ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾದ ಸೋನಿಯಾ

ನವದೆಹಲಿ, ಆ. 24: ಕಾಂಗ್ರೆಸ್ ಪಕ್ಷದ ಅಧ್ಯಕ್ಷೆಯಾಗಿರುವ ಸೋನಿಯಾ ಗಾಂಧಿ ಅವರ ತಾತ್ಕಾಲಿಕ ಅಧಿಕಾರ ಅವಧಿ ಸೋಮವಾರ ಮುಕ್ತಾಯವಾಗಲಿದೆ. ಸೋನಿಯಾ ಗಾಂಧಿ ಅವರ ಸ್ಥಾನಕ್ಕೆ ಯಾರು ಎಂಬ ಪ್ರಶ್ನೆಗೆ ಎದ್ದಿದೆ. ಇಂದು ನಡೆದಿರುವ ಕಾಂಗ್ರೆಸ್ ಕಾರ್ಯಕಾರಿ ಸಭೆಯಲ್ಲಿ ಈ ಪ್ರಶ್ನೆಗೆ ಉತ್ತರ ಸಿಗುವ ನಿರೀಕ್ಷೆಯಿದೆ. ಆಗಸ್ಟ್ 10 ರಂದು ಸೋನಿಯಾ ಗಾಂಧಿಯವರ ಹಂಗಾಮಿ ಅಧ್ಯಕ್ಷರ ಅವಧಿ ಮುಗಿದಿದ್ದು, ಇಂದಿನ ಸಭೆಯ ಆರಂಭದಲ್ಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುವುದಾಗಿ ಸೋನಿಯಾ ಗಾಂಧಿ ಘೋಷಿಸಿದ್ದಾರೆ.

Recommended Video

      ತಮ್ಮನ ಅರ್ಹತೆ ಬಗ್ಗೆ ಮಾತನಾಡಿದ Priyanka Vadra... | Oneindia Kannada

      ಇದಕ್ಕೂ ಮುನ್ನ ಗುಲಾಂ ನಬಿ ಆಜಾದ್ ಸೇರಿದಂತೆ 23 ಮಂದಿ ಹಿರಿಯ ನಾಯಕರು ಪಕ್ಷದ ನಾಯಕತ್ವ ಬದಲಾವಣೆ ಕುರಿತಂತೆ ಬರೆದಿರುವ ಪತ್ರದ ಬಗ್ಗೆ ಸೋನಿಯಾ ಉಲ್ಲೇಖಿಸಿದ್ದಾರೆ. ಗಾಂಧಿ ಕುಟುಂಬದ ಸದಸ್ಯರ ಆಯ್ಕೆ ಕುರಿತಂತೆ ಪಕ್ಷದಲ್ಲಿ ಭಿನ್ನಾಭಿಪ್ರಾಯ ತಲೆದೋರಿರುವುದು, ಪತ್ರ ಬರೆದಿರುವುದನ್ನು ಮನಮೋಹನ್ ಸಿಂಗ್ ಹಾಗೂ ಎಕೆ ಅಂಟನಿ ಖಂಡಿಸಿದ್ದಾರೆ

      ಕಾಂಗ್ರೆಸ್ ಪಕ್ಷದಲ್ಲಿನ ನಾಯಕತ್ವ ಸಮಸ್ಯೆ ಶೀಘ್ರದಲ್ಲೇ ಇತ್ಯರ್ಥವಾಗಲಿದೆ, ನಮ್ಮ ಸಂವಿಧಾನದಲ್ಲಿ ತಿಳಿಸಲಾದ ಕಾರ್ಯವಿಧಾನದ ಪ್ರಕಾರ ಹೊಸ ನಾಯಕರನ್ನು ಆಯ್ಕೆ ಮಾಡಲಾಗುತ್ತದೆ, ಸೋನಿಯಾ ಗಾಂಧಿ ಕಾಂಗ್ರೆಸ್ ಪಕ್ಷದ ಮಧ್ಯಂತರ ಅಧ್ಯಕ್ಷರಾಗಿ ಮುಂದುವರಿಯಲಿದ್ದಾರೆ ಎಂದು ಪಕ್ಷದ ಹಿರಿಯ ಮುಖಂಡರು ಸುಳಿವು ನೀಡಿದ್ದಾರೆ.

      Sonia Gandhi offers to resign as Congress party chief

      ಕಾಂಗ್ರೆಸ್ ಕಾರ್ಯಕಾರಿಣಿಯ ಸದಸ್ಯರ ಜೊತೆಗೆ ಹಾಲೀ ಸಂಸದರೂ ಈ ವರ್ಚುಯಲ್ ಸಭೆಯಲ್ಲಿ ಭಾಗವಹಿಸಿದ್ದಾರೆ. ಹೊಸ ನಾಯಕರ ಆಯ್ಕೆಗಾಗಿ ಪ್ರಕ್ರಿಯೆ ಆರಂಭಿಸುವಂತೆ ಸೋನಿಯಾ ಗಾಂಧಿ ಸೂಚಿಸಿದ್ದಾರೆ. ಈ ನಡುವೆ ಹೊಸ ಸಾರಥಿ ಆಯ್ಕೆ ತನಕ ಹಂಗಾಮಿಯಾಗಿ ಪಕ್ಷವನ್ನು ಮುನ್ನಡೆಸಲು ಸೋನಿಯಾರನ್ನು ಕೋರಿಕೊಳ್ಳಲಾಗಿದೆ. ಆದರೆ, ಆರೋಗ್ಯದ ಸಮಸ್ಯೆಯಿಂದ ಹಂಗಾಮಿ ಅಧ್ಯಕ್ಷೆಯಾಗಿ ಮುಂದುವರಿಯಲು ಸೋನಿಯಾ ಒಪ್ಪದಿದ್ದರೆ, ಹಿರಿಯ ಕಾಂಗ್ರೆಸ್ ಮುಖಂಡರಾದ ಮನಮೋಹನ್ ಸಿಂಗ್, ಎ.ಕೆ.ಆಂಟನಿ, ಮಲ್ಲಿಕಾರ್ಜುನ ಖರ್ಗೆ, ಸುಶೀಲ್ ಕುಮಾರ್ ಶಿಂಧೆ, ಚುನಾವಣಾ ಪ್ರಕ್ರಿಯೆ ಮುಗಿಯುವವರೆಗೆ ಹಂಗಾಮಿ ಅಧ್ಯಕ್ಷರಾಗಿ ಆಯ್ಕೆಯಾಗಬಹುದು.

      Sonia Gandhi offers to resign as Congress party chief

      ಮನಸ್ಸಿಲ್ಲದ ಮನಸ್ಸಿನಿಂದ ಅನಿವಾರ್ಯವಾಗಿ ಕಳೆದ ವರ್ಷ ಆಗಸ್ಟ್ 10ರಂದು ಕಾಂಗ್ರೆಸ್ ಅಧ್ಯಕ್ಷೆಯಾಗಿ ಸೋನಿಯಾ ಗಾಂಧಿ ಅಧಿಕಾರ ವಹಿಸಿಕೊಂಡಿದ್ದರು. ಲೋಕಸಭೆ ಚುನಾವಣೆ ಸೋಲಿನ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರಿಂದ ಅಧ್ಯಕ್ಷ ಸ್ಥಾನ ತೆರವಾಗಿತ್ತು. 1998 ರಿಂದ 2017ರ ತನಕ ಕಾಂಗ್ರೆಸ್ ಅಧ್ಯಕ್ಷೆಯಾಗಿ ಕಾರ್ಯ ನಿರ್ವಹಿಸಿದ್ದ ಸೋನಿಯಾ ಅವರು ಚುನಾವಣೆಯಲ್ಲಿ ಪಕ್ಷವನ್ನು ಮುನ್ನಡೆಸಿದ್ದರು. ಯುನೈಟೆಡ್ ಪ್ರೊಗ್ರೆಸಿವ್ ಅಲೈಯನ್ಸ್ (ಯುಪಿಎ) ಎರಡು ಸಾರ್ವತ್ರಿಕ ಚುನಾವಣೆಯಲ್ಲಿಗೆಲುವು ಸಾಧಿಸಿತ್ತು. ಯುಪಿಎ ಅಧ್ಯಕ್ಷೆಯಾಗಿ ಕೂಡಾ ಸೋನಿಯಾ ಮುಂದುವರೆದಿದ್ದಾರೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+