Sonia Gandhi: ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು

ನವದೆಹಲಿ, ಜೂನ್‌ 07: ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ ಅಸ್ವಸ್ಥಗೊಂಡಿದ್ದಾರೆ. ಸೋನಿಯಾ ಗಾಂಧಿ ಅವರ ಆರೋಗ್ಯ ಏರುಪೇರಾಗಿದ್ದು, ಹಿಮಾಚಲ ಪ್ರದೇಶದ ಶಿಮ್ಲಾದಲ್ಲಿರುವ ಇಂದಿರಾ ಗಾಂಧಿ ವೈದ್ಯಕೀಯ ಕಾಲೇಜ್ (ಐಜಿಎಂಸಿ) ಆಸ್ಪತ್ರೆಗೆ ಅವರನ್ನು ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ. 78 ವರ್ಷದ ಹಿರಿಯ ಕಾಂಗ್ರೆಸ್ ನಾಯಕಿಯನ್ನು ಪರೀಕ್ಷೆ ಮತ್ತು ತಪಾಸಣೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಎಂಆರ್‌ಐ ಸ್ಕ್ಯಾನ್ ಮಾಡಲಾಗುತ್ತಿದೆ. ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ಶೀಘ್ರದಲ್ಲೇ ಆಸ್ಪತ್ರೆಗೆ ಭೇಟಿ ನೀಡಲಿದ್ದಾರೆ.

ಸೋನಿಯಾ ಗಾಂಧಿ ಅವರು ಮೇ 27 ರಂದು ಕೊನೆಯ ಬಾರಿಗೆ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದು, ಸೋನಿಯಾ ಗಾಂಧಿ ಅವರಿಗೆ ಆರೋಗ್ಯದಲ್ಲಿ ಏರುಪೇರು ಕಂಡ ಕಾರಣ ಕೂಡಲೇ ತಪಾಸಣೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ಅವರು ಶೀಘ್ರದಲ್ಲೇ ದೆಹಲಿಯ ಆಸ್ಪತ್ರೆಗೆ ಭೇಟಿ ನೀಡಲಿದ್ದಾರೆ.

Sonia Gandhi Stable After Medical Tests in Shimla

ಇನ್ನೂ ಕಾಂಗ್ರೆಸ್‌ ನಾಯಕಿಯಾದ ಸೋನಿಯಾ ಗಾಂಧಿ ಅವರು ಈ ಹಿಂದೆ ಹಲವು ಬಾರಿ ಆಸ್ಪತ್ರೆಗೆ ದಾಖಲಾಗಿದ್ದರು. ಈ ವರ್ಷದ ಫೆಬ್ರವರಿಯಲ್ಲೂ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲಾಗಿದ್ದರು. ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸೋನಿಯಾ ಗಾಂಧಿ ಅವರಿಗೆ ಉಸಿರಾಟದ ತೊಂದರೆ ಮತ್ತು ಕೋವಿಡ್ ನಂತರದ ಸಮಸ್ಯೆಗಳು ಇದ್ದವು. ಈ ಹಿಂದೆಯೂ ಉಸಿರಾಟದ ತೊಂದರೆ ಮತ್ತು ವೈರಲ್ ಜ್ವರದಿಂದಾಗಿ ಅವರನ್ನು ದೆಹಲಿಯ ಸರ್ ಗಂಗಾರಾಮ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಸೋನಿಯಾ ಗಾಂಧಿ ಅವರ ಆರೋಗ್ಯ ಸ್ಥಿರ

ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಆರೋಗ್ಯ ಸಮಸ್ಯೆಗಳ ಕಾರಣದಿಂದ ಸಾಮಾನ್ಯ ತಪಾಸಣೆಗಾಗಿ ಶಿಮ್ಲಾದ ಇಂದಿರಾ ಗಾಂಧಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಕರೆತರಲಾಗಿದೆ. ವೈದ್ಯರು ಅವರನ್ನು ಪರೀಕ್ಷಿಸುತ್ತಿದ್ದಾರೆ. ಅವರು ಆರೋಗ್ಯ ಸ್ಥಿರವಾಗಿದೆ, ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ ಎಂದು ಪ್ರಧಾನ ಸಲಹೆಗಾರರಾದ ನರೇಶ್ ಚೌಹಾಣ್ ಹೇಳಿದ್ದಾರೆ. ಇನ್ನೂ ಸೋನಿಯಾ ಗಾಂಧಿ ಅವರು ತಮ್ಮ ಪುತ್ರಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಮನೆಯಲ್ಲಿ ತಂಗಿದ್ದರು. ಅವರು ವೈಯಕ್ತಿಕ ಭೇಟಿಗಾಗಿ ಶಿಮ್ಲಾಕ್ಕೆ ಬಂದಿದ್ದರು. ಆದರೆ, ಇದ್ದಕ್ಕಿದ್ದಂತೆ ಅವರ ಆರೋಗ್ಯ ಹದಗೆಟ್ಟಿದೆ ಎನ್ನಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+