ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು

Subscribe to Oneindia Kannada

ನವದೆಹಲಿ, ಅಕ್ಟೋಬರ್ 27: ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರಾಗಿದ್ದು ದೆಹಲಿಯ ಗಂಗಾರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಶಿಮ್ಲಾಕ್ಕೆ ಭೇಟಿ ನೀಡಿದ್ದ ಸೋನಿಯಾ ಅನಾರೋಗ್ಯಕ್ಕೆ ಗುರಿಯಾಗಿದ್ದರು. ನಂತರ ದೆಹಲಿಗೆ ಕರೆತಂದು ಸರ್ ಗಂಗಾರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರು ಉದರ ಬೇನೆಯಿಂದ ಬಳಲುತ್ತಿದ್ದಾರೆ ಎಂದು ಗಂಗಾರಾಮ್ ಆಸ್ಪತ್ರೆಯ ಮೂಲಗಳು ಹೇಳಿವೆ.

Sonia Gandhi suffering from upset stomach, admitted to Ganga Ram Hospital

ಇನ್ನೇನು ಎರಡು ತಿಂಗಳ ಅಂತರದಲ್ಲಿ ಹಿಮಾಚಲ ಪ್ರದೇಶ ಮತ್ತು ಗುಜರಾತ್ ವಿಧಾನಸಭಾ ಚುನಾವಣೆ ನಡೆಯಲಿದೆ. ಜತೆಗೆ ಸತತ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಸೋನಿಯಾ ಗಾಂಧಿ ಮುಂದಿನ ತಿಂಗಳು ರಾಹುಲ್ ಗಾಂಧಿಗೆ ಎಐಸಿಸಿ ಅಧ್ಯಕ್ಷ ಪಟ್ಟ ವರ್ಗಾಯಿಸಲು ಯೋಚಿಸಿದ್ದರು. ಇದೇ ಸಂದರ್ಭದಲ್ಲಿ ಅವರು ಆರೋಗ್ಯ ಕೈಕೊಟ್ಟಿದೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Mrs. Sonia Gandhi has been found to be suffering from upset stomach. She has been admitted for observation said Sir Ganga Ram Hospital.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ