ಕಾಂಗ್ರೆಸ್ ಎಲ್ಲಾ ವಲಸೆ ಕಾರ್ಮಿಕರ ರೈಲ್ವೆ ಪ್ರಯಾಣ ವೆಚ್ಚ ಭರಿಸಲಿದೆ: ಸೋನಿಯಾ ಗಾಂಧಿ
ನವದೆಹಲಿ, ಮೇ 4: ಎಲ್ಲಾ ವಲಸೆ ಕಾರ್ಮಿಕರ ರೈಲ್ವೆ ಪ್ರಯಾಣ ವೆಚ್ಚವನ್ನು ಕಾಂಗ್ರೆಸ್ ಭರಿಸಲಿದೆ ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾಗಾಂಧಿ ಭರವಸೆ ನೀಡಿದ್ದಾರೆ.ಈ ಸಂಬಂಧ ಎಲ್ಲಾ ರಾಜ್ಯಗಳ ಪ್ರದೇಶ ಕಾಂಗ್ರೆಸ್ ಸಮಿತಿಗೆ ಆದೇಶ ಹೊರಡಿಸಿರುವ ಅವರು ಅಗತ್ಯವಿರುವ ವಲಸೆ ಕಾರ್ಮಿಕರಿಗೆ ಅವರವರ ಊರುಗಳಿಗೆ ಹೋಗಲು ರೈಲ್ವೆ ಪ್ರಯಾಣದ ವೆಚ್ಚವನ್ನು ಭರಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಹೇಳಿದ್ದಾರೆ.
Recommended Video
ದೇಶದ ಬಡವರಿಗೆ ಅಗತ್ಯವಿರುವ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷ ಮಾಡುತ್ತಿರುವ ವಿನಮ್ರದ ಕೊಡುಗೆಯಿದು. ಈ ಸಮಯದಲ್ಲಿ ಕಾರ್ಮಿಕರ ನೆರವಿಗೆ ಬರುವುದು ಅತ್ಯಗತ್ಯವಾಗಿದೆ ಎಂದಿದ್ದಾರೆ.ವಲಸೆ ಕಾರ್ಮಿಕರಿಂದ ರೈಲು ಟಿಕೆಟ್ ದರ ವಸೂಲಿ ಮಾಡುತ್ತಿರುವ ಕೇಂದ್ರ ಸರ್ಕಾರಕ್ಕೆ ನಾಚಿಕೆಯಾಗಬೇಕು ಎಂದಿರುವ ಸೋನಿಯಾ ಗಾಂಧಿ, ವಲಸೆ ಕಾರ್ಮಿಕರ ರೈಲು ಟಿಕೆಟ್ ದರವನ್ನು ಕಾಂಗ್ರೆಸ್ ಪಕ್ಷ ಭರಿಸಲಿದೆ ಎಂದಿದ್ದಾರೆ.
ಗುಜರಾತ್‌ನ ಒಂದು ಕಾರ್ಯಕ್ರಮ(ನಮಸ್ತೆ ಟ್ರಂಪ್) ಕೇಂದ್ರ ಸರ್ಕಾರ 100 ಕೋಟಿ ರೂ. ನೀಡಿದೆ. ಪಿಎಂ ನಿಧಿಗೆ ಖುದ್ದು ರೈಲ್ವೇ ಇಲಾಖೆ 151 ಕೋಟಿ ರೂ. ನೀಡಿದೆ. ಆದರೆ ವಲಸೆ ಕಾರ್ಮಿಕರನ್ನು ಉಚಿತವಾಗಿ ಮನೆ ತಲುಪಿಸಲು ಇವುಗಳಿಗೆ ಆಗುವುದಿಲ್ಲ ಎಂದರೆ ನಾಚಿಕೆಯಾಗಬೇಕು ಎಂದು ಸೋನಿಯಾ ಹೇಳಿದ್ದಾರೆ.

ಶ್ರಮಿಕ ವಿಶೇಷ ರೈಲಿನ ಮೂಲಕ ಪ್ರಯಾಣ
ಶ್ರಮಿಕ ವಿಶೇಷ ರೈಲುಗಳ ಮೂಲಕ ಸಂಕಷ್ಟದಲ್ಲಿರುವ ವಲಸಿಗರು ತಮ್ಮ ಮನೆಗಳಿಗೆ ತಲುಪಲು ವ್ಯವಸ್ಥೆ ಮಾಡಲಾಗಿದೆ. ಅದರಂತೆ ಈ ವಿಶೇಷ ರೈಲುಗಳು ಒಂದು ರಾಜ್ಯದಿಂದ ಮತ್ತೊಂದು ರಾಜ್ಯಕ್ಕೆ ವಲಸಿಗರನ್ನು ಹೊತ್ತು ಪ್ರಯಾಣ ಆರಂಭಿಸಿವೆ.

ವಿದೇಶದಲ್ಲಿರುವ ಭಾರತದ ಪ್ರಜೆಗಳ ಬಗ್ಗೆ ಮಾತ್ರವೇ ಸರ್ಕಾರದ ಚಿಂತೆ
ವಿದೇಶಗಳಲ್ಲಿ ಸಿಲುಕಿ ಹಾಕಿಕೊಂಡಿರುವ ಪ್ರಜೆಗಳನ್ನು ಭಾರತಕ್ಕೆ ಕರೆತರಲು ತೋರಿಸುವ ಆಸಕ್ತಿಯನ್ನು ಸರ್ಕಾರ ನಮ್ಮ ದೇಶದಲ್ಲಿರುವ ಬಡ, ನಿರ್ಗತಿಕ ವಲಸೆ ಕಾರ್ಮಿಕರ ಬಗ್ಗೆ ಏಕೆ ತೋರಿಸುತ್ತಿಲ್ಲ ಎಂದು ಸೋನಿಯಾ ಗಾಂಧಿ ಇದೇ ಸಂದರ್ಭದಲ್ಲಿ ಪ್ರಶ್ನಿಸಿದ್ದಾರೆ.
|
ವಲಸೆ ಕಾರ್ಮಿಕರನ್ನು ಉಚಿತವಾಗಿ ಊರಿಗೆ ಕಳುಹಿಸಿ
ವಲಸೆ ಕಾರ್ಮಿಕರನ್ನು ರೈಲಿನಲ್ಲಿ ಉಚಿತವಾಗಿ ಅವರ ಊರುಗಳಿಗೆ ಕಳುಹಿಸಿ ಎಂದು ಕಾಂಗ್ರೆಸ್ ಕೇಂದ್ರ ಸರ್ಕಾರ ಮತ್ತು ರೈಲ್ವೆ ಸಚಿವಾಲಯಗಳನ್ನು ಹಲವು ಬಾರಿ ಮನವಿ ಮಾಡಿಕೊಂಡರೂ ನಿರ್ಲಕ್ಷ್ಯ ವಹಿಸಿದೆ ಎಂದು ಆರೋಪಿಸಿದ್ದಾರೆ.

ಕಾರ್ಮಿಕರು ದೇಶದ ಪ್ರಗತಿಗೆ ಮೂಲ ಆಧಾರ
ಕಾರ್ಮಿಕರು ಈ ದೇಶದ ಪ್ರಗತಿಯ ಮೂಲ ಆಧಾರವಾಗಿದ್ದು, ಸಂಕಷ್ಟದಲ್ಲಿರುವ ಅವರಿಂದಲೇ ಹಣ ವಸೂಲಿ ಮಾಡುತ್ತಿರುವ ಕೇಂದ್ರದ ನಡೆ ಅತ್ಯಂತ ನಿರ್ಲಜ್ಯ ಎಂದು ಸೋನಿಯಾ ಕಿಡಿಕಾರಿದ್ದಾರೆ.
ವಿದೇಶದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಭಾರತೀಯರನ್ನು ಉಚಿತವಾಗಿ ಕರೆತಂದಿರುವಾಗ, ಒಂದು ರಾಜ್ಯದಿಂದ ಮತ್ತೊಂದು ರಾಜ್ಯಕ್ಕೆ ಪ್ರಯಾಣ ಮಾಡಲು ಬಯಸಿರುವ ನಮ್ಮ ಕಾರ್ಮಿಕರಿಂದ ಟಿಕೆಟ್ ದರ ವಸೂಲಿ ಮಾಡುತ್ತಿರುವುದೇಕೆ ಎಂದು ಸೋನಿಯಾ ಪ್ರಶ್ನಿಸಿದ್ದಾರೆ.












Click it and Unblock the Notifications