• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಸೋನಿಯಾ ಅಧಿಕಾರ ಅವಧಿ ಮುಕ್ತಾಯ? ಮುಂದೆ ಯಾರು?

|
Google Oneindia Kannada News

ನವದೆಹಲಿ, ಆ.9: ಕಾಂಗ್ರೆಸ್ ಪಕ್ಷದ ಅಧ್ಯಕ್ಷೆಯಾಗಿರುವ ಸೋನಿಯಾ ಗಾಂಧಿ ಅವರ ತಾತ್ಕಾಲಿಕ ಅಧಿಕಾರ ಅವಧಿ ಸೋಮವಾರ ಮುಕ್ತಾಯವಾಗಲಿದೆ. ಸೋನಿಯಾ ಗಾಂಧಿ ಅವರ ಸ್ಥಾನಕ್ಕೆ ಯಾರು ಎಂಬ ಪ್ರಶ್ನೆಗೆ ಎದ್ದಿದ್ದು, ಇದಕ್ಕೆ ಪಕ್ಷದ ಮುಖಂಡ ಮತ್ತು ರಾಜ್ಯಸಭಾ ಸಂಸದ ಅಭಿಷೇಕ್ ಮನು ಸಿಂಘ್ವಿ ಉತ್ತರಿಸಿದ್ದಾರೆ.

ಕಾಂಗ್ರೆಸ್ ಪಕ್ಷದಲ್ಲಿನ ನಾಯಕತ್ವ ಸಮಸ್ಯೆ ಶೀಘ್ರದಲ್ಲೇ ಇತ್ಯರ್ಥವಾಗಲಿದೆ, ನಮ್ಮ ಸಂವಿಧಾನದಲ್ಲಿ ತಿಳಿಸಲಾದ ಕಾರ್ಯವಿಧಾನದ ಪ್ರಕಾರ ಹೊಸ ನಾಯಕರನ್ನು ಆಯ್ಕೆ ಮಾಡಲಾಗುತ್ತದೆ, ಸೋನಿಯಾ ಗಾಂಧಿ ಕಾಂಗ್ರೆಸ್ ಪಕ್ಷದ ಮಧ್ಯಂತರ ಅಧ್ಯಕ್ಷರಾಗಿ ಮುಂದುವರಿಯಲಿದ್ದಾರೆ ಅಭಿಷೇಕ್ ಮನು ಸಿಂಘ್ವಿ ಹೇಳಿದರು.

ಕಾಂಗ್ರೆಸ್ ಪಕ್ಷದ ಮುಂದಾಳತ್ವ ವಹಿಸಿಕೊಳ್ಳುತ್ತಾರಾ ರಾಹುಲ್ ಗಾಂಧಿ?ಕಾಂಗ್ರೆಸ್ ಪಕ್ಷದ ಮುಂದಾಳತ್ವ ವಹಿಸಿಕೊಳ್ಳುತ್ತಾರಾ ರಾಹುಲ್ ಗಾಂಧಿ?

ಆಗಸ್ಟ್ 10 ರಂದು ಸೋನಿಯಾ ಗಾಂಧಿಯವರ ಹಂಗಾಮಿ ಅಧ್ಯಕ್ಷರ ಅವಧಿ ಮುಗಿಯುತ್ತಿದ್ದು ಈ ಬಗ್ಗೆ ಮಾಧ್ಯಮದವರಿಗೆ ಪ್ರಶ್ನೆಗೆ ಸಿಂಘ್ವಿ ಉತ್ತರಿಸಿದರು.

"ಹೊಸ ಪಕ್ಷದ ಅಧ್ಯಕ್ಷರನ್ನು ಆಯ್ಕೆ ಮಾಡಲು ಕಾರ್ಯವಿಧಾನವಿದೆ, ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಇದನ್ನು ನಿರ್ಧರಿಸಲಿದ್ದು, ಈ ಬಗ್ಗೆ ಶೀಘ್ರದಲ್ಲೇ ತಿಳಿಸಲಾಗುತ್ತದೆ"ಎಂದು ಹೇಳಿದರು.

ಮನಸ್ಸಿಲ್ಲದ ಮನಸ್ಸಿನಿಂದ ಅನಿವಾರ್ಯವಾಗಿ ಕಳೆದ ವರ್ಷ ಆಗಸ್ಟ್ 10ರಂದು ಕಾಂಗ್ರೆಸ್ ಅಧ್ಯಕ್ಷೆಯಾಗಿ ಸೋನಿಯಾ ಗಾಂಧಿ ಅಧಿಕಾರ ವಹಿಸಿಕೊಂಡಿದ್ದರು. ಲೋಕಸಭೆ ಚುನಾವಣೆ ಸೋಲಿನ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರಿಂದ ಅಧ್ಯಕ್ಷ ಸ್ಥಾನ ತೆರವಾಗಿತ್ತು. 1998 ರಿಂದ 2017ರ ತನಕ ಕಾಂಗ್ರೆಸ್ ಅಧ್ಯಕ್ಷೆಯಾಗಿ ಕಾರ್ಯ ನಿರ್ವಹಿಸಿದ್ದ ಸೋನಿಯಾ ಅವರು ಚುನಾವಣೆಯಲ್ಲಿ ಪಕ್ಷವನ್ನು ಮುನ್ನಡೆಸಿದ್ದರು. ಯುನೈಟೆಡ್ ಪ್ರೊಗ್ರೆಸಿವ್ ಅಲೈಯನ್ಸ್ (ಯುಪಿಎ) ಎರಡು ಸಾರ್ವತ್ರಿಕ ಚುನಾವಣೆಯಲ್ಲಿಗೆಲುವು ಸಾಧಿಸಿತ್ತು. ಯುಪಿಎ ಅಧ್ಯಕ್ಷೆಯಾಗಿ ಕೂಡಾ ಸೋನಿಯಾ ಮುಂದುವರೆದಿದ್ದಾರೆ.

English summary
Congress National Spokesperson Abhishek Manu Singhvi said that Congress interim president Sonia Gandhi's tenure is 'coming to an end', but that does not mean the party is becoming 'headless' at the stroke of the midnight.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X