ಅತ್ಯಾಚಾರದ ಅಳಲು; ಸೋನಿಯಾ ಗಾಂಧಿಯ ನಿರ್ಧಾರವೇನು?
ನವದೆಹಲಿ, ಡಿಸೆಂಬರ್ 8; ದೇಶದಲ್ಲಿ ಮಹಿಳಾ ಸುರಕ್ಷತೆಯ ಬಗ್ಗೆ ತೀವ್ರ ಕಳವಳ ವ್ತಕ್ತಪಡಿಸಿ, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಈ ವರ್ಷ (ಡಿಸೆಂಬರ್ 9) ಅವರು ತಮ್ಮ ಜನ್ಮ ದಿನವನ್ನು ಆಚರಿಸಿಕೊಳ್ಳದಿರಲು ನಿರ್ಧರಿಸಿದ್ದಾರೆ.
ಹೌದು, ಈ ಕುರಿತು ಎ ಎನ್ ಐ ಸುದ್ದಿ ಸಂಸ್ಥೆ ಅಧಿಕೃತವಾಗಿ ತಿಳಿಸಿದ್ದು, ದೇಶದಲ್ಲಿ ಹೆಚ್ಚಾಗಿ ಕೇಳಿ ಬರುತ್ತಿರುವ ಅತ್ಯಾಚಾರ ಹಾಗೂ ಕೊಲೆ ಪ್ರಕಣರಗಳನ್ನು ಖಂಡಿಸುವ ಸಲುವಾಗಿ ಅವರು ಈ ನಿರ್ಧಾರ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ. ಅವರ ಬೆಂಬಲಿಗರು ಹಾಗೂ ಅಭಿಮಾನಿಗಳು ನಾಳೆ (ಡಿ.9) ರಂದು ಸೋನಿಯಾ ಗಾಂಧಿ ಅವರ ಜನ್ಮದಿನವನ್ನು ಅದ್ಧೂರಿಯಾಗಿ ಆಚರಿಸಲು ನಿರ್ಧರಿಸಿದ್ದರು.

ಹೈದರಾಬಾದ್ ಪಶುವೈದ್ಯೆ ಹಾಗೂ ಉನ್ನಾವ್ ಬಾಲಕಿಯ ಅತ್ಯಾಚಾರ ಹಾಗೂ ಕೊಲೆಯಿಂದ ಅವರು ತೀವ್ರ ನೊಂದುಕೊಂಡಿದ್ದು, ದೇಶದ ಮಹಿಳೆಯರ ದುಃಖದಲ್ಲಿ ಭಾಗಿಯಾಗುವ ಸಲುವಾಗಿ ತಮ್ಮ ಜನ್ಮದಿನವ್ನನು ಆಚರಿಸದಿರಲು ನಿರ್ಧರಿಸಿದ್ದಾರೆ. ರಾಹುಲ್ ಗಾಂಧಿ ಅವರು ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಸೋನಿಯಾ ಗಾಂಧಿ ಅವರೇ ಹಂಗಾಮಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.












Click it and Unblock the Notifications