ಅರ್ನಬ್ ವಾಟ್ಸಾಪ್ ಚಾಟ್ ಸೋರಿಕೆ: ಸರ್ಕಾರದ ಮೌನದ ಕುರಿತು ಸೋನಿಯಾ ಗಾಂಧಿ ತರಾಟೆ
ನವದೆಹಲಿ, ಜನವರಿ 22: ರಿಪಬ್ಲಿಕ್ ಟಿವಿ ಸಂಪಾದಕ ಅರ್ನಬ್ ಗೋಸ್ವಾಮಿ ಅವರ ಸೋರಿಕೆಯಾದ ವಾಟ್ಸಾಪ್ ಚಾಟ್‌ನ ಮಾಹಿತಿಗಳ ಕುರಿತು ಕೇಂದ್ರ ಸರ್ಕಾರ ಮೌನವಹಿಸಿರುವುದನ್ನು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಪ್ರಶ್ನಿಸಿದ್ದಾರೆ.
ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ರಾಷ್ಟ್ರೀಯ ಭದ್ರತೆ ವಿಚಾರದಲ್ಲಿ ವ್ಯಾಪಕವಾಗಿ ರಾಜಿ ಮಾಡಿಕೊಳ್ಳಲಾಗಿದೆ. ಇತ್ತೀಚಿನ ಬೆಳವಣಿಗೆಗಳು ಆಘಾತಕಾರಿಯಾಗಿವೆ ಎಂದು ಹೇಳಿದ್ದಾರೆ.
'ರಾಷ್ಟ್ರೀಯ ಭದ್ರತೆಯಲ್ಲಿ ಹೇಗೆ ವ್ಯಾಪಕವಾಗಿ ರಾಜಿಮಾಡಿಕೊಳ್ಳಲಾಗಿದೆ ಎನ್ನುವ ಇತ್ತೀಚಿನ ವರದಿಗಳು ದಿಗಿಲು ಹುಟ್ಟಿಸುತ್ತವೆ. ಕೆಲವು ದಿನಗಳ ಹಿಂದೆ ಆಂಟನಿ ಅವರು (ಮಾಜಿ ರಕ್ಷಣಾ ಸಚಿವ), ಸೇನಾ ಕಾರ್ಯಾಚರಣೆಯ ಅಧಿಕೃತ ರಹಸ್ಯಗಳನ್ನು ಸೋರಿಕೆ ಮಾಡುವುದು ದೇಶದ್ರೋಹ ಎಂದು ಹೇಳಿದ್ದರು. ಆದರೂ ಕೇಂದ್ರ ಸರ್ಕಾರದ ಕಡೆಯಿಂದ ಮೌನವೇ ಕಂಡುಬರುತ್ತಿರುವುದು, ಇದು ಕಿವುಡುತನ ಪ್ರದರ್ಶಿಸುತ್ತಿರುವುದನ್ನು ತೋರಿಸುತ್ತದೆ' ಎಂದು ಸೋನಿಯಾ ಟೀಕಿಸಿದ್ದಾರೆ.

'ಇತರರಿಗೆ ದೇಶಭಕ್ತಿ ಮತ್ತು ರಾಷ್ಟ್ರೀಯತೆಯ ಬಗ್ಗೆ ಪ್ರಮಾಣಪತ್ರ ನೀಡುತ್ತಿದ್ದವರ ಮುಖ ಸಂಪೂರ್ಣವಾಗು ಬಹಿರಂಗವಾಗಿದೆ' ಎಂದು ಅರ್ನಬ್ ವಿರುದ್ಧ ಕಿಡಿಕಾರಿದ್ದಾರೆ, ಮುಂಬರುವ ಬಜೆಟ್ ಅಧಿವೇಶನದಲ್ಲಿ ರಾಷ್ಟ್ರೀಯ ವಿಚಾರಗಳ ಬಗ್ಗೆ ಚರ್ಚಿಸಲು ಸಂಸತ್‌ನಲ್ಲಿ ಅವಕಾಶ ಸಿಗಬೇಕು ಎಂದು ಬಯಸಿದ್ದಾರೆ.
'ಇನ್ನು ಒಂದು ವಾರದ ಸಮಯದಲ್ಲಿ ಸಂಸತ್ತು ಮತ್ತೆ ಸೇರಲಿದೆ. ಅದು ಬಜೆಟ್ ಅಧಿವೇಶನ ನಿಜ. ಆದರೆ ಸಾರ್ವಜನಿಕ ಕಳವಳಕ್ಕೆ ಕಾರಣವಾದ ಅನೇಕ ಮಹತ್ವದ ವಿಚಾರಗಳು ಚರ್ಚೆಗೆ ಒಳಗಾಗಬೇಕಿವೆ. ಇದಕ್ಕೆ ಸರ್ಕಾರ ಒಪ್ಪಲಿ, ಇಲ್ಲದಿರಲಿ ಅದನ್ನು ನೋಡಬೇಕು' ಎಂದಿದ್ದಾರೆ.
-
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು












Click it and Unblock the Notifications