Sonia Gandhi: ರಾಷ್ಟ್ರಪತಿಗೆ ಸೋನಿಯಾ ಅವಮಾನ ಆರೋಪ- ಭುಗಿಲೆದ್ದ ಆಕ್ರೋಶ
ನವದೆಹಲಿ, ಜನವರಿ, 31: ಇಂದು ಸಂಸತ್‌ನಲ್ಲಿ ಕೇಂದ್ರ ಬಜೆಟ್ ಅಧಿವೇಶನ ನಡೆಯಿತು. ಈ ವೇಳೆ ಕಾಂಗ್ರೆಸ್ ಮಾಜಿ ಅಧ್ಯಕ್ಷೆ ರಾಜ್ಯಸಭಾ ಸದಸ್ಯೆ ಸೋನಿಯಾ ಗಾಂಧಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಬಗ್ಗೆ ಮಾತನಾಡಿದ ಒಂದು ಹೇಳಿಕೆ ಇದೂ ವಿವಾದಕ್ಕೆ ಕಾರಣವಾಗಿದೆ. ಹಾಗಾದರೆ ಆ ಹೇಳಿಕೆ ಏನು ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.
ನಾಳೆ ಅಂದರೆ, ಫೆಬ್ರವರಿ 2ರಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕೇಂದ್ರ ಬಜೆಟ್ ಮಂಡನೆ ಮಾಡಲಿದ್ದಾರೆ. ಇದು ಅವರು ಮಂಡನೆ ಮಾಡಲಿರುವ 8ನೇ ಬಜೆಟ್ ಆಗಲಿದೆ. ಅಲ್ಲದೆ ಅತೀ ಹೆಚ್ಚು ಬಜೆಟ್ ಮಂಡನೆ ಮಾಡಿದ ಕೀರ್ತಿಗೂ ಪಾತ್ರರಾಗಲಿದ್ದಾರೆ.

ಬಜೆಟ್ ಅಧಿವೇಶನದ ಮುನ್ನ ದಿನವಾದ ಇಂದು (ಜನವರಿ 31) ಬೆಳಗ್ಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಉಭಯ ಸದನವನ್ನು ಉದ್ದೇಶಿಸಿ ಮಾತನಾಡಿದರು. ರಾಷ್ಟ್ರಪತಿ ಭಾಷಣ ಮುಕ್ತಾಯದ ಬಳಿಕ ಸಂಸತ್ ಹೊರಗಡೆ ಸುದ್ದಿಗಾರರೊಂದಿಗೆ ಮಾತನಾಡಿದ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು, ರಾಷ್ಟ್ರಪತಿ ತಮ್ಮ ದೀರ್ಘ ಸಾಂಪ್ರದಾಯಿಕ ಭಾಷಣದ ನಂತರ ಸುಸ್ತಾಗಿದ್ದರು ಎಂದು ಹೇಳಿದರು.
ಈ ವೇಳೆ ಸೋನಿಯಾ ಗಾಂಧಿ, Poor Lady, ಭಾಷಣ ಮುಗಿಸುವ ಹೊತ್ತಿಗೆ ರಾಷ್ಟ್ರಪತಿಗಳು ಸುಸ್ತಾಗಿ ಹೋಗಿದ್ದರು. ಅವರಿಗೆ ಮಾತನಾಡಲು ಕಷ್ಟ ಆಗುತ್ತಿತ್ತು ಎಂದು ಹೇಳಿದರು. ಈ ವೇಳೆ ರಾಹುಲ್ ಗಾಂಧಿ ಭಾಷಣ ತುಂಬಾ ಬೋರ್ ಆಗಿತ್ತು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದು, ಈ ಹೇಳಿಕೆ ತೀವ್ರ ವಿವಾದಕ್ಕೆ ಕಾರಣವಾಗಿದೆ.
ಸೋನಿಯಾ ಗಾಂಧಿ ದ್ರೌಪತಿ ಮುರ್ಮು ಅವರನ್ನು Poor Lady ಎಂದು ಕರೆದಿದ್ದಕ್ಕೆ ಬಿಜೆಪಿ ನಾಯಕರು ಕಾಂಗ್ರೆಸ್ ವಿರುದ್ಧ ಆಕ್ರೋಶಗಳನ್ನು ವ್ಯಕ್ತಪಡಿಸುತ್ತಲೇ ಇದ್ದಾರೆ. ಇನ್ನು ಪತ್ರಿಕಾಗೋಷ್ಠಿಯಲ್ಲಿ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಕೂಡ ಉಪಸ್ಥಿತರಿದ್ದರು.
ಬಿಜೆಪಿ ನಾಯಕರು ರಾಷ್ಟ್ರಪತಿ ದ್ರೌಪದಿ ಮುರ್ಮು ಬಗ್ಗೆ ಈ ರೀತಿಯಾಗಿ ಮಾತನಾಡಿದ ಕಾಂಗ್ರೆಸ್ ನಾಯಕರು ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿದ್ದಾರೆ. ಇನ್ನು ರಾಷ್ಟ್ರಪತಿ ಭವನವು ರಾಷ್ಟ್ರಪತಿ ಅವರು ಯಾವುದೇ ಹಂತದಲ್ಲಿ ಸುಸ್ತಾಗಿರಲಿಲ್ಲ. ವಾಸ್ತವವಾಗಿ, ಅವರು ಅಲ್ಪಸಂಖ್ಯಾತ ಸಮುದಾಯಗಳು, ಮಹಿಳೆಯರು ಮತ್ತು ರೈತರ ಬಗ್ಗೆ ಮಾತನಾಡುವಾಗ ಎಂದಿಗೂ ಸುಸ್ತಾಗುವುದಿಲ್ಲ ಎಂದು ತಿಳಿಸುವ ಮೂಲಕ ಸೋನಿಯಾಗಾಂಧಿ ಮಾಡಿದ ಆರೋಪಗಳನ್ನು ತಳ್ಳಿಹಾಕಿದೆ.
"ಹಿಂದಿ ಮುಂತಾದ ಭಾರತೀಯ ಭಾಷೆಗಳ ಸಂಭಾಷಣೆ ಮತ್ತು ಶೈಲಿಯೊಂದಿಗೆ ಪರಿಚಿತರಾಗಿಲ್ಲದಿರಬಹುದು. ಆದ್ದರಿಂದ ತಪ್ಪು ಅಭಿಪ್ರಾಯವನ್ನು ಸೃಷ್ಟಿಸಿದ್ದಾರೆ. ಯಾವುದೇ ಸಂದರ್ಭದಲ್ಲಿಯೂ ಅಂತಹ ಹೇಳಿಕೆಗಳನ್ನು ನೀಡುವುದು ಸರಿಯಲ್ಲ. ಜೊತೆಗೆ ಕಾಂಗ್ರೆಸ್ ಪಕ್ಷದ ಕೆಲವು ಪ್ರಮುಖ ನಾಯಕರು ಉನ್ನತ ಹುದ್ದೆಯ ಘನತೆಗೆ ಹಾನಿ ಉಂಟುಮಾಡುವ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ರಾಷ್ಟ್ರಪತಿ ಭವನ ತಿಳಿಸಿದೆ.
ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ಮಾತನಾಡಿ, ರಾಷ್ಟ್ರಪತಿ ಮುರ್ಮು ಅವರು ಆದಿವಾಸಿ ಮಹಿಳೆಯಾಗಿರಬಹುದು. ಆದರೆ, ಅವರು ದುರ್ಬಲರಲ್ಲ ಮತ್ತು ದೇಶಕ್ಕಾಗಿ ತುಂಬಾ ಶ್ರಮವಹಿಸಿ ಕೆಲಸ ಮಾಡಿದ್ದಾರೆ ಎಂದು ಹೇಳಿದರು.
ಸೋನಿಯಾ ಗಾಂಧಿ ಮತ್ತು ಇತರ ವಿರೋಧ ಪಕ್ಷದ ನಾಯಕರು ಮಾಡಿದ ಹೇಳಿಕೆಗಳನ್ನು ನಾನು ಖಂಡಿಸುತ್ತೇನೆ. ನಮ್ಮ ರಾಷ್ಟ್ರಪತಿ, ಒಬ್ಬ ಆದಿವಾಸಿ ಮಹಿಳೆ, ದುರ್ಬಲರಲ್ಲ. ದ್ರೌಪದಿ ಮುರ್ಮು ಅವರು ದೇಶ ಮತ್ತು ಸಮಾಜಕ್ಕಾಗಿ ವ್ಯಾಪಕವಾಗಿ ಕೆಲಸ ಮಾಡಿದ್ದಾರೆ, ಅವರು ಅದನ್ನು ಕಲ್ಪಿಸಲೂ ಸಾಧ್ಯವಿಲ್ಲ. ಆದ್ದರಿಂದ ಕಾಂಗ್ರೆಸ್ ನಾಯಕರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಕ್ಷಮೆ ಕೇಳಬೇಕು ಎಂದು ಹೇಳಿದರು.
ರಾಷ್ಟ್ರಪತಿ ಮುರ್ಮು ಅವರು ಭಾಷಣದಲ್ಲಿ, ಮಹಾಮಾರಿ ಸರ್ಕಾರವು ಕೋವಿಡ್-19 ಮತ್ತು ಜಾಗತಿಕ ಸಂಘರ್ಷಗಳಂತಹ ಸವಾಲುಗಳ ಹೊರತಾಗಿಯೂ ಪಕ್ಷಾಘಾತದಿಂದ ಆರ್ಥಿಕತೆಯನ್ನು ಎತ್ತುವ ಕಡೆಗೆ ಕೆಲಸ ಮಾಡಿದೆ ಎಂದು ಹೇಳಿದರು.
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications