಅವರಿಗೆ ಜನ್ಮದಿನದ ಶುಭಾಶಯಗಳು
— Siddaramaiah (@siddaramaiah) December 9, 2023
ದೀರ್ಘ ಆಯಸ್ಸು, ಆರೋಗ್ಯದ ಭಾಗ್ಯ ತಮ್ಮದಾಗಲಿ, ನಿಮ್ಮ ಸಲಹೆ - ಮಾರ್ಗದರ್ಶನ ಪಕ್ಷಕ್ಕೆ ಇನ್ನು ಹಲವು ಕಾಲ ಸಿಗುವಂತಾಗಲಿ ಎಂದು ಹಾರೈಸುತ್ತೇನೆ. #SoniaGandhi pic.twitter.com/cHdj4huJia
ಇನ್ನೂ ಟ್ವೀಟ್ ಮೂಲಕ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮರ್ ಶುಭಕೋರಿದ್ದು ನಮ್ಮ ಕಾಂಗ್ರೆಸ್ ಪಕ್ಷದ ಅಧಿನಾಯಕಿ ಶ್ರೀಮತಿ ಸೋನಿಯಾ ಗಾಂಧಿಯವರಿಗೆ ಹುಟ್ಟಹಬ್ಬದ ಹಾರ್ದಿಕ ಶುಭಾಶಯಗಳು. ನಿಮ್ಮ ದೂರದರ್ಶಿತ್ವದಿಂದ ಕೂಡಿದ ನಾಯಕತ್ವವು ಪಕ್ಷಕ್ಕೆ ಅಪರಿಮಿತ ಶಕ್ತಿಯನ್ನು ತುಂಬಿದ್ದು, ಪ್ರತಿ ಸದಸ್ಯರಲ್ಲೂ ಆತ್ಮವಿಶ್ವಾಸವನ್ನು ಹೆಚ್ಚಿಸಿದೆ. ದೇವರು ತಮಗೆ ಉತ್ತಮ ಆಯುರಾರೋಗ್ಯ ಕರುಣಿಸಲಿ ಎಂದು ಹಾರೈಸುತ್ತೇನೆ' ಎಂದು ಡಿಸಿಎಂ ಡಿಕೆ ಶಿವಕುಮಾರ್ ಶುಭ ಹಾರೈಸಿದ್ದಾರೆ.
-
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್ -
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ -
Summer Camp: ನಟನ ಮೈಸೂರು ಸಂಸ್ಥೆಯಿಂದ ಮಕ್ಕಳಿಗೆ ಬೇಸಿಗೆ ಶಿಬಿರ 'ರಜಾಮಜಾ' ಆಯೋಜನೆ












Click it and Unblock the Notifications