Breaking: ಸೋನಿಯಾ ಗಾಂಧಿಗೆ ಮತ್ತೆ ಕೋವಿಡ್‌ ಪಾಸಿಟಿವ್‌

ನವದೆಹಲಿ, ಆಗಸ್ಟ್‌ 13: ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಶನಿವಾರ ಎರಡನೇ ಬಾರಿಗೆ ಕೊರೊನಾ ಪಾಸಿಟಿವ್‌ ಆಗಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಜೈರಾಮ್ ರಮೇಶ್ ತಿಳಿಸಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಇಂದು ಕೋವಿಡ್-19 ಪಾಸಿಟಿವ್ ದೃಢಪಟ್ಟಿದೆ. ಸರ್ಕಾರಿ ಪ್ರೋಟೋಕಾಲ್ ಪ್ರಕಾರ ಅವರು ಪ್ರತ್ಯೇಕ ವಾಸದಲ್ಲಿರುತ್ತಾರೆ ಎಂದು ಅವರು ಟ್ವೀಟ್ ಮಾಡಿದ್ದಾರೆ. ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯವು ಅವರಿಗೆ ಸಮನ್ಸ್ ನೀಡಿದ ಒಂದು ದಿನದ ನಂತರ ಜೂನ್ 2 ರಂದು ಆಕೆಗೆ ಕೊರೋನಾ ಸೋಂಕಿಗೆ ಪಾಸಿಟಿವ್‌ ಆಗಿದ್ದರು. ಬಳಿಕ ಅವರಿಗೆ ಜೂನ್ 8 ರಂದು ತನಿಖಾ ಸಂಸ್ಥೆಯ ಮುಂದೆ ಹಾಜರಾಗುವಂತೆ ತಿಳಿಸಲಾಯಿತು.

Sonia Gandhi is again Covid positive

ನ್ಯಾಷನಲ್ ಹೆರಾಲ್ಡ್ ಪ್ರಕರಣವು ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ಆಪಾದಿತ ಹಣಕಾಸು ಅಕ್ರಮಗಳಿಗೆ ಸಂಬಂಧಿಸಿದೆ. ಖಾಸಗಿ ಕ್ರಿಮಿನಲ್ ದೂರಿನ ಆಧಾರದ ಮೇಲೆ ನಡೆಸಲಾದ ಆದಾಯ ತೆರಿಗೆ ಇಲಾಖೆಯ ತನಿಖೆಯ ವಿಚಾರಣೆಯನ್ನು ವಿಚಾರಣಾ ನ್ಯಾಯಾಲಯವು ಒಂಬತ್ತು ತಿಂಗಳ ಹಿಂದೆ ದಾಖಲಿಸಿಕೊಂಡಿದೆ. 2013ರಲ್ಲಿ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಸಂಸದ ಸುಬ್ರಮಣಿಯನ್ ಸ್ವಾಮಿಯವರು ಗಾಂಧಿ ಕುಟುಂಬದವರು ಪ್ರಕರಣದಲ್ಲಿ ಹಣವನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಆರೋಪಿಸಿದ್ದರು.

Sonia Gandhi is again Covid positive

Recommended Video

      ಮೀಡಿಯಾಗಳ ಮುಂದೆ ಗ್ರೇಟ್ ಖಲಿ ದಿಢೀರ್ ಕಣ್ಣೀರು!! ಖಲಿಗೆ ಕಾಡ್ತಿರೋ ನೋವು ಏನು? | *India | OneIndia Kannada

      ಇದೇ ಬುಧವಾರ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಕೋವಿಡ್ ಪಾಸಿಟಿವ್‌ ಆಗಿದ್ದರು. ನಾನು ಇಂದು ಕೋವಿಡ್‌ಗೆ ಮತ್ತೆ ಪಾಸಿಟಿವ್‌ ಆಗಿದ್ದೇನೆ. ಹೀಗಾಗಿ ಮನೆಯಲ್ಲಿ ಪ್ರತ್ಯೇಕವಾಗಿದ್ದು, ಎಲ್ಲಾ ನಿಯಮಗಳನ್ನು ಅನುಸರಿಸುತ್ತಾನೆ ಎಂದು ಟ್ವೀಟ್‌ ಮಾಡಿದ್ದರು. ಕಳೆದ ತಿಂಗಳು ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ರಾಹುಲ್‌ ಗಾಂಧಿಯವರನ್ನು ಜಾರಿ ನಿರ್ದೇಶನಾಲಯ ವಿಚಾರಣೆ ನಡೆಸಿತ್ತು. ಇದರಿಂದ ದೇಶಾದ್ಯಂತ ಕಾಂಗ್ರೆಸ್‌ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿತ್ತು.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+