ಸೋನಿಯಾ ಗಾಂಧಿ ಅವರ ಆರೋಗ್ಯದಲ್ಲಿ ದಿಢೀರ್ ಏರುಪೇರು, ಆಸ್ಪತ್ರೆಗೆ ದಾಖಲು... Sonia Gandhi
ಕಾಂಗ್ರೆಸ್ ಪಕ್ಷ ಸಂಕಷ್ಟದಲ್ಲಿ ಇದ್ದ ಸಮಯದಲ್ಲಿ, ಇನ್ನೇನು ಕಾಂಗ್ರೆಸ್ ಮತ್ತೆ ಗೆಲ್ಲುವುದಿಲ್ಲ ಎಂಬ ಪರಿಸ್ಥಿತಿ ಎದುರಾದ ಸಮಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಹೊಸ ಹುರುಪು ನೀಡಿದ್ದು ಸೋನಿಯಾ ಗಾಂಧಿ. ಹೀಗೆ 2004 ಯುಪಿಎ ಸರ್ಕಾರವನ್ನು ಅಧಿಕಾರಕ್ಕೆ ತರುವಲ್ಲಿ ಯಶಸ್ವಿಯಾಗಿ, 2009 ಲೋಕಸಭೆ ಚುನಾವಣೆಯಲ್ಲೂ ಕಾಂಗ್ರೆಸ್ ಪಕ್ಷವೇ ಸರ್ಕಾರ ರಚಿಸುವಂತೆ ಮಾಡಿದ್ದ ಸೋನಿಯಾ ಗಾಂಧಿ ಅವರ ಆರೋಗ್ಯದಲ್ಲಿ ಏರುಪೇರಾಗಿದೆ. ಕೆಲವು ದಿನಗಳ ಹಿಂದಷ್ಟೇ ಆಸ್ಪತ್ರೆಗೆ ದಾಖಲು ಆಗಿ, ಮತ್ತೆ ಡಿಸ್ಚಾರ್ಜ್ ಆಗಿದ್ದ ಸೋನಿಯಾ ಗಾಂಧಿ ಅವರು ಇದೀಗ ದಿಢೀರ್ ಮತ್ತೆ ಆಸ್ಪತ್ರೆ ಸೇರಿದ್ದಾರೆ.
ಹೌದು, ಸೋನಿಯಾ ಗಾಂಧಿ ಅವರ ಆರೋಗ್ಯದಲ್ಲಿ ದಿಢೀರ್ ಏರುಪೇರು ಆಗಿರುವ ಕಾರಣಕ್ಕೆ ಅವರನ್ನು ಆ ತಕ್ಷಣವೇ ನವದೆಹಲಿಯ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕಾಂಗ್ರೆಸ್ ಪಕ್ಷದ ಸಂಸದೀಯ ಪಕ್ಷದ ಅಧ್ಯಕ್ಷೆ ಕೂಡ ಆಗಿರುವ ಸೋನಿಯಾ ಗಾಂಧಿ ಅವರ ಆರೋಗ್ಯದಲ್ಲಿ ಪದೇ ಪದೇ ಏರುಪೇರು ಉಂಟಾಗುತ್ತಿದ್ದು, ಕಳೆದ ವಾರ ಅಧಿಕ ರಕ್ತದೊತ್ತಡ ಕಾರಣ ಶಿಮ್ಲಾದಲ್ಲಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಂಡು ಡಿಸ್ಚಾರ್ಜ್ ಅಗಿದ್ದರು. ಹೀಗಿದ್ದಾಗಲೇ ಇಂದು ದಿಢಿರ್ ಸೋನಿಯಾ ಗಾಂಧಿ ಅವರ ಆರೋಗ್ಯದಲ್ಲಿ ಏರುಪೇರಾಗಿದೆ. ಹೀಗಾಗಿ ನವದೆಹಲಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಹಾಗಾದ್ರೆ ಸೋನಿಯಾ ಗಾಂಧಿ ಅವರಿಗೆ ಏನಾಯ್ತು?

ಸೋನಿಯಾ ಗಾಂಧಿ ಅವರಿಗೆ 78 ವರ್ಷ
1946 ಡಿಸೆಂಬರ್ 9 ಸೋಮವಾರ ಜನಸಿದ್ದ ಸೋನಿಯಾ ಗಾಂಧಿ ಅವರಿಗೆ ಈಗ 78 ವರ್ಷ ವಯಸ್ಸು. ಹೀಗಾಗಿ ಅವರು ವಯೋ ಸಹಜ ಆರೋಗ್ಯ ಸಮಸ್ಯೆ ಎದುರಿಸುತ್ತಿದ್ದು, ಅದಕ್ಕೆ ನಿಯಮಿತ ಚಿಕಿತ್ಸೆ ಕೂಡ ಪಡೆಯುತ್ತಿದ್ದಾರೆ. ಹೀಗಿದ್ದಾಗಲೇ ಭಾನುವಾರ ಅವರ ಆರೋಗ್ಯದಲ್ಲಿ ಮತ್ತೆ ಏರುಪೇರು ಆಗಿದೆ, ಹೊಟ್ಟೆಗೆ ಸಂಬಂಧಿಸಿದ ಆರೋಗ್ಯ ಸಮಸ್ಯೆಯನ್ನ ಅವರು ಈಗ ಎದುರಿಸುತ್ತಿದ್ದು ಚಿಕಿತ್ಸೆ ನೀಡಲಾಗುತ್ತಿದೆ. ಈ ಸುದ್ದಿ ಇದೀಗ ಸಂಚಲನ ಸೃಷ್ಟಿ ಮಾಡಿದ್ದು, ಬೆಂಬಲಿಗರು ಹಾಗೂ ಕಾಂಗ್ರೆಸ್ ವರಿಷ್ಠರು ಆಸ್ಪತ್ರೆಗೆ ದೌಡಾಯಿಸಿ ಆರೋಗ್ಯ ವಿಚಾರಿಸುತ್ತಿದ್ದಾರೆ.












Click it and Unblock the Notifications