ಕೊರೊನಾ ಕುರಿತು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ವಿಡಿಯೋ ಸಂದೇಶ
ನವದೆಹಲಿ, ಏಪ್ರಿಲ್ 14: ಕೊರೊನಾ ಲಾಕ್‌ಡೌನ್ ಕುರಿತು ಪ್ರಧಾನಿ ನರೇಂದ್ರ ಮೋದಿ ಭಾಷಣಕ್ಕೂ ಮುನ್ನ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ವಿಡಿಯೋ ಸಂದೇಶ ನೀಡಿದ್ದಾರೆ.
ಕೊವಿಡ್ 19 ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡುತ್ತಿರುವ ಕೊರೊನಾ ವೀರರಿಗೆ ಸೋನಿಯಾ ಗಾಂಧಿ ಅಭಿನಂದನೆ ಸಲ್ಲಿಸಿದ್ದಾರೆ.
ವೈದ್ಯರು, ಪೊಲೀಸರು, ಪೌರಕಾರ್ಮಿಕರ ಕಾರ್ಯಾಚರಣೆಗೆ ಪ್ರಶಂಸನೀಯ ನುಡಿಗಳನ್ನಾಡಿದ್ದಾರೆ. ಜನರು ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ಕೊರೊನಾದಿಂದ ನಿಮ್ಮನ್ನು ರಕ್ಷಿಸಿಕೊಳ್ಳಿ ಎಂದು ಕರೆ ನೀಡಿದ್ದಾರೆ.

ಲಾಕ್‌ಡೌನ್ ಯಶಸ್ವಿಗೊಳಿಸಲು ಪೊಲೀಸರು, ಯೋಧರು, ವೈದ್ಯರು ಕಾರ್ಯ ನಿರ್ವಹಿಸುತ್ತಿದ್ದಾರೆ. ಸರ್ಕಾರದ ಅಧಿಕಾರಿಗಳು ಕೂಡ ಹಗಲುವ ರಾತ್ರಿ ಕಷ್ಟ ಪಡುತ್ತಿದ್ದಾರೆ. ನಾವು ಅವರಿಗೆ ಸಹಕಾರ ನೀಡದಿದ್ದರೆ , ಅವರು ತಮ್ಮ ಕರ್ತವ್ಯ ನಿರ್ವಹಿಸಲು ಸಾಧ್ಯವಿಲ್ಲ.
ಇಷ್ಟು ಜನರ ಪ್ರಾಣಕ್ಕಾಗಿ ಹೋರಾಡುತ್ತಿರುವ ವೈದ್ಯರ ಜೊತೆ ಅನುಚಿತವಾಗಿ ವರ್ತಿಸುವುದು ನಮ್ಮ ಸಂಸ್ಕೃತಿಗೆ ವಿರುದ್ಧವಾದದ್ದು, ಕೊರೊನಾ ವಿರುದ್ಧದ ಹೋರಾಟದಲ್ಲಿ ಸರ್ಕಾರದ ಜೊತೆ ಕೈಜೋಡಿಸೋಣ ಎಂದು ವಿಡಿಯೋ ಮೂಲಕ ಕರೆ ನೀಡಿದ್ದಾರೆ.
कांग्रेस अध्यक्षा श्रीमती सोनिया गांधी का देश के नाम संदेश:-
— Congress (@INCIndia) April 14, 2020
कोरोना संकट में डॉक्टर्स, सफाईकर्मियों, पुलिस सहित सरकारी अधिकारियों के डटे रहने से बड़ी "देशभक्ति" कोई नहीं है। हम एकता, अनुशासन और आत्मबल के भाव से कोरोना को परास्त करेंगे। धैर्य एवं संयम के लिए देशवासियों का धन्यवाद। pic.twitter.com/Sl4zkKURTv
ರಾಜ್ಯಗಳಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿರಲಿ ಅಥವಾ ವಿರೋಧ ಪಕ್ಷವಿರಲಿ , ಹೋರಾಟದಲ್ಲಿ ಎಲ್ಲಾ ಕಾಂಗ್ರೆಸ್ ಕಾರ್ಯಕರ್ತರೂ ನಿಮ್ಮೊಂದಿಗಿದ್ದಾರೆ ಎಂದು ಭರವಸೆಯ ಮಾತುಗಳನ್ನಾಡಿದ್ದಾರೆ.












Click it and Unblock the Notifications