ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸೋನಿಯಾಜೀ, ಸಿದ್ದರಾಮಯ್ಯ ಅವರನ್ನು ಸಿಎಂ ಪಟ್ಟದಿಂದ ಕೆಳಗಿಳಿಸಿ

By Mahesh
|
Google Oneindia Kannada News

ನವದೆಹಲಿ, ಫೆ. 05: ತಾಂಜೇನಿಯಾ ಮೂಲದ ವಿದ್ಯಾರ್ಥಿನಿ ಮೇಲೆ ಹಲ್ಲೆ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಜಿ ಪರಮೇಶ್ವರ ಅವರು ನೀಡಿದ ಹೇಳಿಕೆ ವಿವಾದಕ್ಕೆ ಕಾರಣವಾಗಿರುವುದು ಗೊತ್ತಿರಬಹುದು. ಈಗ ಇದೇ ವಿಷಯವನ್ನು ಮುಂದಿಟ್ಟುಕೊಂಡು ಬಿಜೆಪಿ ರಾಷ್ಟ್ರೀಯ ವಕ್ತಾರೆ ಮೀನಾಕ್ಷಿ ಲೇಖಿ ಅವರು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಸವಾಲು ಹಾಕಿದ್ದಾರೆ.

ಅರೆ ಬೆತ್ತಲೆಗೊಳಿಸಿ ಹಲ್ಲೆ ನಡೆಸಲಾಗಿಲ್ಲ, ಜನಾಂಗೀಯ ದ್ವೇಷ ವಾತಾವರಣ ಇಲ್ಲ ಎಂದು ಕರ್ನಾಟಕದ ಗೃಹ ಸಚಿವ ಜಿ ಪರಮೇಶ್ವರ ಅವರು ಹೇಳಿದ್ದಾರೆ. ಕಾನೂನು ಸುವ್ಯವಸ್ಥೆ ಪಾಲಿಸುವಲ್ಲಿ ವಿಫಲವಾಗಿರುವ ಕರ್ನಾಟಕ ಸರ್ಕಾರದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸಿಎಂ ಪಟ್ಟದಿಂದ ಕೆಳಗಿಳಿಸುವ ಶಕ್ತಿ ಸೋನಿಯಾ ಅವರಿಗೆ ಇದೆ ಎಂದು ನಂಬಿದ್ದೇವೆ. [ವಿದ್ಯಾರ್ಥಿನಿ ಮೇಲೆ ಹಲ್ಲೆ: ಪರಂ ವಿರುದ್ಧ ಟ್ವಿಟ್ಟರ್ ಮಂದಿ ಗರಂ]

ಘಟನೆ ಬಗ್ಗೆ ವರದಿ ಕೇಳುವ ಬದಲು ಕಾಂಗ್ರೆಸ್ ಹೈಕಮಾಂಡ್ ಮೊದಲಿಗೆ ಸಿಎಂ ಸಿದ್ದರಾಮಯ್ಯ ಅವರನ್ನು ಬದಲಾಯಿಸಲಿ ಎಂದು ಲೇಖಿ ಪ್ರತಿಕ್ರಿಯಿಸಿದ್ದಾರೆ.

Sonia Gandhi should have removed Karantaka CM: BJP

ಪ್ರಕರಣಕ್ಕೆ ಸಂಬಂಧಿಸಿ ಲೋಕೇಶ್ ಬಂಗಾರಿ, ವೆಂಕಟೇಶ್ ರಾಮಯ್ಯ, ಸಲೀಂ ಪಾಷಾ, ಭಾನುಪ್ರಕಾಶ್ ಮತ್ತು ರೆಹಮತುಲ್ಲಾ ಎಂಬುವರನ್ನು ಬಂಧಿಸಲಾಗಿದೆ. ಘಟನೆ ಬಗ್ಗೆ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ತಮ್ಮ ಜತೆ ದೂರವಾಣಿಯಲ್ಲಿ ಸಿದ್ದರಾಮಯ್ಯ ಮಾತನಾಡಿದ್ದಾರೆ. ಸಮಗ್ರ ವರದಿಯನ್ನು ಮುಖ್ಯ ಕಾರ್ಯದರ್ಶಿಯವರು ಕೇಂದ್ರದ ವಿದೇಶಾಂಗ ಸಚಿವಾಲಯಕ್ಕೆ ಕಳುಹಿಸಿದ್ದಾರೆ.[ಲೈಂಗಿಕ ದೌರ್ಜನ್ಯ ನಡೆದಿಲ್ಲ, ಪ್ರಕರಣ ಸಿಸಿಬಿಗೆ: ಪರಮೇಶ್ವರ]

ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಘಟನೆ ಬಗ್ಗೆ ವಿವರಣೆ ನೀಡುವಂತೆ ಪಕ್ಷದ ಪ್ರಧಾನ ಕಾರ್ಯದರ್ಶಿ ದಿಗ್ವಿಜಯ್ ಸಿಂಗ್ ಅವರನ್ನು ಕೇಳಿದ್ದಾರೆ. ಈ ನಡುವೆ ಜನಾಂಗೀಯ ನಿಂದನೆ, ಮಹಿಳೆಯನ್ನು ಬೆತ್ತಲೆಗೊಳಿಸಿದ ಪ್ರಕರಣದಲ್ಲಿ ಕರ್ನಾಟಕ ಸರ್ಕಾರ ಸತ್ಯವನ್ನು ಮರೆಮಾಚುತ್ತಿದೆ ಎಂದು ಬಿಜೆಪಿ ಆರೋಪಿಸಿದೆ. ಬಿಜೆಪಿಯೇತರ ರಾಜ್ಯಗಳಲ್ಲಿ ಮಹಿಳೆಯರ ಎಷ್ಟು ಅಸುರಕ್ಷಿತರಾಗಿದ್ದಾರೆ ಎಂಬುದನ್ನು ತೋರಿಸುತ್ತದೆ ಎಂದು ಲೇಖಿ ಹೇಳಿದ್ದಾರೆ. (ಪಿಟಿಐ)

English summary
Terming the alleged assault and stripping of a Tanzanian woman in Bengaluru as a case of "racial attack", BJP national spokesperson Meenakshi Lekhi today said Congress chief Sonia Gandhi should have reprimanded the state government and removed the Karnataka chief minister.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X